AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮಾಣು ಶಕ್ತಿ ಉತ್ಪಾದನೆಗೆ ಖಾಸಗಿಯವರಿಗೂ ಅವಕಾಶ ನೀಡಲಿದೆ ಸರ್ಕಾರ; ಮುಂಬರುವ ಅಧಿವೇಶನದಲ್ಲಿ ಮಸೂದೆ

Govt to allow private sector in Nuclear Power industry: ಭಾರತದ ಪರಮಾಣು ಶಕ್ತಿ ಉತ್ಪಾದನೆಯ ಅವಕಾಶವನ್ನು ಖಾಸಗಿಯವರಿಗೂ ಕೊಡಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಅಣು ವಿದ್ಯುತ್ ಉತ್ಪಾದನೆಯನ್ನು ಖಾಸಗಿ ಸೆಕ್ಟರ್​ಗೆ ತೆರೆಯಲಾಗುವುದು ಎಂದಿದ್ದಾರೆ. ಇದಕ್ಕಾಗಿ 1962ರ ಅಣು ಶಕ್ತಿ ಕಾಯ್ದೆಗೆ ತಿದ್ದುಪಡಿ ತರಲು ಮಸೂದೆ ರೂಪಿಸಲಾಗಿದ್ದು, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇದರ ಮಂಡನೆಯಾಗಲಿದೆ.

ಪರಮಾಣು ಶಕ್ತಿ ಉತ್ಪಾದನೆಗೆ ಖಾಸಗಿಯವರಿಗೂ ಅವಕಾಶ ನೀಡಲಿದೆ ಸರ್ಕಾರ; ಮುಂಬರುವ ಅಧಿವೇಶನದಲ್ಲಿ ಮಸೂದೆ
ಪರಮಾಣ ಶಕ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2025 | 6:22 PM

Share

ನವದೆಹಲಿ, ನವೆಂಬರ್ 27: ಮುಂಬರುವ ವರ್ಷಗಳಲ್ಲಿ ಎದುರಾಗಬಹುದಾದ ಅಗಾಧ ವಿದ್ಯುತ್ ಬೇಡಿಕೆ ಪೂರೈಸಲು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸಲು ಸಾಕಷ್ಟು ಸ್ವಚ್ಛ ಇಂಧನದ (clean energy) ಅವಶ್ಯಕತೆ ಇದೆ. ಇದನ್ನು ಪೂರೈಸಲು ಸರ್ಕಾರ ಮರುಬಳಕೆ ಇಂಧನಗಳ ಉತ್ಪಾದನೆ ಹೆಚ್ಚಿಸುತ್ತಿದೆ. ಇದರ ಜೊತೆಗೆ ಪರಮಾಣ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಯೂ ಇದೆ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳನ್ನೂ ಬಳಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪರಮಾಣು ಕ್ಷೇತ್ರವನ್ನು ಖಾಸಗಿಯವರಿಗೆ ತೆರೆಯಲಾಗುವುದು ಎಂದು ಗುರುವಾರ ಹೇಳಿದ್ದಾರೆ.

ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆದುದರಿಂದ ಸಾಕಷ್ಟು ನಾವೀನ್ಯತೆಗಳನ್ನು ಕಾಣಲು ಸಾಧ್ಯವಾಗಿದೆ. ಇದೇ ಮಾದರಿಯನ್ನು ಪರಮಾಣು ವಲಯಕ್ಕೂ ಅನ್ವಯಿಸಲಾಗುತ್ತದೆ. ಖಾಸಗಿಯವರಿಂದ ಹೆಚ್ಚು ನಾವೀನ್ಯತೆಯನ್ನು ನಿರೀಕ್ಷಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಸ್ಕೈರೂಟ್ ಎನ್ನುವ ಖಾಸಗಿ ಸ್ಪೇಸ್ ಕಂಪನಿಯು ವಿಕ್ರಮ್-1 ಸೆಟಿಲೈಟ್ ನಿರ್ಮಿಸಿದ್ದು, ಇದರ ಉದ್ಘಾಟನೆ ವೇಳೆ ಪ್ರಧಾನಿಗಳು ಈ ಮಾತನ್ನು ಹೇಳಿದ್ದಾರೆ.

ಇದನ್ನೂ ಓದಿ: ವಿರಳ ಭೂ ಖನಿಜ ಹಿಡಿದು ಅಮೆರಿಕವನ್ನೂ ಬಗ್ಗಿಸುತ್ತಿರುವ ಚೀನಾ; 7,280 ಕೋಟಿ ರೂನ ಭಾರತದ ಪ್ಲಾನ್ ಹಿಂದಿದೆ ದೂರದೃಷ್ಟಿ

‘ಶೀಘ್ರದಲ್ಲೇ ಪರಮಾಣ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆಯಲಾಗುವುದು. ಸಣ್ಣ ಮಾಡ್ಯೂಲಾರ್ ಮತ್ತು ಅಡ್ವಾನ್ಸ್ಡ್ ರಿಯಾಕ್ಟರ್​ಗಳಲ್ಲಿ ಅವಕಾಶಗಳು ಹೆಚ್ಚಲಿವೆ. ಪರಮಾಣು ಆವಿಷ್ಕಾರಗಳಿಗೂ ಅವಕಾಶ ಸಿಗಲಿದೆ’ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ಸದ್ಯ ಭಾರತದಲ್ಲಿ ಪರಮಾಣು ಶಕ್ತಿ ಉತ್ಪಾದನೆಯು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದಲೇ ಆಗುತ್ತಿದೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ ಸಾಧ್ಯವಾಗಿಲ್ಲ. ಹೀಗಾಗಿ, ಸರ್ಕಾರ ಖಾಸಗಿಯವರಿಗೆ ಮಣೆ ಹಾಕಲು ಹೊರಟಿರಬಹುದು.

ಮುಂದಿನ ತಿಂಗಳು ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ 10 ಮಸೂದೆಗಳನ್ನು ಮಂಡಿಸುತ್ತಿದೆ. ಅದರಲ್ಲಿ ಅಣು ಶಕ್ತಿ ಮಸೂದೆಯೂ ಒಂದು. ಅಣು ಶಕ್ತಿ ಉತ್ಪಾದನೆಯ ಅವಕಾಶವನ್ನು ಖಾಸಗಿಯವರಿಗೂ ತೆರೆಯಲು ಅವಕಾಶ ಕೊಡಲಾಗುವಂತೆ ಕಾಯ್ದೆಯಲ್ಲಿ ತಿದ್ದುಪಡಿ ತರುವ ಮಸೂದೆ ಇದಾಗಿದೆ. 1962ರ ಅಟಾಮಿಕ್ ಎನರ್ಜಿ ಆ್ಯಕ್ಟ್ ಮತ್ತು 2010ರ ಸಿವಿಲ್ ಲಯಬಿಲಿಟಿ ಫಾರ್ ನೂಕ್ಲಿಯಾರ್ ಡ್ಯಾಮೇಜ್ ಆ್ಯಕ್ಟ್ ಇವುಗಳನ್ನು ಸರ್ಕಾರ ತಿದ್ದುಪಡಿ ತರುತ್ತಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಎಚ್​ಡಿಕೆ ಪ್ರಸ್ತಾಪ ಪರಿಗಣಿಸಿದ ಕೇಂದ್ರ ಸರ್ಕಾರ

ವಿಶ್ವದ ಅತಿದೊಡ್ಡ ಪರಮಾಣ ಶಕ್ತಿ ಉತ್ಪಾದಕವಾಗಿರುವ ಅಮೆರಿಕದಲ್ಲಿ ಶೇ. 30ರಷ್ಟು ಪರಮಾಣು ವಿದ್ಯುತ್ ಉತ್ಪಾದನೆಯನ್ನು ಖಾಸಗಿ ವಲಯ ಮಾಡುತ್ತದೆ. ಬೇರೆ ಹೆಚ್ಚಿನ ದೇಶಗಳಲ್ಲಿ ಇದರ ಉತ್ಪಾದನೆ ಸರ್ಕಾರದ ಕೈಯಲ್ಲೇ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ