Windfall Tax: ವಿಂಡ್​ಫಾಲ್ ಟ್ಯಾಕ್ಸ್ ರದ್ದತಿ, ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ

Petrol and diesel prices may get reduced: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿದಿರುವುದರಿಂದ ಪೆಟ್ರೋಲ್ ಬೆಲೆ ಇಳಿಕೆ ಆಗುವ ಸಾಧ್ಯತೆ ಇದೆ. ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ. ಹಾಗೆಯೇ, ಕಚ್ಚಾ ತೈಲದ ಮೇಲೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ಕೈಬಿಡುವ ಬಗ್ಗೆಯೂ ಸರ್ಕಾರ ಯೋಚಿಸುತ್ತಿದೆ.

Windfall Tax: ವಿಂಡ್​ಫಾಲ್ ಟ್ಯಾಕ್ಸ್ ರದ್ದತಿ, ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ
ಪೆಟ್ರೋಲ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 12, 2024 | 3:33 PM

ನವದೆಹಲಿ, ಸೆಪ್ಟೆಂಬರ್ 12: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆ ಆಗಿರುವುದರಿಂದ ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಇಳಿಸಲು ಸರ್ಕಾರ ಆಲೋಚಿಸುತ್ತಿರುವುದು ತಿಳಿದುಬಂದಿದೆ. ಪೆಟ್ರೋಲ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡ ಅವರು, ತೈಲ ಕಂಪನಿಗಳಿಗೆ ಹಾಕಲಾಗುವ ವಿಂಡ್​ಫಾಲ್ ತೆರಿಗೆಯನ್ನು ತೆಗೆದುಹಾಕುವ ಪ್ರಸ್ತಾಪವೊಂದು ಸರ್ಕಾರದ ಪರಾಮರ್ಶೆಯಲ್ಲಿರುವುದನ್ನು ತಿಳಿಸಿದ್ದಾರೆ.

ಏನಿದು ವಿಂಡ್​ಫಾಲ್ ಟ್ಯಾಕ್ಸ್?

ಇದು ಆದಾಯ ತೆರಿಗೆಯಲ್ಲಿನ ಕ್ಯಾಪಿಟಲ್ ಗೇಯ್ನ್ ಟ್ಯಾಕ್ಸ್ ರೀತಿಯಂಥದ್ದು. ಅಸ್ವಾಭಾವಿಕವಾಗಿ ಲಾಭ ಹೆಚ್ಚಳ ಆದಾಗ ವಿಂಡ್​ಫಾಲ್ ಟ್ಯಾಕ್ಸ್ ವಿಧಿಸಲಾಗುತ್ತದೆ. ಪೆಟ್ರೋಲಿಯಂ ಸೇರಿ ಕೆಲ ಉದ್ಯಮಗಳಲ್ಲಿ ಸರ್ಕಾರ ಈ ತೆರಿಗೆ ಹಾಕುತ್ತದೆ. 2022ರಲ್ಲಿ ಮೊದಲ ಬಾರಿಗೆ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಜಾರಿಗೆ ತಂದಿತು. ಜಾಗತಿಕ ತೈಲ ಬೆಲೆಯಲ್ಲಿ ದಿಢೀರ್ ಏರಿಳಿತಗಳಾಗಿ ತೈಲ ಕಂಪನಿಗಳು ದೊಡ್ಡ ಲಾಭ ಗಳಿಸಿದಾಗ ಅದಕ್ಕೆ ತೆರಿಗೆ ವಿಧಿಸಲೆಂದು ಇದನ್ನು ತರಲಾಗಿತ್ತು.

ಜಾಗತಿಕ ತೈಲ ಬೆಲೆಗಳ ಅನುಸಾರವಾಗಿ ತಿಂಗಳಿಗೆ ಎರಡು ಬಾರಿ ಸರ್ಕಾರ ವಿಂಡ್​ಫಾಲ್ ಟ್ಯಾಕ್ಸ್ ಅನ್ನು ಪರಿಷ್ಕರಿಸುತ್ತದೆ. ಈಗ ಪೂರ್ಣವಾಗಿ ಟ್ಯಾಕ್ಸ್ ತೆಗೆದುಹಾಕುವ ಪ್ರಸ್ತಾಪ ಸರ್ಕಾರದ ಮುಂದಿದೆ. ತೈಲ ಸಂಸ್ಕರಣಾ ಕಂಪನಿಗಳಿಗೆ ಲಾಭದ ಮಾರ್ಜಿನ್ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಂಡ್​ಫಾಲ್ ಟ್ಯಾಕ್ಸ್ ತೆಗೆದುಹಾಕಲು ಯೋಚಿಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಐದು ಲಕ್ಷ ಕವರೇಜ್ ನೀಡುವ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​ಗೆ ಅರ್ಜಿ ಸಲ್ಲಿಕೆ, ಅರ್ಹತೆ, ದಾಖಲೆ ಇತ್ಯಾದಿ ವಿವರ

ಪೆಟ್ರೋಲ್, ಡೀಸಲ್ ಬೆಲೆ ಇಳಿಕೆ ಸಾಧ್ಯತೆ

ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಸಾಕಷ್ಟು ಇಳಿಕೆ ಆಗಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸಲ್ ಇತ್ಯಾದಿ ಪೆಟ್ರೋಲಿಯಂ ಉತ್ಪನ್ನಗಳ ರೀಟೇಲ್ ಬೆಲೆಗಳನ್ನು ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ