GST Council Meet: ಮುಂದಿನ ವಾರ ಜಿಎಸ್​ಟಿ ಮಂಡಳಿ ಸಭೆ; ಆರೋಗ್ಯ ವಿಮೆ ತೆರಿಗೆ ಇಳಿಕೆ ನಿರೀಕ್ಷೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ವರ್ಚುವಲ್ ಆಗಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ.

GST Council Meet: ಮುಂದಿನ ವಾರ ಜಿಎಸ್​ಟಿ ಮಂಡಳಿ ಸಭೆ; ಆರೋಗ್ಯ ವಿಮೆ ತೆರಿಗೆ ಇಳಿಕೆ ನಿರೀಕ್ಷೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Dec 08, 2022 | 12:24 PM

ನವದೆಹಲಿ: ಸರಕು ಮತ್ತು ಸೇವಾ ತರಿಗೆ ಮಂಡಳಿಯ (GST Council) 48ನೇ ಸಭೆ ಮುಂದಿನ ವಾರ (December 17) ನಡೆಯಲಿದ್ದು, ಆರೋಗ್ಯ ವಿಮೆ (Health Insurance) ಮೇಲಿನ ತೆರಿಗೆಯನ್ನು ಶೇಕಡಾ 18ರಿಂದ 12ಕ್ಕೆ ಇಳಿಕೆ ಮಾಡಬೇಕು ಎಂಬ ಬೇಡಿಕೆ ಮುಖ್ಯವಾಗಿ ಚರ್ಚೆಯಾಗುವ ನಿರೀಕ್ಷೆ ಇದೆ. ಜಿಎಸ್​ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಹಾಗೂ ತೆರಿಗೆ ವಂಚನೆಗೆ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು ಹೆಚ್ಚಿಸುವ ಬಗ್ಗೆಯೂ ಸಮಾಲೋಚನೆ ನಸಡೆಯುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಫೈನಾನ್ಶಿಯಲ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ವರ್ಚುವಲ್ ಆಗಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ. ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವ ಬಗ್ಗೆಯೂ ಜಿಎಸ್​ಟಿ ಮಂಡಳಿ ಸಮಾಲೋಚನೆ ನಡೆಸುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: GST Council Meet: ಡಿಸೆಂಬರ್ 17ಕ್ಕೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್​ ಗೇಮಿಂಗ್ ತೆರಿಗೆ ಹೆಚ್ಚಳ ಸಾಧ್ಯತೆ

ಜಿಎಸ್​ಟಿ ಮಂಡಳಿಯ 47ನೇ ಸಭೆ ಜೂನ್ 28 ಮತ್ತು 29ರಂದು ಚಂಡೀಗಢದಲ್ಲಿ ನಡೆದಿತ್ತು. ಪ್ಯಾಕೇಜ್ಡ್ ಮತ್ತು ಲೇಬಲ್ ಅಂಟಿಸಿರುವ ಮೊಸರು, ಲಸ್ಸಿ, ಮಜ್ಜಿಗೆಯನ್ನು ಜಿಎಸ್​ಟಿ ವ್ಯಾಪ್ತಿಗೆ ತರುವ ನಿರ್ಧಾರ ಕೈಗೊಳ್ಳಲಾಗಿತ್ತು.

ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ಇತ್ತೀಚೆಗೆ ವರದಿ ಸಿದ್ಧಪಡಿಸಿತ್ತು. ಈ ವರದಿಯನ್ನು ಜಿಎಸ್​ಟಿ ಮಂಡಳಿಗೆ ಸಲ್ಲಿಸಲಾಗುವುದು ಎಂದು ಸಚಿವರ ಸಮಿತಿಯ ನೇತೃತ್ವ ವಹಿಸಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ತಿಳಿಸಿದ್ದಾರೆ.

ಆರೋಗ್ಯ ವಿಮೆ ಲೆಕ್ಕಾಚಾರ ಹೇಗೆ?

10 ಲಕ್ಷ ರೂ. ಮೌಲ್ಯದ ಆರೋಗ್ಯ ವಿಮೆ ಮಾಡಿಸಿಕೊಂಡು 22,000 ರೂ. ಪ್ರೀಮಿಯಂ ಪಾವತಿಸುತ್ತೇವೆ ಎಂದಿಟ್ಟುಕೊಳ್ಳೊಣ. ಇಲ್ಲಿ 22,000 ರೂ.ನ ಶೇಕಡಾ 18ರಷ್ಟು ಜಿಎಸ್​ಟಿ ಪಾವತಿಸಬೇಕಾಗುತ್ತದೆ. ಇದರಿಂದ ಒಟ್ಟು 25,960 ರೂ. (22,000 ರೂ. + 3,960 ರೂ.) ಪ್ರೀಮಿಯಂ ಪಾವತಿಸಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ