Gold Rate Today: ನಿಶ್ಚಿತಾರ್ಥಕ್ಕಾಗಿ ಚಿನ್ನದ ಉಂಗುರ ಕೊಳ್ಳಬೇಕೆ? ಇಂದು ಆಭರಣದ ಬೆಲೆ ಕೊಂಚ ಇಳಿಕೆಯಾಗಿದೆ ಪರಿಶೀಲಿಸಿ

Gold Price Today: ಅದೆಷ್ಟೋ ವರ್ಷಗಳಿಂದ ಚಿನ್ನ ಖರೀದಿಸಬೇಕೆಂದು ಹಣವನ್ನು ಕೂಡಿಟ್ಟು, ಬೇರೆಲ್ಲೂ ಖರ್ಚು ಮಾಡದೇ ಕಾಪಾಡಿಕೊಂಡು ಬಂದಿರುತ್ತೀರಿ. ಹೀಗಿರಾಗ ಪ್ರತಿನಿತ್ಯವೂ ಆಭರಣಗಳ ಬೆಲೆ ಎಷ್ಟಿದೆ? ಎಂಬ ಕುತೂಹಲ ಇದ್ದೇ ಇರುತ್ತದೆ.

Gold Rate Today: ನಿಶ್ಚಿತಾರ್ಥಕ್ಕಾಗಿ ಚಿನ್ನದ ಉಂಗುರ ಕೊಳ್ಳಬೇಕೆ? ಇಂದು ಆಭರಣದ ಬೆಲೆ ಕೊಂಚ ಇಳಿಕೆಯಾಗಿದೆ ಪರಿಶೀಲಿಸಿ
ಚಿನ್ನದ ಉಂಗುರ
Follow us
TV9 Web
| Updated By: shruti hegde

Updated on: Aug 04, 2021 | 8:55 AM

Gold Silver Rate Today | ಬೆಂಗಳೂರು: ಆಭರಣ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಅದರಲ್ಲಿಯೂ ಬಂಗಾರ ಅಂದಾಕ್ಷಣ ಕೇಳಲೂ ಹಿತ, ಖರೀದಿಸುವ ಆಸೆ! ಆದರೆ ದರ ಮಾತ್ರ ಇಳಿಕೆಯತ್ತ ಸಾಗಿರಬೇಕು ಅಂದನಿಸುವುದು ತಪ್ಪೇನಲ್ಲ. ಅದೆಷ್ಟೋ ವರ್ಷಗಳಿಂದ ಚಿನ್ನ ಖರೀದಿಸಬೇಕೆಂದು ಹಣವನ್ನು ಕೂಡಿಟ್ಟು, ಬೇರೆಲ್ಲೂ ಖರ್ಚು ಮಾಡದೇ ಕಾಪಾಡಿಕೊಂಡು ಬಂದಿರುತ್ತೀರಿ. ಹೀಗಿರಾಗ ಪ್ರತಿನಿತ್ಯವೂ ಆಭರಣಗಳ ಬೆಲೆ ಎಷ್ಟಿದೆ? ಎಂಬ ಕುತೂಹಲ ಇದ್ದೇ ಇರುತ್ತದೆ. ಇಂದು ನಿಮ್ಮೂರಿನ ಮಾರುಕಟ್ಟೆಯಲ್ಲಿ ಚಿನ್ನ(Gold Price), ಬೆಳ್ಳಿ ದರ (Silver Price) ವಿವರ ಹೇಗಿದೆ ಎಂಬುದನ್ನು ಪರಿಶೀಲಿಸಿ.

ಮನೆಯಲ್ಲಿ ಮದುವೆಯ ಸಡಗರ ಇದ್ದರಂತೂ ಚಿನ್ನ ಕೊಳ್ಳಲೇಬೇಕು ಎಂದು ನಿರ್ಧರಿಸಿರಬಹುದು. ವಿಶೇಷವಾಗಿ ಮನೆಯಲ್ಲಿ ಮಗನ ಅಥವಾ ಮಗಳ ನಿಶ್ಚಿತಾರ್ಥದ ಶುಭಾರಂಭವನ್ನು ನಿಶ್ಚಯಿಸಿರಬಹುದು. ಈ ರೀತಿಯ ಪ್ಲಾನ್​ಗಳಿದ್ದರೆ ಚಿನ್ನ ಖರೀದಿಸಬೇಕು ಎಂಬ ಆಸೆ ಹುಟ್ಟುವುದು ಸಹಜ. ಇಂದು ಚಿನ್ನದ ದರದಲ್ಲಿ ಅಲ್ಪ ಇಳಿಕೆಯಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,890 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,48,900 ರೂಪಾಯಿ ಇದೆ. ಸುಮಾರು 100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,970 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನಕ್ಕೆ 4,89,700 ರೂಪಾಯಿ ನಿಗದಿ ಮಾಡಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,200 ರೂಪಾಯಿ ಇದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,440 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,94,400 ರೂಪಾಯಿಗೆ ಇಳಿಕೆಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,890 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,48,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,970 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,800 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡು ಬಂದಿದೆ.

ಬೆಳ್ಳಿ ದರ ವಿವರ ಬೆಳ್ಳಿ ದರವೂ ಸಹ ಇಂದು ಇಳಿಕೆಯ ಹಾದಿ ಹಿಡಿದಿದ್ದು ಹೈದರಾಬಾದ್​ನಲ್ಲಿ ಕೆಜಿ ಬೆಳ್ಳಿಗೆ 72,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 200 ರೂಪಾಯಿ ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿಗೆ 72,500 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಆದರೆ ಬೆಂಗಳೂರಿನಲ್ಲಿ ಇಂದು ಬೆಳ್ಳಿ ದರ ಕೊಂಚ ಏರಿಕೆ ಆಗಿದ್ದು ಕೆಜಿ ಬೆಳ್ಳಿಗೆ 67,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ವ್ಯತ್ಯಾಸದಲ್ಲಿ 300 ರೂಪಾಯಿ ಏರಿಕೆ ಆಗಿದೆ.

ನಿನ್ನೆ ಕೆಲವೆಡೆ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ಇನ್ನು ಕೆಲವೆಡೆ ಇಳಿಕೆಯತ್ತ ಸಾಗಿತ್ತು. ಆದರೆ ಇಂದು ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿದೆ. ಅದೇ ರೀತಿ ಕೆಲವೆಡೆ ಬೆಳ್ಳಿ ದರದಲ್ಲಿಯೂ ಸಹ ಇಳಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಏರಿಕೆ; ನಿಮ್ಮೂರಿನಲ್ಲಿ ಆಭರಣದ ಬೆಲೆ ಎಷ್ಟಿದೆ?

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ! ಆಭರಣ ಕೊಳ್ಳುವ ವಿಚಾರವಿದ್ದರೆ ದರ ವಿವರ ಒಮ್ಮೆ ಗಮನಿಸಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ