Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Super App A: ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್, ವಿಶೇಷತೆಗಳು ಹೀಗಿವೆ

Google For India 2023: ಈ ಅಪ್ಲಿಕೇಶನ್‌ನ ಸಹಾಯದಿಂದ ನಮ್ಮ ಸುತ್ತಮುತ್ತ ಯಾವ ಆಯುಷ್ಮಾನ್ ಭಾರತ್ ಆಸ್ಪತ್ರೆಗಳಿವೆ ಎಂಬುದನ್ನು ಸಹ ನಾವು ತಿಳಿದುಕೊಳ್ಳಬಹುದು. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಎಲ್ಲಿ ಸಿಗುತ್ತದೆ ಎಂಬುದನ್ನು ಈ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು. ಈ ಸೂಪರ್ ಆಪ್ ನ ಮತ್ತೊಂದು ವಿಶೇಷತೆ ಏನೆಂದರೆ ಇದನ್ನು ಬಹು ಭಾಷಾಗಳಿಗೆ ಅನ್ವಯವಾಗುವಂತೆ ತಯಾರಿಸಲಾಗಿದೆ.

Google Super App A: ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್, ವಿಶೇಷತೆಗಳು ಹೀಗಿವೆ
ಜನಸಾಮಾನ್ಯರಿಗಾಗಿ ಗೂಗಲ್ ಸೂಪರ್ ಆಪ್
Follow us
ಸಾಧು ಶ್ರೀನಾಥ್​
|

Updated on: Oct 21, 2023 | 1:52 PM

ಗೂಗಲ್ ಸಾಮಾನ್ಯ ಜನರಿಗಾಗಿ ಒಂದು ಸೂಪರ್ ಆಪ್ (Super App ‘A’) ಅನ್ನು ಸಿದ್ಧಗೊಳಿಸಿದೆ. ಆಕ್ಸಿಸ್ ಮೈ ಇಂಡಿಯಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ಅನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಸಚಿವ ಅಶ್ವಿನಿ ವೈಷ್ಣವ್ (Union Minister Ashwini Vaishnaw) ಅವರು ಬಿಡುಗಡೆ ಮಾಡಿದರು. ಅವರು ಗೂಗಲ್ ಫಾರ್ ಇಂಡಿಯಾ 2023 (Google For India 2023) ಈವೆಂಟ್‌ನಲ್ಲಿ ಭಾಗವಹಿಸಿ, ಈ ಸೂಪರ್ ಅಪ್ಲಿಕೇಶನ್ ಅನ್ನು ಅನಾವರಣಗೊಳಿಸಿದರು.

ಕೃತಕ ಬುದ್ಧಿಮತ್ತೆಯ ಸಹಾಯದಿಂದ ಗೂಗಲ್ ಈ ಅಪ್ಲಿಕೇಶನ್ ಅನ್ನು ರಚಿಸಿದೆ. ಈ ಸೂಪರ್ ಅಪ್ಲಿಕೇಶನ್ ಲಾಗಿನ್ ಮಾಡಲು, ನೀವು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಈ ಅಪ್ಲಿಕೇಶನ್ ಜನರಿಗೆ ಸರ್ಕಾರದ ಯೋಜನೆಗಳು ಮತ್ತು ಇತರ ಸೇವೆಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಒದಗಿಸುತ್ತದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ವರ್ಚುವಲ್ ಸಭೆ: ಭಾರತದ ಅಭಿವೃದ್ಧಿಗೆ ಗೂಗಲ್‌ ಬದ್ಧ ಎಂದು ಒತ್ತಿ ಹೇಳಿದ ಸುಂದರ್ ಪಿಚೈ, AI ಶೃಂಗಸಭೆಗೆ ಗೂಗಲ್​​ಗೆ ಆಹ್ವಾನ

ಆಕ್ಸಿಸ್ ಮೈ ಇಂಡಿಯಾ ಮತ್ತು ಗೂಗಲ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಈ ಆ್ಯಪ್‌ನ ವಿಶೇಷತೆ ಎಂದರೆ ಈ ಆಪ್ ವಾಯ್ಸ್ ಆಕ್ಟಿವೇಟೆಡ್ ಪರ್ಸನಲ್ ಅಸಿಸ್ಟೆಂಟ್ ಸೌಲಭ್ಯವನ್ನು ಹೊಂದಿದೆ. ಇಷ್ಟೇ ಅಲ್ಲ, ಈ ಆಪ್ ಮೂಲಕ ನೀವು ಆಯುಷ್ಮಾನ್ ಭಾರತ್, ಕೃಷಿ, ಸರ್ಕಾರಿ ಯೋಜನೆಗಳು, ಉದ್ಯೋಗ ಇತ್ಯಾದಿಗಳ ಬಗ್ಗೆ ಸಂಪೂರ್ಣ ಜ್ಞಾನವನ್ನು ಪಡೆಯಬಹುದು.

ಉದಾಹರಣೆಗೆ, ಈ ಅಪ್ಲಿಕೇಶನ್‌ನ ಸಹಾಯದಿಂದ ನಮ್ಮ ಸುತ್ತಮುತ್ತ ಯಾವ ಆಯುಷ್ಮಾನ್ ಭಾರತ್ ಆಸ್ಪತ್ರೆಗಳಿವೆ ಎಂಬುದನ್ನು ಸಹ ನಾವು ತಿಳಿದುಕೊಳ್ಳಬಹುದು. ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಎಲ್ಲಿ ಸಿಗುತ್ತದೆ ಎಂಬುದನ್ನು ಈ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು. ಈ ಸೂಪರ್ ಆಪ್ ನ ಮತ್ತೊಂದು ವಿಶೇಷತೆ ಏನೆಂದರೆ ಇದನ್ನು ಬಹು ಭಾಷಾಗಳಿಗೆ ಅನ್ವಯವಾಗುವಂತೆ ತಯಾರಿಸಲಾಗಿದೆ. ಈ ಅಪ್ಲಿಕೇಶನ್ 13 ವಿವಿಧ ಭಾಷೆಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಏಕೆಂದರೆ ಇದನ್ನು ಸಾಮಾನ್ಯ ಜನರ ಅನುಕೂಲಕ್ಕಾಗಿ ಮಾಡಲಾಗಿದೆ. ಅಂದರೆ ನಮಗೆ ಇಷ್ಟವಾದ ಭಾಷೆಯಲ್ಲಿ ಮಾಹಿತಿ ಪಡೆಯಬಹುದು. ಈ ನಡುವೆ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಈ ಸೂಪರ್ ಆಪ್ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಸುಂದರ್ ಪಿಚೈ (Sundar Pichai) ಟ್ವೀಟ್..

ನವದೆಹಲಿಯಲ್ಲಿ ನಡೆದ ಒಂಬತ್ತನೇ ವಾರ್ಷಿಕ ಗೂಗಲ್ ಫಾರ್ ಇಂಡಿಯಾ ಈವೆಂಟ್‌ನಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಇಂಡಿಯಾ ಉಪಾಧ್ಯಕ್ಷ ಸಂಜಯ್ ಗುಪ್ತಾ ಘೋಷಿಸಿದ್ದಾರೆ. ಈವೆಂಟ್‌ನಲ್ಲಿ, ಅವರು ಹೊಸ ಉತ್ಪಾದಕ AI-ಚಾಲಿತ ಪಾಲುದಾರಿಕೆಗಳು ಮತ್ತು ಹೂಡಿಕೆಗಳನ್ನು ಘೋಷಿಸಿದರು.

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ