AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಲಸೌಕರ್ಯ ಅಭಿವೃದ್ಧಿಗೆ ಗಣನೀಯ ವೆಚ್ಚ; ಯುಪಿಎ, ಎನ್​ಡಿಎ ಸರ್ಕಾರಗಳ ಸಾಧನೆ ಹೋಲಿಸಿದ ಸಚಿವ ಜ್ಯೋತಿರಾದಿತ್ಯ

Union minister Jyotiraditya Scindia speaks of govt achievements: ಸರ್ಕಾರ ಕಳೆದ ಒಂದು ವರ್ಷದಲ್ಲಿ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹನ್ನೊಂದು ಲಕ್ಷ ಕೋಟಿ ರೂ ವೆಚ್ಚ ಮಾಡಿದೆ ಎಂದು ಹೇಳಿದ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರು, ಹಿಂದಿನ ಯುಪಿಎ ಅವಧಿಯಲ್ಲಿ ವರ್ಷಕ್ಕೆ 2 ಲಕ್ಷ ಕೋಟಿ ರೂ ಮಾತ್ರವೇ ವ್ಯಯಿಸುತ್ತಿತ್ತು ಎಂದಿದ್ದಾರೆ. ಸ್ಮಾರ್ಟ್​ಫೋನ್ ತಯಾರಿಕೆ, ಬ್ಯಾಂಕ್ ಎನ್​ಪಿಎ, ಹೆದ್ದಾರಿ ನಿರ್ಮಾಣ, ರೈಲು ಅಭಿವೃದ್ಧಿ ಇತ್ಯಾದಿ ವಿಚಾರದಲ್ಲಿ ಈಗನ ಸರ್ಕಾರದ ಸಾಧನೆಗಳನ್ನು ಅವರು ಬಿಚ್ಚಿಟ್ಟಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗೆ ಗಣನೀಯ ವೆಚ್ಚ; ಯುಪಿಎ, ಎನ್​ಡಿಎ ಸರ್ಕಾರಗಳ ಸಾಧನೆ ಹೋಲಿಸಿದ ಸಚಿವ ಜ್ಯೋತಿರಾದಿತ್ಯ
ಜ್ಯೋತಿರಾದಿತ್ಯ ಸಿಂದ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 10, 2025 | 12:37 PM

Share

ನವದೆಹಲಿ, ಫೆಬ್ರುವರಿ 10: ಕಳೆದ ಒಂದು ವರ್ಷದಲ್ಲಿ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ 11 ಲಕ್ಷ ಕೋಟಿ ರೂ ವೆಚ್ಚ ಮಾಡಿದೆ. ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ ಒಂದು ವರ್ಷದಲ್ಲಿ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ವ್ಯಯಿಸುತ್ತಿದ್ದುದು 2 ಲಕ್ಷ ಕೋಟಿ ರೂ ಮಾತ್ರವೇ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಎರಡು ಸರ್ಕಾರಗಳ ಸಾಧನೆಗಳನ್ನು ತುಲನೆ ಮಾಡಿದ್ದಾರೆ.

‘ಹಿಂದೆ ಶೇ. 90ರಷ್ಟು ಫೋನ್​ಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಶೇ. 90ರಷ್ಟು ಫೋನ್​ಗಳನ್ನು ಭಾರತದಲ್ಲೇ ತಯಾರಿಸಲಾಗುತ್ತಿದೆ. 1.28 ಲಕ್ಷ ಕೋಟಿ ರೂ ಮೌಲ್ಯದ ಸ್ಮಾರ್ಟ್​ಫೋನ್​ಗಳನ್ನು ರಫ್ತು ಮಾಡಲಾಗುತ್ತಿದೆ’ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಸ್ಮಾರ್ಟ್​ಫೋನ್ ರಫ್ತು ಕ್ರಾಂತಿ; ಅಂದು 167ನೇ ಸ್ಥಾನ, ಇಂದು 2ನೇ ಸ್ಥಾನ; ಮುಂಚೂಣಿಯಲ್ಲಿ ಐಫೋನ್

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಬ್ಯಾಂಕುಗಳಿಗೆ ಅನುತ್ಪಾದಕ ಆಸ್ತಿಗಳ (ಎನ್​ಪಿಎ) ಹೊರೆ ಬಹಳ ಇತ್ತು. 2014ರಲ್ಲಿ ಬ್ಯಾಂಕುಗಳ ಎನ್​ಪಿಎ ಪ್ರಮಾಣ ಶೇ. 11.5ರಷ್ಟಿತ್ತು. ಈಗ ಅದು ಶೇ. 2.6ಕ್ಕೆ ಇಳಿಕೆ ಆಗಿದೆ ಎಂದು ಮಾಜಿ ಕಾಂಗ್ರೆಸ್ಸಿಗರೂ ಆದ ಜ್ಯೋತಿರಾದಿತ್ಯ ಸಿಂದಿಯಾ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಸಾಧನೆಗಳನ್ನು ಬಿಚ್ಚಿಟ್ಟ ಸಿಂದಿಯಾ…

ಕಳೆದ ಒಂದು ವರ್ಷದಲ್ಲಿ 2,031 ಕಿಮೀಯಷ್ಟು ರೈಲ್ವೆ ಲೈನ್​ಗಳು, ಆರು ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಟೆಲಿಕಾಂ ಸೆಕ್ಟರ್​ನಲ್ಲಿ 10,000ಕ್ಕೂ ಹೆಚ್ಚು ಗ್ರಾಮಗಳಲ್ಲಿ ಟವರ್​ಗಳನ್ನು ಸ್ಥಾಪಿಸುವ ಮೂಲಕ ಕನೆಕ್ಟಿವಿಟಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಭಾರತದಿಂದ ವಿಶ್ವದ ಅತಿ ಉದ್ದದ ಮತ್ತು ಶಕ್ತಿಶಾಲಿ ಹೈಡ್ರೋಜನ್ ಟ್ರೈನ್: ಅಶ್ವಿನಿ ವೈಷ್ಣವ್

ಭಾರತದ ರಫ್ತು ಒಂದು ವರ್ಷದಲ್ಲಿ 600 ಬಿಲಿಯನ್ ಡಾಲರ್​ಗೆ ಏರಿದೆ. ವಿದೇಶ ವಿನಿಮಯ ಮೀಸಲು ನಿಧಿ ವಿಶ್ವದಲ್ಲೇ ನಾಲ್ಕನೇ ಗರಿಷ್ಠ ಮಟ್ಟದಲ್ಲಿದೆ. ಜಾಗತಿಕ ಆರ್ಥಿಕತೆ ಶೇ. 3.2ರಷ್ಟು ಬೆಳೆದರೆ ಭಾರತದ ಪ್ರಗತಿ ಶೇ. 6.5ರಷ್ಟಿದೆ. 2027ರೊಳಗೆ ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿ ಇದೆ. ಮುಂದಿನ ಎರಡು ವರ್ಷದಲ್ಲಿ ಜರ್ಮನಿ ಮತ್ತು ಜಪಾನ್ ಆರ್ಥಿಕತೆಗಳನ್ನು ಭಾರತ ಹಿಂದಿಕ್ಕಲಿದೆ. 2028ರಲ್ಲಿ 5 ಟ್ರಿಲಿಯನ್ ಡಾಲರ್, ಹಾಗು 2030ರೊಳಗೆ 6 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯಾಗುವ ಗುರಿ ಇಡಲಾಗಿದೆ ಎಂದು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂದಿಯಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ