Gold, Silver Price: ಬಜೆಟ್ ದಿನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ

Gold and Silver Price in Bangalore: ಕಳೆದ ಕೆಲವು ದಿನಗಳಿಂದ ಏರಿಕೆಯ ನಾಗಾಲೋಟ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ಬೆಲೆ ಬಜೆಟ್​​ ಮಂಡನೆ ದಿನ ಭಾರಿ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ಸಂತದಸ ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ದರ ಇಳಿಕೆಗೆ ಕಾರಣವೇನು? ಮಾಹಿತಿ ಇಲ್ಲಿದೆ.

Gold, Silver Price: ಬಜೆಟ್ ದಿನವೇ ಸಿಹಿ ಸುದ್ದಿ, ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆ
ಸಾಂದರ್ಭಿಕ ಚಿತ್ರ
Edited By:

Updated on: Feb 01, 2026 | 2:27 PM

ನವದೆಹಲಿ, ಫೆಬ್ರವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ (Union Budget 2026) ಮಂಡಿಸುವುದಕ್ಕೂ ಕೆಲವೇ ಕ್ಷಣ ಮುನ್ನವೇ, ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ (Gold Price) ಇಂದು (ಫೆಬ್ರವರಿ 1, 2026) ಗಮನಾರ್ಹ ಇಳಿಕೆ ಕಂಡುಬಂದಿದೆ.

ಬೆಂಗಳೂರಿನಲ್ಲೆಷ್ಟಿದೆ ಚಿನ್ನದ ದರ?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 1,47,200 ರೂ. ಆಗಿದೆ. ಅದೇ ರೀತಿ, 24 ಕ್ಯಾರೆಟ್‌ನ (ಅಪರಂಜಿ) 10 ಗ್ರಾಂ ಚಿನ್ನದ ಬೆಲೆ 1,60,580 ರೂ. ನಷ್ಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 700 ರಿಂದ 900 ರೂ. ವರೆಗೆ ಇಳಿಕೆಯಾಗಿರುವುದು ಹೂಡಿಕೆದಾರರಲ್ಲಿ ಮತ್ತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.

ಬೆಳ್ಳಿ ಬೆಲೆಯೂ ಇಳಿಕೆ

ಚಿನ್ನದ ಹಾದಿಯನ್ನೇ ಹಿಡಿದಿರುವ ಬೆಳ್ಳಿಯ ಬೆಲೆಯೂ ಇಂದು ದಾಖಲೆ ಮಟ್ಟದಲ್ಲಿ ಕುಸಿದಿದೆ. ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ ಬರೋಬ್ಬರಿ 45,000 ರೂ.ನಷ್ಟು ಇಳಿಕೆಯಾಗಿ 3,50,000 ರೂ.ಗೆ ತಲುಪಿದೆ. ಅಂದರೆ ಪ್ರತಿ ಗ್ರಾಂ ಬೆಳ್ಳಿಯ ಬೆಲೆ 350 ರೂ. ಆಗಿದೆ.

ಚಿನ್ನ, ಬೆಳ್ಳಿ ಬೆಲೆ ಇಳಿಕೆಗೆ ಕಾರಣಗಳೇನು?

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳು ಮತ್ತು ಹೂಡಿಕೆದಾರರು ಲಾಭಾಂಶವನ್ನು ಹಿಂಪಡೆಯುತ್ತಿರುವುದು ಈ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ. ಇದರೊಂದಿಗೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಆಮದು ಸುಂಕದ ಕುರಿತು ತೆಗೆದುಕೊಳ್ಳಬಹುದಾದ ನಿರ್ಧಾರಗಳ ನಿರೀಕ್ಷೆಯೂ ಈ ಮಾರುಕಟ್ಟೆ ಚಲನೆಗೆ ಕಾರಣವಾಗಿದೆ.

ಮದುವೆ ಸೀಸನ್ ಆರಂಭವಾಗುತ್ತಿರುವ ಈ ಸಮಯದಲ್ಲಿ ಬೆಲೆ ಇಳಿಕೆಯಾಗಿರುವುದು ಜನಸಾಮಾನ್ಯರಿಗೆ ನಿರಾಳ ತಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:10 am, Sun, 1 February 26

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us