AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಗಣೇಶ ಹಬ್ಬಕ್ಕೆಂದು ಆಭರಣ ಕೊಳ್ಳುವುದಾದರೆ ಸುಸಮಯ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Rate Today: ಗಣೇಶ ಹಬ್ಬಕ್ಕೆಂದು ಚಿನ್ನಾಭರಣ ಖರೀದಿಸುವ ಪ್ಲಾನ್​ ಮಾಡಿರಬಹುದು, ಇಲ್ಲವೇ ಪೂಜಾ ಸಾಮಗ್ರಿಗಳಿಗಾಗಿ ಬೆಳ್ಳಿಯನ್ನು ಕೊಳ್ಳಬೇಕೆಂದು ಯೋಚಿಸಿರಬಹುದು. ಚಿನ್ನ, ದರ ಇಳಿಕೆ ಕಂಡಿರುವುದು ಗ್ರಾಹಕರಿಗೆ ಸಮಾಧಾನ ಖುಷಿ ನೀಡುವ ವಿಚಾರ.

Gold Price Today: ಗಣೇಶ ಹಬ್ಬಕ್ಕೆಂದು ಆಭರಣ ಕೊಳ್ಳುವುದಾದರೆ ಸುಸಮಯ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 09, 2021 | 8:21 AM

Share

Gold Silver Price Today | ಬೆಂಗಳೂರು: ನಿನ್ನೆ ಕೂಡ ಚಿನ್ನ, ಬೆಳ್ಳಿ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು. ಅದೇ ರೀತಿ ಇಂದು ಸಹ ( ಸೆಪ್ಟೆಂಬರ್​ 9, ಗುರುವಾರ) ಚಿನ್ನ (Gold Price), ಬೆಳ್ಳಿ ದರದಲ್ಲಿ (Silver Price) ಇಳಿಕೆಯಾಗಿದೆ. ಗಣೇಶ ಹಬ್ಬಕ್ಕೆಂದು ಚಿನ್ನಾಭರಣ ಖರೀದಿಸುವ ಪ್ಲಾನ್​ ಮಾಡಿರಬಹುದು, ಇಲ್ಲವೇ ಪೂಜಾ ಸಾಮಗ್ರಿಗಳಿಗಾಗಿ ಬೆಳ್ಳಿಯನ್ನು ಕೊಳ್ಳಬೇಕೆಂದು ಯೋಚಿಸಿರಬಹುದು. ಚಿನ್ನ, ದರ ಇಳಿಕೆ ಕಂಡಿರುವುದು ಗ್ರಾಹಕರಿಗೆ ಸಮಾಧಾನ ಖುಷಿ ನೀಡುವ ವಿಚಾರ. ಹಾಗಾಗಿ ಚಿನ್ನ, ಬೆಳ್ಳಿ ಆಭರಣಗಳನ್ನು ಅಥವಾ ಸಾಮಗ್ರಿಗಳನ್ನು ಖರೀಸಿದುವ ಕುರಿತಾಗಿ ಯೋಚಿಸಬಹುದು.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,100 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,100 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 3,300 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಸಭೆ, ಸಮಾರಂಭದ ಜತೆಗೆ ಹಬ್ಬ- ಹರಿದಿನಗಳು ಎದುರಿಗಿದ್ದಾಗ ಆಭರಣ ಕೊಳ್ಳಬೇಕು ಅನ್ನಿಸುವುದು ಸಹಜ. ಹಬ್ಬದ ಶುಭ ದಿನದಲ್ಲಿ ರಂಗು ರಂಗಿನ ಉಡುಗೆ ಧರಿಸಿ ಚಿನ್ನಾಭರಣ ತೊಟ್ಟು ಅಲಂಕಾರಗೊಳ್ಳಬೇಕು ಎಂಬೆಲ್ಲಾ ಆಸೆಗಳಿರಬಹುದು. ಇದು ಒಂದು ಕಡೆಯಾದರೆ, ಚಿನ್ನಾಭರಣ ಕಷ್ಟಕಾಲದಲ್ಲಿ ನೆರವಾಗುವುದರಿಂದ ಕೈಯ್ಯಲ್ಲಿ ಹಣವಿದ್ದಾಗ ಚಿನ್ನವನ್ನು ಖರೀದಿಸಿಡುವವರೂ ಇದ್ದಾರೆ. ಹಾಗಾಗಿಯೇ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ಕುತೂಹಲ ಕೆರಳುವುದು.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,520 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,45,200 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 2,200 ರೂಪಾಯಿ ಇಳಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ48,570 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,700 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 2,400 ರೂಪಾಯಿ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 69,100 ರೂಪಾಯಿ ಇದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,250 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಇಳಿಕೆ ಕಂಡು ಬಂದಿದೆ. 100 ಗ್ರಾಂ ಚಿನ್ನದ ದರ 4,62,500 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,500 ರೂಪಾಯಿ ನಿಗದಿಯಾಗಿದೆ. ಸುಮಾರು 3,400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದ್ದು, 200 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!

Gold Rate Today: ಇಳಿಕೆಯ ಹಾದಿ ಹಿಡಿದ ಚಿನ್ನದ ದರ; ಆಭರಣ ಖರೀದಿಸಲು ಸುಸಮಯ

(Gold Silver Price fall down Today On 2021 September 9 check gold price in Bangalore Delhi Mumbai And Major City)

Published On - 7:57 am, Thu, 9 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್