AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meet: ಡಿಸೆಂಬರ್ 17ಕ್ಕೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್​ ಗೇಮಿಂಗ್ ತೆರಿಗೆ ಹೆಚ್ಚಳ ಸಾಧ್ಯತೆ

ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ವರದಿ ಸಿದ್ಧಪಡಿಸಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಈ ವಿಚಾರವಾಗಿ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ.

GST Council Meet: ಡಿಸೆಂಬರ್ 17ಕ್ಕೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್​ ಗೇಮಿಂಗ್ ತೆರಿಗೆ ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 26, 2022 | 6:37 PM

Share

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ಮಂಡಳಿಯು ಡಿಸೆಂಬರ್​ನಲ್ಲಿ ವರ್ಚುವಲ್ ಆಗಿ ಸಭೆ ಸೇರಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮಂಡಳಿಯ 48ನೇ ಸಭೆ ಡಿಸೆಂಬರ್ 17ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಜಿಎಸ್​ಟಿ ಮಂಡಳಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಶುಕ್ರವಾರವಷ್ಟೇ ಬಿಡುಗಡೆ ಮಾಡಿತ್ತು. ಅದರ ಬೆನ್ನಲ್ಲೇ ಮುಂದಿನ ಸಭೆಯ ಬಗ್ಗೆ ಮಂಡಳಿ ಮಾಹಿತಿ ನೀಡಿದೆ.

ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ವರದಿ ಸಿದ್ಧಪಡಿಸಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಈ ವಿಚಾರವಾಗಿ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ. ಜಿಎಸ್​ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಕುರಿತೂ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ. ಅಲ್ಲದೆ, ಜಿಎಸ್​ಟಿ ಕಾನೂನಿನ ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಲಾಗುತ್ತಿರುವ ಕೆಲವು ನಿಯಮಗಳನ್ನು ಸಡಿಲಿಸುವ ಬಗ್ಗೆ ಅಧಿಕಾರಿಗಳು ಸಲ್ಲಿಸಿರುವ ವರದಿಯ ಪರಾಮರ್ಶೆಯೂ ನಡೆಯಬಹುದು ಎನ್ನಲಾಗಿದೆ.

ಕರ್ನಾಟಕಕ್ಕೆ ಬಂತು 1,915 ಕೋಟಿ ರೂ. ಪರಿಹಾರ

ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿತ್ತು. ಕರ್ನಾಟಕಕ್ಕೆ 1,915 ಕೋಟಿ ರೂ. ಬಿಡುಗಡೆಯಾಗಿತ್ತು. ಕೇಂದ್ರ ಸರ್ಕಾರ 2022-23ರ ಸಾಲಿನಲ್ಲಿ ಈವರೆಗೆ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಲ್ಲಿ ಈ ಬಾರಿಯ ಜಿಎಸ್​ಟಿ ಸಂಗ್ರಹದಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ 2081 ಕೋಟಿ ರೂ, ಸಿಕ್ಕಿದ್ದರೆ, ನಂತರ ಸ್ಥಾನದಲ್ಲಿರುವ ರ್ನಾಟಕಕ್ಕೆ 1,915 ಕೋಟಿ ರೂ. ದೊರೆತಿದೆ.

ಚರ್ಚೆಯಾಗಲಿದೆಯೇ ಪೆಟ್ರೋಲ್, ಡೀಸೆಲ್ ತೆರಿಗೆ ವಿಚಾರ?

ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಯಡಿ ತರಲು ಸರ್ಕಾರ ಸಿದ್ಧವಿದೆ. ಆದರೆ ರಾಜ್ಯ ಸರ್ಕಾರಗಳು ಸಮ್ಮತಿಸುವ ಸಾಧ್ಯತೆ ಬಹಳ ಕಡಿಮೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈರ್ಗಿಕ ಅನಿಲ ಸಚಿವ ಹರದೀಪ್ ಸಿಂಗ್ ಪುರಿ ಇತ್ತೀಚೆಗೆ ಬಹಿರಂಗವಾಗಿ ಹೇಳಿದ್ದರು. ಈ ವಿಚಾರವಾಗಿ ಜಿಎಸ್​ಟಿ ಮಂಡಳಿಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆಯೇ ಎಂಬ ಕುತೂಹಲ ಇದೀಗ ಮೂಡಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್​ಟಿ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಬಹಳ ಕಡಿಮೆ ಎಂದಿವೆ ಮೂಲಗಳು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Sat, 26 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ