AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಗಣೇಶ ಚತುರ್ಥಿ ದಿನದಂದು ಇಳಿಕೆ ಕಂಡ ಚಿನ್ನ, ಬೆಳ್ಳಿ ದರ; ಚಿನ್ನಾಭರಣ ಕೊಳ್ಳಲು ಗ್ರಾಹಕರಿಗೆ ಒಳ್ಳೆಯ ಸಮಯ

Gold Rate Today: ಸುಂದರವಾಗಿ ಅಲಂಕಾರಗೊಳ್ಳಬೇಕು ಎಂಬ ಆಸೆ ಒಂದು ಕಡೆಯಾದರೆ, ಹಬ್ಬಕ್ಕೆ ಚಿನ್ನಾಭರಣ ಖರೀದಿಸಬೇಕು ಎಂಬ ಪದ್ಧತಿಯೂ ಕೆಲವೆಡೆ ಇದೆ. ಶುಭ ದಿನದಂದು ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ಸಹ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದೆ.

Gold Price Today: ಗಣೇಶ ಚತುರ್ಥಿ ದಿನದಂದು ಇಳಿಕೆ ಕಂಡ ಚಿನ್ನ, ಬೆಳ್ಳಿ ದರ; ಚಿನ್ನಾಭರಣ ಕೊಳ್ಳಲು ಗ್ರಾಹಕರಿಗೆ ಒಳ್ಳೆಯ ಸಮಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 10, 2021 | 7:30 AM

Share

Gold Silver Price Today | ಬೆಂಗಳೂರು: ಇಂದು ಎಲ್ಲೆಡೆ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಎಲ್ಲ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರ, ಸಂಭ್ರಮ.  ಸುಂದರವಾಗಿ ಅಲಂಕಾರಗೊಳ್ಳಬೇಕು ಎಂಬ ಆಸೆ ಒಂದು ಕಡೆಯಾದರೆ, ಹಬ್ಬಕ್ಕೆ ಚಿನ್ನಾಭರಣ ಖರೀದಿಸಬೇಕು ಎಂಬ ಪದ್ಧತಿಯೂ ಕೆಲವೆಡೆ ಇದೆ. ಶುಭ ದಿನದಂದು ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಇಂದು ಸಹ ( ಸೆಪ್ಟೆಂಬರ್​​ 10, ಶುಕ್ರವಾರ) ಚಿನ್ನ (Gold Price), ಬೆಳ್ಳಿ ದರ (Silver Price) ಇಳಿಕೆ ಆಗಿದೆ. ಕಳೆದ ಕೆಲವು ದಿನಗಳಿಂದ ಆಭರಣಗಳ ಬೆಲೆ ಇಲಿಕೆಯತ್ತ ಸಾಗಿದ್ದು, ಚಿನ್ನಾಭರಣ ಖರೀದಿಸಲು ಇಂದು ಸುಸಮಯ.

ಶುಭ ದಿನದಂದು ಚಿನ್ನಾ ಆಭರಣಗಳನ್ನು ಖರೀದಿಸಬೇಕು ಎಂಬ ಆಸೆ ಇರುವುದು ಸಹಜ. ಹಬ್ಬದ ಜತೆಗೆ ಶುಭ ಶುಕ್ರವಾರವೂ ಆಗಿರುವುದರಿಂದ ಚಿನ್ನವನ್ನು ಖರೀದಿಸಿಟ್ಟುಕೊಳ್ಳುವುದರ ಕುರಿತಾಗಿ ಯೋಚಿಸಿರಬಹುದು. ಜತೆಗೆ ಚಿನ್ನಾಭರಣ ಕಷ್ಟಕಾಲದಲ್ಲಿ ನೆರವಾಗುವುದರಿಂದ ಖರೀದಿಸುವ ಕುರಿತಾಗಿ ಯೋಚಿಸಿದ್ದರೆ ಇಂದು ಎಲ್ಲೆಡೆ ಚಿನ್ನ, ಬೆಳ್ಳಿ ದರ ಇಳಿಕೆಯಾಗಿದೆ. ಅಷ್ಟೊಂದು ಮೌಲ್ಯದ ಆಭರಣಗಳನ್ನು ಕೊಳ್ಳುವಾಗ ಶುಭ ದಿನದಂದೇ ಖರೀದಿಸಬೇಕು ಎಂಬ ನಂಬಿಕೆಯೂ ಕೆಲವರಿಗೆ ಇರುವುದರಿಂದ ಇಂದು ಚಿನ್ನ, ಬೆಳ್ಳಿ ಖರೀದಿಸಲು ಸುಸಮಯ. ದರ ಕೂಡಾ ಇಳಿಕೆಯಾಗಿದೆ, ಜತೆಗೆ ಶುಭ ದಿನವೂ ಹೌದು.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,40,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,000 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 1,100 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 63,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ 44,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,800 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,370 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,000 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿಯು ಸಹ ಇಳಿಕೆ ಕಂಡು ಬಂದಿದ್ದು, 800 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 68,300 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,60,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿಗೆ 63,900 ರೂಪಾಯಿ ನಿಗದಿಯಾಗಿದೆ. ಸುಮಾರು 900 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Rate Today: ಇಂದು ಸಹ ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!

Gold Rate Today: ಚಿನ್ನದ ದರ ಕೊಂಚ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

(Gold Silver Price fall down Today Ganesha Chaturthi On 2021 September 10 check gold price in Bangalore Delhi Mumbai And Major City)

Published On - 7:15 am, Fri, 10 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್