ನವದೆಹಲಿ, ಜನವರಿ 1: ಸರಕು ಮತ್ತು ಸೇವಾ ತೆರಿಗೆಯ ಸಂಗ್ರಹ (GST collection) ಡಿಸೆಂಬರ್ ತಿಂಗಳಲ್ಲಿ 1.6 ಲಕ್ಷ ಕೋಟಿ ರೂ ಗಡಿ ದಾಟಿದೆ. ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಈ ಹಣಕಾಸು ವರ್ಷದ ಆರಂಭದಿಂದ ಹಿಡಿದು ಡಿಸೆಂಬರ್ವರೆಗೆ 9 ತಿಂಗಳ ಅವಧಿಯಲ್ಲಿ 14.97 ಲಕ್ಷ ಕೋಟಿ ರೂನಷ್ಟು ಜಿಎಸ್ಟಿ ಕಲೆಕ್ಷನ್ ಆಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 12ರಷ್ಟು ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಇದರೊಂದಿಗೆ ಈ 9 ತಿಂಗಳಲ್ಲಿ ಮಾಸಿಕ ಸರಾಸರಿ 1.66 ಲಕ್ಷ ಕೋಟಿ ರೂನಷ್ಟು ಜಿಎಸ್ಟಿ ತೆರಿಗೆ ಸಂಗ್ರಹ ಇದೆ. ಇನ್ನು, ಡಿಸೆಂಬರ್ ತಿಂಗಳಲ್ಲಿ 1,66,882 ಕೋಟಿ ರೂನಷ್ಟು ತೆರಿಗೆಯು ಸರ್ಕಾರದ ಕೈ ಸೇರಿದೆ. ನವೆಂಬರ್ ತಿಂಗಳಿಗೆ ಹೋಲಿಸಿದರೆ ಡಿಸೆಂಬರ್ನಲ್ಲಿ ತೆರಿಗೆ ಸಂಗ್ರಹ ತುಸು ಕಡಿಮೆ ಆಗಿದೆ.
2023ರ ಡಿಸೆಂಬರ್ನಲ್ಲಿ ಒಟ್ಟು ತೆರಿಗೆ ಸಂಗ್ರಹ: 1,66,882 ಕೋಟಿ ರೂ
ಐಜಿಎಸ್ಟಿಯಲ್ಲಿ ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆ ಆಗಿರುವುದು ಹೀಗೆ:
ಇದನ್ನೂ ಓದಿ: Gold: ಒಂದು ವರ್ಷದಲ್ಲಿ ಚಿನ್ನದ ಬೆಲೆ ಹೆಚ್ಚಾಗಿದ್ದು ಎಷ್ಟು? ಹೂಡಿಕೆ ಮಾಡಿದವರಿಗೆ ಎಷ್ಟು ಲಾಭ?
ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿ ಮುಂದುವರಿದಿದೆ. ಕರ್ನಾಟಕ ನಂತರದ ಸ್ಥಾನದಲ್ಲಿದೆ. ತಮಿಳುನಾಡು, ಗುಜರಾತ್, ಹರ್ಯಾಣ ಮತ್ತು ಉತ್ತರಪ್ರದೇಶ ರಾಜ್ಯಗಳು 8,000 ಕೋಟಿ ರೂಗಿಂತ ಹೆಚ್ಚು ತೆರಿಗೆ ಸಂಗ್ರಹ ಮಾಡಿವೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ