AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ

Government blocks 242 illegal betting, gambling website links: ಕೇಂದ್ರ ಸರ್ಕಾರ ಇವತ್ತು (ಜನವರಿ 16) ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದೆ. 2025ರ ಆಗಸ್ಟ್​ನಲ್ಲಿ ಹೊಸ ಗೇಮಿಂಗ್ ಕಾಯ್ದೆ ಜಾರಿಯಾದ ಬಳಿಕ 7,800ಕ್ಕೂ ಅಧಿಕ ಇಂತಹ ಜಾಲತಾಣಗಳನ್ನು ಸರ್ಕಾರ ನಿರ್ಬಂಧಿಸಿದೆ. ಅಕ್ರಮ ಜೂಜು ಪ್ಲಾಟ್​ಫಾರ್ಮ್​ಗಳಿಂದ ಯುವಜನರು ಹಾಳಾಗುತ್ತಿರುವುದನ್ನು ತಡೆಯಲು ಸರ್ಕಾರ ಕಠಿಣ ಕಾನೂನು ರೂಪಿಸಿದೆ.

ಅಕ್ರಮ ಗ್ಯಾಂಬ್ಲಿಂಗ್ ದಂಧೆಗೆ ಕಡಿವಾಣ; ಕೆಲವೇ ತಿಂಗಳಲ್ಲಿ 7,800ಕ್ಕೂ ಹೆಚ್ಚು ವೆಬ್​ಸೈಟ್​ಗಳನ್ನು ಬ್ಲಾಕ್ ಮಾಡಿದ ಸರ್ಕಾರ
ಆನ್ಲೈನ್ ಗ್ಯಾಂಬ್ಲಿಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2026 | 6:55 PM

Share

ನವದೆಹಲಿ, ಜನವರಿ 16: ಭಾರತ ಸರ್ಕಾರ ಅಕ್ರಮ ಬೆಟ್ಟಿಂಗ್ ದಂದೆಗಳಿಗೆ (Illegal betting and Gambling) ಕಡಿವಾಣ ಹಾಕುವ ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಇವತ್ತು ಒಂದೇ ದಿನ 242 ಅಕ್ರಮ ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳ ಲಿಂಕ್​ಗಳನ್ನು ಬ್ಲಾಕ್ ಮಾಡಿದೆ. ಕಳೆದ ಕೆಲ ತಿಂಗಳಲ್ಲಿ ಸಾವಿರಾರು ಅಕ್ರಮ ಬೆಟ್ಟಿಂಗ್ ವೆಬ್​ಸೈಟ್​ಗಳನ್ನು ಸರ್ಕಾರ ನಿರ್ಬಂಧಿಸಿರುವುದು ಗಮನಾರ್ಹ.

2025ರ ಆಗಸ್ಟ್ ತಿಂಗಳಲ್ಲಿ ಆನ್ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದಿತು. ಆಗಿನಿಂದ ಇಲ್ಲಿಯವರೆಗೆ 7,800ಕ್ಕೂ ಅಧಿಕ ಅಕ್ರಮ ಬೆಟ್ಟಿಂಗ್ ಮತ್ತು ಜೂಜು (ಗ್ಯಾಂಬ್ಲಿಂಗ್) ಜಾಲತಾಣಗಳ ಲಿಂಕ್​ಗಳನ್ನು ಭಾರತದಲ್ಲಿ ಬ್ಲಾಕ್ ಮಾಡಲಾಗಿದೆ.

ಕಾಯ್ದೆ ಜಾರಿಯಾಗುವ ಮುನ್ನ, 2022ರಿಂದ 2025ರ ಜೂನ್​ವರೆಗೆ ಐಟಿ ಕಾಯ್ದೆಯ ಸೆಕ್ಷನ್ 69ಎ ಬಳಸಿ 1,524 ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್ ವೆಬ್​ಸೈಟ್​ಗಳು ಹಾಗೂ ಮೊಬೈಲ್ ಆ್ಯಪ್​ಗಳನ್ನು ಸರ್ಕಾರ ಬ್ಲಾಕ್ ಮಾಡಿತ್ತು. ಈಗ ಗೇಮಿಂಗ್ ಆ್ಯಕ್ಟ್ (Gaming Act 2025) ಜಾರಿಯಾಗಿ ನಾಲ್ಕೇ ತಿಂಗಳಲ್ಲಿ ಏಳು ಸಾವಿರಕ್ಕೂ ಅಧಿಕ ಜಾಲತಾಣಗಳನ್ನು ತಡೆಯಲಾಗಿರುವುದು ವಿಶೇಷ.

ಇದನ್ನೂ ಓದಿ: Solar: 2026ರಲ್ಲಿ ಭಾರತವಾಗಲಿದೆ ವಿಶ್ವದ ಎರಡನೇ ಅತಿದೊಡ್ಡ ಸೌರ ಮಾರುಕಟ್ಟೆ

ಬೆಟ್ಟಿಂಗ್ ಮತ್ತು ಗ್ಯಾಂಬ್ಲಿಂಗ್​ನಿಂದ ಯುವಜನರು ಅತಿಹೆಚ್ಚು ಹಾನಿಗೊಳಗಾಗುತ್ತಿದ್ದಾರೆ. ಬಹಳ ಜನರು ಸಾಕಷ್ಟು ಹಣ ಕಳೆದುಕೊಂಡು ತಮ್ಮ ಜೊತೆ ಕುಟುಂಬವನ್ನೂ ಬೀದಿಗೆ ಬೀಳುವಂತೆ ಮಾಡುತ್ತಿದ್ದಾರೆ. ಅಕ್ರಮವಾಗಿ ನಡೆಯುವ ಈ ಆನ್​ಲೈನ್ ಬೆಟ್ಟಿಂಗ್ ಪ್ಲಾಟ್​ಫಾರ್ಮ್​ಗಳಿಗೆ ಕಡಿವಾಣ ಹಾಕಿ ಜನರನ್ನು ರಕ್ಷಿಸಲು ಸರ್ಕಾರ ಪಣತೊಟ್ಟು ಕೆಲಸ ಮಾಡುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಆಸ್ತಿಗಾಗಿ 4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಪಾಪಿ ಅಣ್ಣ!
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಮದುವೆಗೆ ಏನಾದರೂ ತೊಂದ್ರೆ ಆದ್ರೆ ಗಿಲ್ಲಿಯೇ ಕಾರಣ; ನೇರವಾಗಿ ಹೇಳಿದ ಕಾವ್ಯಾ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಚುನಾವಣೆಯಲ್ಲಿ ಗೆಲುವು