Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಸೀಟು ಹಂಚಿಕೆ ಚರ್ಚಿಸಲು ಪ್ರಧಾನ ಮಂತ್ರಿ ನಿವಾಸಕ್ಕೆ ತೆರಳಿದ ಪ್ರಮುಖ ಜೆಡಿಎಸ್ ನಾಯಕರು

ಲೋಕಸಭಾ ಚುನಾವಣೆ: ಸೀಟು ಹಂಚಿಕೆ ಚರ್ಚಿಸಲು ಪ್ರಧಾನ ಮಂತ್ರಿ ನಿವಾಸಕ್ಕೆ ತೆರಳಿದ ಪ್ರಮುಖ ಜೆಡಿಎಸ್ ನಾಯಕರು

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 21, 2023 | 1:34 PM

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಕೇವಲ 19 ಸ್ಥಾನಗಳನ್ನು ಮಾತ್ರ ಗೆದ್ದ ಜೆಡಿಎಸ್ ನಾಯಕರಿಗೆ ತಮಗಿಷ್ಟು ಸ್ಥಾನಗಳು ಬೇಕಬೇಕೆಂದು ಪಟ್ಟು ಹಿಡಿಯುದು ಸಾಧ್ಯವಾಗಲಾರದು. ಬಿಜೆಪಿ ವರಿಷ್ಠರು ನೀಡಿವಷ್ಟು ಸ್ಥಾನಗಳನ್ನು ಮರುಮಾತಿಲ್ಲದೆ ಸ್ವೀಕರಿಸಬೇಕು. ಮಾತುಕತೆಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯದ ನಾಯಕರನ್ನು ಕರೆಸದಿರುವುದು ಗಮನಾರ್ಹ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಫೋನ್ ಸಂಭಾಷಣೆ ನಡೆಸುವ ಸಾಧ್ಯತೆ ಇದೆ.

ದೆಹಲಿ: ಲೋಕಸಭಾ ಚುನಾವಣೆ (Lok Sabha polls) ಕೂಗಳತೆ ದೂರದಲ್ಲಿದೆ ಮತ್ತು ರಾಜ್ಯದಲ್ಲಿ ಎಲ್ಲ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಈ ಚುನಾವಣೆಗಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಏರ್ಪಟ್ಟಿರೋದು ಹಳೆಯ ಸುದ್ದಿ. ಹೊಸ ಸುದ್ದಿಯೆಂದರೆ, ಸೀಟು ಹಂಚಿಕೆ ವಿಷಯದಲ್ಲಿ ಚರ್ಚೆ ನಡೆಸಲು ಜೆಡಿಎಸ್ ಪಕ್ಷದ ಅಗ್ರ ನಾಯಕರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಭೇಟಿಯಾಗಿದ್ದು. ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡ (HD Devegowda), ರಾಜ್ಯಾಧ್ಯಕ್ಷ ಮತ್ತು ಶಾಸಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಶಾಸಕ ಹೆಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೆವಣ್ಣ ಮತ್ತು ಬೇರೆ ಒಂದಿಬ್ಬರು ದೆಹಲಿಯಲ್ಲಿರುವ ದೇವೇಗೌಡರ ನಿವಾಸದಿಂದ ಪ್ರಧಾನ ಮಂತ್ರಿಯವರ ನಿವಾಸದ ಕಡೆ ಕಾರುಗಳಲ್ಲಿ ತೆರಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕುಮಾರಸ್ವಾಮಿ ಮತ್ತು ದೇವೇಗೌಡ 6-8 ಸ್ಥಾನಗಳಿಗಾಗಿ ಬೇಡಿಕೆ ಇಡುವ ಮಾಹಿತಿ ಸಿಕ್ಕಿದೆ. ಆದರೆ, ಬಿಜೆಪಿ ಹೈಕಮಾಂಡ್ 4 ಕ್ಕಿಂತ ಹೆಚ್ಚು ಸ್ಥಾನ ನೀಡುವ ಸಾಧ್ಯತೆ ಇಲ್ಲವೆಂದು ರಾಜಕೀಯ ತಜ್ಞರು ಅಭಿಪ್ರಾಯಪಡುತ್ತಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ