ಜಿಎಸ್​ಟಿ ಕೌನ್ಸಿಲ್ ಸಭೆ: ಆನ್​ಲೈನ್ ಗೇಮಿಂಗ್​ಗೆ ತೆರಿಗೆ, ಎಸ್​ಜಿಎಸ್​ಟಿ ಕಾನೂನು ಜಾರಿ ಇತ್ಯಾದಿ ವಿಚಾರಗಳ ಬಗ್ಗೆ ಅವಲೋಕನ

GST Council Meeting: ಕಳೆದ ಬಾರಿ ನಡೆದ 51ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಸೆಕ್ಟರ್​ನಲ್ಲಿ ಹಲವು ಪ್ರಮುಖ ತೆರಿಗೆ ಶಿಫಾರಸುಗಳನ್ನು ಮಾಡಲಾಗಿತ್ತು. ಇದಕ್ಕೆ ವಿವಿಧ ಕಾನೂನುಗಳಲ್ಲಿ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇದೆ. ಈ ತಿದ್ದುಪಡಿ ಕ್ರಮ ಆಯಾ ರಾಜ್ಯಗಳ ಕೈಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಏಕಪ್ರಕಾರದ ಕಾನೂನು ತಿದ್ದುಪಡಿಗಳಾಗಬೇಕು. ಈ ವಿಚಾರದಲ್ಲಿ ರಾಜ್ಯವಾರು ತೆಗೆದುಕೊಳ್ಳಲಾದ ಕ್ರಮಗಳನ್ನು 52ನೇ ಜಿಎಸ್​ಟಿ ಸಭೆಯಲ್ಲಿ ಅವಲೋಕಿಸಲಾಗುತ್ತದೆ.

ಜಿಎಸ್​ಟಿ ಕೌನ್ಸಿಲ್ ಸಭೆ: ಆನ್​ಲೈನ್ ಗೇಮಿಂಗ್​ಗೆ ತೆರಿಗೆ, ಎಸ್​ಜಿಎಸ್​ಟಿ ಕಾನೂನು ಜಾರಿ ಇತ್ಯಾದಿ ವಿಚಾರಗಳ ಬಗ್ಗೆ ಅವಲೋಕನ
ಜಿಎಸ್​ಟಿ ಕೌನ್ಸಿಲ್ ಸಭೆ
Follow us
|

Updated on: Oct 06, 2023 | 6:37 PM

ನವದೆಹಲಿ, ಅಕ್ಟೋಬರ್ 6: ಜಿಎಸ್​ಟಿ ಕೌನ್ಸಿಲ್ ಸಭೆ (GST Council Meeting) ಶನಿವಾರ ನಡೆಯುತ್ತಿದ್ದು, ಹಲವಾರು ನಿರ್ಧಾರಗಳ ತಾಂತ್ರಿಕ ತೊಡರುಗಳನ್ನು ನಿವಾರಿಸಲು ಪ್ರಯತ್ನ ಮಾಡಲಾಗುತ್ತದೆ. ಈ 52ನೇ ಜಿಎಸ್​ಟಿ ಕೌನ್ಸಿಲ್ ಸಭೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 51ನೇ ಜಿಎಸ್​ಟಿ ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರದಲ್ಲಿ ಎಷ್ಟರಮಟ್ಟಿಗೆ ಜಾರಿಗೆ ತರಲಾಗಿದೆ ಎಂಬುದನ್ನು ಈ ಸಭೆಯಲ್ಲಿ ಚರ್ಚಿಸಲಾಗಬಹುದು. ಕ್ರಿಪ್ಟೋ ಮತ್ತು ಎನ್​ಎಫ್​ಟಿ ಟೋಕನ್​ಗಳಿಗೆ ತೆರಿಗೆ, ಇಎಸ್​ಒಪಿ ಬಗ್ಗೆ ಸ್ಪಷ್ಟನೆ, ವಿವಿಧ ರಾಜ್ಯಗಳಲ್ಲಿ ಎಸ್​ಜಿಎಸ್​ಟಿ ಕಾನೂನಿನ ಜಾರಿ ಎಷ್ಟು ಆಗಿದೆ ಇವೇ ನಾಳೆಯ ಸಭೆಯ ಅಜೆಂಡಾ ಆಗಿದೆ.

ಕಳೆದ ಬಾರಿ ನಡೆದ 51ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಸೆಕ್ಟರ್​ನಲ್ಲಿ ಹಲವು ಪ್ರಮುಖ ತೆರಿಗೆ ಶಿಫಾರಸುಗಳನ್ನು ಮಾಡಲಾಗಿತ್ತು. ಇದಕ್ಕೆ ವಿವಿಧ ಕಾನೂನುಗಳಲ್ಲಿ ತಿದ್ದುಪಡಿಗಳನ್ನು ಮಾಡುವ ಅವಶ್ಯಕತೆ ಇದೆ. ಈ ತಿದ್ದುಪಡಿ ಕ್ರಮ ಆಯಾ ರಾಜ್ಯಗಳ ಕೈಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಏಕಪ್ರಕಾರದ ಕಾನೂನು ತಿದ್ದುಪಡಿಗಳಾಗಬೇಕು. ಈ ವಿಚಾರದಲ್ಲಿ ರಾಜ್ಯವಾರು ತೆಗೆದುಕೊಳ್ಳಲಾದ ಕ್ರಮಗಳನ್ನು ಅವಲೋಕಿಸಲಾಗುತ್ತದೆ.

ಇದನ್ನೂ ಓದಿ: ಚಲಾವಣೆಯಿಂದ ಹಿಂಪಡೆಯಲಾದ 2,000 ರೂ ನೋಟುಗಳಲ್ಲಿ ಈವರೆಗೆ ಮರಳಿರುವುದು ಎಷ್ಟು? ಆರ್​ಬಿಐ ನೀಡಿದ ಮಾಹಿತಿ ಇದು

ವರದಿಗಳ ಪ್ರಕಾರ, ಕೆಲ ರಾಜ್ಯಗಳಲ್ಲಿ ನಿರೀಕ್ಷಿತ ಕಾನೂನು ತಿದ್ದುಪಡಿಗಳಾಗಿಲ್ಲ. ಈ ವಿಚಾರದಲ್ಲಿ ರಾಜ್ಯಗಳು ಎದುರಿಸುತ್ತಿರುವ ತೊಡಕುಗಳು, ಅವುಗಳ ಆಕ್ಷೇಪಣೆಗಳು ಇತ್ಯಾದಿ ತೊಡರುಗಳನ್ನು ಜಿಎಸ್​ಟಿ ಸಭೆಯಲ್ಲಿ ಚರ್ಚಿಸಿ ಸಮಸ್ಯೆಗೆ ಪರಿಹಾರ ತರಲು ಪ್ರಯತ್ನಿಸಬಹುದು ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ಆನ್​ಲೈನ್ ಗೇಮಿಂಗ್​ಗೆ ಶೇ. 28ರಷ್ಟು ಜಿಎಸ್​ಟಿ ವಿಧಿಸಲಾಗುತ್ತಿದೆ. ಇದನ್ನು ಜಾರಿಗೆ ತರಲು ಇರುವ ತೊಡಕುಗಳನ್ನು ಜಿಎಸ್​ಟಿ ಸಭೆಯಲ್ಲಿ ಪರಿಶೀಲಿಸಿ ಅದಕ್ಕೆ ಪರಿಹಾರ ಹುಡುಕಬಹುದು ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ