AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು

Govt faces Rs 7,000 revenue loss in 15 days from excise duty cut on Petrol and Diesel: ಇರಾನ್ ಯುದ್ಧದ ಪರಿಣಾಮ ತೈಲಬೆಲೆಗಳು ಬ್ಯಾರಲ್​ಗೆ 100 ಡಾಲರ್​ಗಿಂತಲೂ ಹೆಚ್ಚಿವೆ. ಪೆಟ್ರೋಲ್, ಡೀಸಲ್ ಬೆಲೆ ಅನೇಕ ದೇಶಗಳಲ್ಲಿ ಸಾಕಷ್ಟು ಏರಿವೆ. ಭಾರತದಲ್ಲಿ ಇವುಗಳ ಬೆಲೆ ಏರಿಕೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಈ ಕ್ರಮದಿಂದ ಸರ್ಕಾರಕ್ಕೆ ಭಾರೀ ಆದಾಯನಷ್ಟವಾಗಲಿದೆ.

ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಎರಡೇ ವಾರದಲ್ಲಿ 7,000 ಕೋಟಿ ರೂ ಆದಾಯನಷ್ಟದ ಅಂದಾಜು
ಪೆಟ್ರೋಲ್Image Credit source: Dinamalar
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 27, 2026 | 7:04 PM

Share

ನವದೆಹಲಿ, ಮಾರ್ಚ್ 27: ಜನರಿಗೆ ತೈಲ ಬೆಲೆ ಏರಿಕೆಯ ಬಿಸಿ ತಾಗದಿರಲೆಂದು ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು (Excise Duty) ಕಡಿಮೆಗೊಳಿಸಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂ ಇಳಿಸಿದೆ. ಇದರಿಂದ ತೈಲ ಮಾರುಕಟ್ಟೆ ಕಂಪನಿಗಳಿಗೆ ಆಗಬಹುದಾಗಿದ್ದ ನಷ್ಟದ ಹೊರೆ ಕಡಿಮೆ ಆಗಲಿದೆ. ಜನಸಾಮಾನ್ಯರಿಗೆ ಪೆಟ್ರೋಲ್, ಡೀಸಲ್ ಬೆಲೆ (Petrol Price) ಏರಿಕೆಯ ಭಾರವೂ ತಪ್ಪಿದಂತಾಗುತ್ತದೆ.

ಅಬಕಾರಿ ಸುಂಕ ಇಳಿಕೆಯಿಂದ ಸರಕಾರದ ಆದಾಯಕ್ಕೆ ಸಾಕಷ್ಟು ನಷ್ಟ ಆಗಲಿದೆ. ಕೇಂದ್ರೀಯ ನೇರ ತೆರಿಗೆ ಮತ್ತು ಸುಂಕ ಮಂಡಳಿ ಛೇರ್ಮನ್ ವಿವೇಕ್ ಚತುರ್ವೇದಿ ಪ್ರಕಾರ, ಕೇವಲ 15 ದಿನದಲ್ಲಿ ಸರ್ಕಾರಕ್ಕೆ ಆಗುವ ಆದಾಯ ನಷ್ಟ ಬರೋಬ್ಬರಿ 7,000 ಕೋಟಿ ರೂ.

ಇದನ್ನೂ ಓದಿ: ರಷ್ಯನ್ ಎಲ್​ಎನ್​ಜಿಯನ್ನು ಖರೀದಿಸಲಿರುವ ಭಾರತ; ಎಲ್​ಪಿಜಿ, ಪಿಎನ್​ಜಿ, ಎಲ್​ಎನ್​ಜಿಗಿರುವ ವ್ಯತ್ಯಾಸಗಳೇನು?

ಆದರೆ, ತೈಲ ಮಾರುಕಟ್ಟೆ ಸಂಸ್ಥೆಗಳು ವಿಪರೀತ ನಷ್ಟ ಎದುರಿಸುವುದನ್ನು ತಪ್ಪಿಸಲು ಸರ್ಕಾರ ಅಬಕಾರಿ ಸುಂಕ ಇಳಿಸುವುದು ಅನಿವಾರ್ಯವಾಗಿತ್ತು. ಇಲ್ಲದಿದ್ದರೆ ಪೆಟ್ರೋಲ್, ಡೀಸಲ್ ಬೆಲೆಗಳನ್ನು ಏರಿಸಲು ಅವಕಾಶ ಕೊಡುವ ಒಂದು ಮಾರ್ಗ ಇತ್ತಾದರೂ ಅದರಿಂದ ಜನಸಾಮಾನ್ಯರಿಗೆ ನೇರವಾಗಿ ಬಿಸಿ ತಗುಲುತ್ತಿತ್ತು. ಹೀಗಾಗಿ, ಅಬಕಾರಿ ಸುಂಕವನ್ನು ಇಳಿಸಲು ಸರ್ಕಾರ ನಿರ್ಧರಿಸಿದೆ.

ಜಾಗತಿಕ ಕಚ್ಛಾ ತೈಲ ಬೆಲೆ ಇರಾನ್ ಯುದ್ಧಕ್ಕೆ ಮುನ್ನ ಒಂದು ಬ್ಯಾರಲ್​ಗೆ ಸುಮಾರು 60 ಡಾಲರ್ ಇತ್ತು. ಈಗ ಅದು 100 ಡಾಲರ್ ದಾಟಿ ಹೋಗಿದೆ. ಒಂದು ಹಂತದಲ್ಲಿ ಅದು 120 ಡಾಲರ್ ಗಡಿ ಮುಟ್ಟಿತ್ತು. ತೈಲ ಬೆಲೆ ಹೆಚ್ಚಿದಷ್ಟೂ ಒಎಂಸಿಗಳಿಗೆ ನಷ್ಟದ ಹೊರೆ ಹೆಚ್ಚುತ್ತಾ ಹೋಗುತ್ತದೆ. ಸರ್ಕಾರ ಪ್ರತೀ 15 ದಿನಗಳಿಗೊಮ್ಮೆ ಅಬಕಾರಿ ಸುಂಕಗಳನ್ನು ಪರಿಷ್ಕರಿಸಲೂ ನಿರ್ಧರಿಸಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಆಪರೇಷನ್ ಊರ್ಜಾ ಸುರಕ್ಷಾ; ಏನಿದು ವಿಶೇಷ ಕಾರ್ಯಾಚರಣೆ?

ಕೆಲ ದಿನಗಳ ಹಿಂದೆ ಖಾಸಗಿ ಪೆಟ್ರೋಲಿಯಂ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ ತನ್ನ ಪೆಟ್ರೋಲ್ ಮತ್ತು ಡೀಸಲ್ ದರಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ ಲೀಟರ್​ಗೆ 5 ರೂ ಹೆಚ್ಚಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!