AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Council Meeting: ನಾಳೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್ ಗೇಮಿಂಗ್​ಗೆ ತೆರಿಗೆ ಹೆಚ್ಚಳ ಸೇರಿ ಹಲವು ನಿರ್ಧಾರ ಸಾಧ್ಯತೆ

ಆರೋಗ್ಯ ವಿಮೆ ಮೇಲಿನ ತೆರಿಗೆಯನ್ನು ಶೇಕಡಾ 18ರಿಂದ 12ಕ್ಕೆ ಇಳಿಕೆ ಮಾಡಬೇಕೆಂಬ ಬೇಡಿಕೆ, ಆನ್​ಲೈನ್​ ಗೇಮಿಂಗ್ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.

GST Council Meeting: ನಾಳೆ ಜಿಎಸ್​ಟಿ ಮಂಡಳಿ ಸಭೆ; ಆನ್​ಲೈನ್ ಗೇಮಿಂಗ್​ಗೆ ತೆರಿಗೆ ಹೆಚ್ಚಳ ಸೇರಿ ಹಲವು ನಿರ್ಧಾರ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 16, 2022 | 6:26 PM

Share

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ಮಂಡಳಿಯ 48ನೇ ಸಭೆ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಆನ್​ಲೈನ್​ ಗೇಮಿಂಗ್ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ. ಆನ್​ಲೈನ್​ ಗೇಮಿಂಗ್ (Online Gaming) ಮೇಲೆ ತೆರಿಗೆ ಸ್ಲ್ಯಾಬ್​ ಹೆಚ್ಚಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ. ಕ್ಯಾಸಿನೋಗಳು, ಆನ್​ಲೈನ್​ ಗೇಮಿಂಗ್ ಹಾಗೂ ಕುದುರೆ ರೇಸಿಂಗ್​ಗಳ ಮೇಲೆ ಜಿಎಸ್​ಟಿ ಪ್ರಮಾಣ ಹೆಚ್ಚಿಸುವಂತೆ ರಾಜ್ಯಗಳ ಹಣಕಾಸು ಸಚಿವರ ಸಮಿತಿ ಇತ್ತೀಚೆಗೆ ವರದಿ ಸಿದ್ಧಪಡಿಸಿತ್ತು. ವರದಿಯನ್ನು ಡಿಸೆಂಬರ್​ 15ರಂದು ಹಣಕಾಸು ಸಚಿವರಿಗೆ ಸಲ್ಲಿಕೆ ಮಾಡಲಾಗಿದೆ. ಸಚಿವರ ಸಮಿತಿಯ ನೇತೃತ್ವ ವಹಿಸಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ನೀಡಿದ್ದಾರೆ.

ಆದರೆ, ಆನ್​ಲೈನ್​ ಗೇಮಿಂಗ್​ಗೆ ಸಂಬಂಧಿಸಿದ ಚೌಕಟ್ಟು ರೂಪಿಸುವಲ್ಲಿ ಸಚಿವರ ಸಮಿತಿ ಒಮ್ಮತಕ್ಕೆ ಬಂದಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆನ್​ಲೈನ್ ಗೇಮಿಂಗ್​ ಮೇಲಿನ ಜಿಎಸ್​ಟಿಯನ್ನು ಶೇಕಡಾ 28ಕ್ಕೆ ಹೆಚ್ಚಿಸುವ ಬಗ್ಗೆ ಸಚಿವರ ಸಮಿತಿ ಒಮ್ಮತಕ್ಕೆ ಬಂದಿದೆ. ಆದರೆ, ಒಟ್ಟು ಗೇಮಿಂಗ್ ಆದಾಯದ ಮೇಲೆ ತೆರಿಗೆ ವಿಧಿಸಬೇಕೇ ಅಥವಾ ಶುಲ್ಕದ ನಿವ್ವಳ ಮೊತ್ತದ ಮೇಲೆ ಜಿಎಸ್​ಟಿ ವಿಧಿಸಬೇಕೇ ಎಂಬ ಬಗ್ಗೆ ಸಹಮತಕ್ಕೆ ಬಂದಿಲ್ಲ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಇದನ್ನೂ ಓದಿ: GST Council Meet: ಮುಂದಿನ ವಾರ ಜಿಎಸ್​ಟಿ ಮಂಡಳಿ ಸಭೆ; ಆರೋಗ್ಯ ವಿಮೆ ತೆರಿಗೆ ಇಳಿಕೆ ನಿರೀಕ್ಷೆ

ಆರೋಗ್ಯ ವಿಮೆ ಮೇಲಿನ ತೆರಿಗೆಯನ್ನು ಶೇಕಡಾ 18ರಿಂದ 12ಕ್ಕೆ ಇಳಿಕೆ ಮಾಡಬೇಕು ಎಂಬ ಬೇಡಿಕೆ ಬಗ್ಗೆಯೂ ಚರ್ಚೆಯಾಗುವ ನಿರೀಕ್ಷೆ ಇದೆ. ಜಿಎಸ್​ಟಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವ ಹಾಗೂ ತೆರಿಗೆ ವಂಚನೆಗೆ ಕ್ರಿಮಿನಲ್ ಕಾನೂನು ಕ್ರಮ ಕೈಗೊಳ್ಳಬೇಕಾದ ಮಿತಿಯನ್ನು ಹೆಚ್ಚಿಸುವ ಬಗ್ಗೆಯೂ ಸಮಾಲೋಚನೆ ನಸಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮಂಡಳಿಯ 48ನೇ ಸಭೆ ಡಿಸೆಂಬರ್ 17ರಂದು ನಡೆಯಲಿದೆ ಎಂದು ಇತ್ತೀಚೆಗೆ ಟ್ವೀಟ್​ ಮೂಲಕ ಜಿಎಸ್​ಟಿ ಮಂಡಳಿ ಮಾಹಿತಿ ನೀಡಿತ್ತು. ಮಂಡಳಿಯ 47ನೇ ಸಭೆ ಜೂನ್ 28 ಮತ್ತು 29ರಂದು ಚಂಡೀಗಢದಲ್ಲಿ ನಡೆದಿತ್ತು. ಪ್ಯಾಕೇಜ್ಡ್ ಮತ್ತು ಲೇಬಲ್ ಅಂಟಿಸಿರುವ ಮೊಸರು, ಲಸ್ಸಿ, ಮಜ್ಜಿಗೆಯನ್ನು ಜಿಎಸ್​ಟಿ ವ್ಯಾಪ್ತಿಗೆ ತರುವ ಮಹತ್ವದ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಹೀಗಾಗಿ ಈ ಬಾರಿಯ ಜಿಎಸ್​ಟಿ ಮಂಡಳಿ ಸಭೆ ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ