AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂಕರಹಿತವಾಗಿ 10 ಲಕ್ಷ ಟನ್ ಕಚ್ಚಾ ಸಕ್ಕರೆ ಆಮದಿಗೆ ಅವಕಾಶ; ಸಕ್ಕರೆ ಬೆಲೆ ಏರಿಕೆ ತಡೆಯಲು ಸರ್ಕಾರದ ಕ್ರಮ

Govt permits imports of raw sugar, disallows hoarding of sugar: ಏರುತ್ತಿರುವ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಸರ್ಕಾರ ಸುಂಕರಹಿತವಾಗಿ ಕಚ್ಚಾ ಸಕ್ಕರೆ ಆಮದಿಗೆ ಅವಕಾಶ ಕೊಟ್ಟಿದೆ. ಯಾವುದೇ ಆಮದು ಸುಂಕ ಇಲ್ಲದೆ 10 ಲಕ್ಷ ಟನ್​ಗಳಷ್ಟು ಕಚ್ಚಾ ಸಕ್ಕರೆಯನ್ನು ಆಮದು ಮಾಡಿಕೊಳ್ಳಬಹುದು. ಅನಗತ್ಯವಾಗಿ ಸಕ್ಕರೆ ದಾಸ್ತಾನು ಮಾಡಿ ಕೃತಕವಾಗಿ ಬೆಲೆ ಏರಿಸುವ ಪ್ರಯತ್ನಕ್ಕೂ ಸರ್ಕಾರ ಕಡಿವಾಣ ಹಾಕಲು ನಿಯಮ ರೂಪಿಸಿದೆ.

ಸುಂಕರಹಿತವಾಗಿ 10 ಲಕ್ಷ ಟನ್ ಕಚ್ಚಾ ಸಕ್ಕರೆ ಆಮದಿಗೆ ಅವಕಾಶ; ಸಕ್ಕರೆ ಬೆಲೆ ಏರಿಕೆ ತಡೆಯಲು ಸರ್ಕಾರದ ಕ್ರಮ
ಸಕ್ಕರೆImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 25, 2026 | 11:53 AM

Share

ನವದೆಹಲಿ, ಆಗಸ್ಟ್ 25: ಸಾಲು-ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ಕರೆ ಬೆಲೆ ಏರಿಕೆಯಾಗುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯವು 10 ಲಕ್ಷ ಮೆಟ್ರಿಕ್ ಟನ್ ಕಚ್ಚಾ ಸಕ್ಕರೆಯನ್ನು (Raw Sugar) ಯಾವುದೇ ಆಮದು ಸುಂಕವಿಲ್ಲದೆ (Zero Duty) ಆಮದು ಮಾಡಿಕೊಳ್ಳಲು ಅನುಮತಿ ನೀಡಿದೆ. ಆಮದು ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆಗಸ್ಟ್‌ನಿಂದ ಅಕ್ಟೋಬರ್ 31 ರವರೆಗೆ (ಎರಡು ತಿಂಗಳ ಕಾಲಾವಧಿ) ಕಾಲಾವಕಾಶ ನೀಡಲಾಗಿದೆ.

ಭಾರತವು ಸಕ್ಕರೆಯನ್ನು ಆಮದು ಮಾಡಿಕೊಳ್ಳುತ್ತಿರುವುದು ಕಳೆದ ಸುಮಾರು 10 ವರ್ಷಗಳಲ್ಲಿ (2016-17ರ ನಂತರ) ಇದೇ ಮೊದಲ ಬಾರಿಯಾಗಿದೆ. ಕಚ್ಚಾ ಸಕ್ಕರೆ ಆಮದು ಮಾಡಿಕೊಳ್ಳುವ ಸರ್ಕಾರದ ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳಿವೆ. ಅವುಗಳು ಈ ಕೆಳಕಂಡಂತಿವೆ:

  • ಬೆಲೆ ಏರಿಕೆ: ಕಳೆದ ಎರಡು ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಶೇಕಡಾ 16% ರಿಂದ 40% ರಷ್ಟು ಏರಿಕೆಯಾಗಿದೆ.
  • ಹಬ್ಬದ ಸೀಸನ್ ಬೇಡಿಕೆ: ಗಣೇಶ ಚತುರ್ಥಿ, ದಸರಾ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ಸಿಹಿ ತಿನಿಸುಗಳು ಮತ್ತು ಇತರ ಆಹಾರ ಪದಾರ್ಥಗಳ ತಯಾರಿಕೆಗೆ ಸಕ್ಕರೆಯ ಬೇಡಿಕೆ ಗರಿಷ್ಠ ಮಟ್ಟದಲ್ಲ ಇರುತ್ತದೆ.
  • ಸರಬರಾಜು ಕೊರತೆ: ಕಬ್ಬಿನ ಉತ್ಪಾದನೆ ಕಡಿಮೆಯಾಗಿದ್ದರಿಂದ ಮತ್ತು ಮಾರುಕಟ್ಟೆಯಲ್ಲಿ ದಾಸ್ತಾನು ಕೊರತೆ ಉಂಟಾಗಿದ್ದರಿಂದ ಬೆಲೆಗಳನ್ನು ಹತೋಟಿಗೆ ತರಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಭಾರತದಿಂದ ಇನ್ನೂ 8-9 ವ್ಯಾಪಾರ ಒಪ್ಪಂದಗಳಿಗೆ ಮಾತುಕತೆ ಚಾಲನೆಯಲ್ಲಿ: ಪಿಯೂಷ್ ಗೋಯಲ್

ದಾಸ್ತಾನು ಮೇಲೂ ಕಟ್ಟುನಿಟ್ಟಿನ ನಿಯಮ

ಆಮದು ಅನುಮತಿಯ ಜೊತೆಗೆ, ಸಕ್ಕರೆ ಕಾಳಸಂತೆ ಮತ್ತು ಕೃತಕ ಅಭಾವ ತಡೆಯಲು ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ವ್ಯಾಪಾರಿಗಳು ಗರಿಷ್ಠ 400 ಟನ್‌ಗಳಿಗಿಂತ ಹೆಚ್ಚು ಸಕ್ಕರೆ ದಾಸ್ತಾನು ಇಟ್ಟುಕೊಳ್ಳುವಂತಿಲ್ಲ.

ತಿಂಗಳಿಗೆ 10 ಟನ್‌ಗಿಂತ ಹೆಚ್ಚು ಸಕ್ಕರೆ ಬಳಸುವ ದೊಡ್ಡ ಬಳಕೆದಾರರು (Bulk Consumers) 15 ದಿನಗಳ ಬಳಕೆಗೆ ಬೇಕಾಗುವಷ್ಟು ಪ್ರಮಾಣಕ್ಕಿಂತ ಹೆಚ್ಚಿನ ದಾಸ್ತಾನು ಹೊಂದುವಂತಿಲ್ಲ. ಸೆಪ್ಟೆಂಬರ್ 1 ರಿಂದ ಇದು ಜಾರಿಗೆ ಬರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ