AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ ಜಿಗಿಯುತ್ತಿದೆ; ಬನ್ನಿ GPAI ಸಮಿಟ್​ನಲ್ಲಿ ಭಾಗಿಯಾಗಿ: ನರೇಂದ್ರ ಮೋದಿ ಕರೆಯೋಲೆ

Global Partnership on Artificial Intelligence Summit 2023: ತಂತ್ರಜ್ಞಾನದ ನೆರವಿನಿಂದ ಕಳೆದ 10 ವರ್ಷದಲ್ಲಿ ಜಿಗಿದಂತೆ, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲೂ ಭಾರತ ಮಹಾಜಿಗಿತಕ್ಕೆ ಸಿದ್ಧ ಇದೆ ಎಂದು ಮೋದಿ ಹೇಳಿದ್ದಾರೆ. ಡಿಸೆಂಬರ್ 12ರಿಂದ 14ರವರೆಗೆ ನವದೆಹಲಿಯಲ್ಲಿ ಗ್ಲೋಬಲ್ ಪಾರ್ಟ್ನರ್​ಶಿಪ್ ಆನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಮಿಟ್ 2023 ನಡೆಯಲಿದೆ. ಜಿಪಿಎಐನ ಸಂಸ್ಥಾಪಕ ಸದಸ್ಯ ದೇಶಗಳಲ್ಲಿ ಭಾರತವೂ ಒಂದು. 28 ದೇಶಗಳು ಈ ಫೋರಂನ ಸದಸ್ಯತ್ವ ಹೊಂದಿವೆ.

Narendra Modi: ಭಾರತ ಎಐ ತಂತ್ರಜ್ಞಾನ ಕ್ಷೇತ್ರದಲ್ಲಿ ಜಿಗಿಯುತ್ತಿದೆ; ಬನ್ನಿ GPAI ಸಮಿಟ್​ನಲ್ಲಿ ಭಾಗಿಯಾಗಿ: ನರೇಂದ್ರ ಮೋದಿ ಕರೆಯೋಲೆ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 08, 2023 | 12:29 PM

Share

ನವದೆಹಲಿ, ಡಿಸೆಂಬರ್ 8: ಇದೇ ಡಿಸೆಂಬರ್ 12ರಿಂದ 14ರವರೆಗೂ ರಾಷ್ಟ್ರರಾಜಧಾನಿ ನಗರಿಯಲ್ಲಿರುವ ಭಾರತ ಮಂಡಪಂನಲ್ಲಿ ಜಾಗತಿಕ ಕೃತಕ ಬುದ್ಧಿಮತ್ತೆ ಸಹಭಾಗಿತ್ವ ಶೃಂಗಸಭೆ (ಗ್ಲೋಬಲ್ ಪಾರ್ಟ್ನರ್​ಶಿಪ್ ಆನ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಮಿಟ್ 2023) ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ವರೂ ಭಾಗಿಯಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಲಿಂಕ್ಡ್ ಇನ್ ಸೋಷಿಯಲ್ ಮೀಡಿಯಾ ತಾಣದಲ್ಲಿ ಜಿಪಿಎಐ ಸಮಿಟ್ ಬಗ್ಗೆ ಪ್ರಧಾನಿಗಳು ವಿವರವಾಗಿ ಪೋಸ್ಟ್ ಹಾಕಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಿಂದಲೂ ಅವರು ಟ್ವೀಟ್ ಮಾಡಿದ್ದಾರೆ.

‘ಯಂತ್ರ ಬುದ್ಧಿಮತ್ತೆ ಮತ್ತು ನಾವೀನ್ಯತೆಯಲ್ಲಿ ಸಾಧಿಸಿರುವ ಬೆಳವಣಿಗೆಯನ್ನು ಆಚರಿಸುವಂತಹ ಜಿಪಿಎಐ ಶೃಂಗಸಭೆಗೆ ನಿಮ್ಮನ್ನೆಲ್ಲಾ ಆಹ್ವಾನಿಸುತ್ತಿದ್ದೇನೆ. ಡಿಸೆಂಬರ್ 12ಕ್ಕೆ ಈ ಸಭೆ ಆರಂಭವಾಗುತ್ತದೆ. ಈ ರೋಮಾಂಚಕ ವೇದಿಕೆಯ ಭಾಗವಾಗುವುದು ನಿಮಗೆ ಇಷ್ಟವಾಗಬಹುದು ಎಂಬ ವಿಶ್ವಾಸ ನನಗಿದೆ,’ ಎಂದು ನರೇಂದ್ರ ಮೋದಿ ತಮ್ಮ ಲಿಂಕ್ಡ್ ಇನ್ ಪೋಸ್ಟ್​ನಲ್ಲಿ ಮೊದಲ ಸಾಲುಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸಮೀಪ ದೇಶದ ಅತಿದೊಡ್ಡ ಐಫೋನ್ ಘಟಕ; ಹೊಸೂರಿನಲ್ಲಿ ಟಾಟಾ ಯೋಜನೆ; 50,000 ಮಂದಿಗೆ ಉದ್ಯೋಗ

‘… ಕಳೆದ 9-10 ವರ್ಷದಲ್ಲಿ ಭಾರತ ಹಾಗೂ ಅದರ ನಾಗರಿಕರು ತಂತ್ರಜ್ಞಾನ ನೆರವಿನಿಂದ ಜಿಗಿದು ಮುನ್ನುಗ್ಗಿದ್ದಾರೆ. ಬೇರೆ ದೇಶಗಳಿಗೆ ಒಂದು ತಲೆಮಾರಿನಲ್ಲಿ ಸಾಧ್ಯವಾಗಿದ್ದನ್ನು ಭಾರತ ಕೆಲವೇ ವರ್ಷಗಳಲ್ಲಿ ಸಾಧಿಸಿದೆ ಎಂದರೆ ಅತಿಶಯೋಕ್ತಿ ಎನಿಸದು. ಮೊಬೈಲ್ ಹೆಚ್ಚು ವೇಗದಲ್ಲಿ ವಿಸ್ತಾರಗೊಂಡಿದ್ದು, ಇಂಟರ್ನೆಟ್ ಕನೆಕ್ಟಿವಿಟಿ ವ್ಯಾಪ್ತಿ ಹೆಚ್ಚಿದ್ದು ಮತ್ತು ಡಿಜಿಟಲ್ ಒಳಗೊಳ್ಳುವಿಕೆಯ ಮಾದರಿಗಳನ್ನು ಸೃಷ್ಟಿಸಿದ್ದು ಈ ಕಾರ್ಯವನ್ನು ಸುಲಭವಾಗಿಸಿದೆ…. ಅದೇ ರೀತಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದಲ್ಲೂ ಭಾರತ ದೈತ್ಯ ಜಿಗಿತಕ್ಕೆ ಸಿದ್ಧವಾಗಿದೆ…’ ಎಂದು ನರೇಂದ್ರ ಮೋದಿ ತಮ್ಮ ಬ್ಲಾಗ್​ನಲ್ಲಿ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಲಿಂಕ್ಡ್ ಇನ್ ಬ್ಲಾಗ್ ಪೋಸ್ಟ್​ನ ಲಿಂಕ್

ಏನಿದು ಜಿಪಿಎಐ?

ಗ್ಲೋಬಲ್ ಪಾರ್ಟ್ನರ್​ಶಿಪ್ ಆನ್ ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಫೋರಂ ಅನ್ನು 2020ರ ಜೂನ್​ನಲ್ಲಿ ಆರಂಭಿಸಲಾಯಿತು. ಭಾರತವು ಈ ಫೋರಂನ ಸಂಸ್ಥಾಪಕ ದೇಶಗಳಲ್ಲಿ ಒಂದು. ಇದರಲ್ಲಿ 28 ದೇಶಗಳು ಹಾಗೂ ಯೂರೋಪಿಯನ್ ಯೂನಿಯನ್ ಸದಸ್ಯತ್ವ ಹೊಂದಿವೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ನ ಅಭಿವೃದ್ಧಿ ಮತ್ತು ಜವಾಬ್ದಾರಿಯುತ ಬಳಕೆ ವಿಚಾರದಲ್ಲಿ ಇದು ಸದಸ್ಯ ರಾಷ್ಟ್ರಗಳಿಗೆ ಮಾರ್ಗದರ್ಶನ ನೀಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Fri, 8 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ