AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HDFC Bank FD Rate: ಎಚ್​ಡಿಎಫ್​ಸಿ ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್​ ಬಡ್ಡಿ ದರಗಳ ಹೆಚ್ಚಳ

ಖಾಸಗಿ ಬ್ಯಾಂಕ್ ಆದ ಎಚ್​ಡಿಎಫ್​ಸಿ ಬ್ಯಾಂಕ್​ನಿಂದ ಫೆಬ್ರವರಿ 14ನೇ ತಾರೀಕಿನಿಂದ ಅನ್ವಯ ಆಗುವಂತೆ ಫಿಕ್ಸೆಡ್​ ಡೆಪಾಸಿಟ್​ಗಳ ಮೇಲಿನ ಬಡ್ಡಿ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.

HDFC Bank FD Rate: ಎಚ್​ಡಿಎಫ್​ಸಿ ಬ್ಯಾಂಕ್​ ಫಿಕ್ಸೆಡ್​ ಡೆಪಾಸಿಟ್​ ಬಡ್ಡಿ ದರಗಳ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata

Updated on: Feb 18, 2022 | 1:00 AM

Share

ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ (HDFC Bank) ನಿಶ್ಚಿತ ಠೇವಣಿಗಳನ್ನು ಹೊಂದಿರುವ ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಮುಖ್ಯವಾಗಿ, ಬ್ಯಾಂಕ್​ನಿಂದ ಕೆಲವು ಅವಧಿಯ ಫಿಕ್ಸೆಡ್​ ಡೆಪಾಸಿಟ್​ಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಇದನ್ನು ಬ್ಯಾಂಕ್​ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಬ್ಯಾಂಕ್‌ನ ಅಪ್​ಡೇಟ್​ ಪ್ರಕಾರ, 2 ಕೋಟಿ ರೂಪಾಯಿಗಿಂತ ಕಡಿಮೆ ಠೇವಣಿಗಳ ಮೇಲಿನ ಬಡ್ಡಿದರಗಳನ್ನು 5ರಿಂದ 10 ಬೇಸಿಸ್ ಪಾಯಿಂಟ್‌ ಹೆಚ್ಚಿಸಲಾಗಿದೆ ಮತ್ತು ಪರಿಷ್ಕೃತ ದರಗಳು ಫೆಬ್ರವರಿ 14ರಿಂದ ಅನ್ವಯವಾಗುತ್ತವೆ. ಇದರ ಹೊರತಾಗಿ, ಖಾಸಗಿ ಬ್ಯಾಂಕ್​ ಒಂದು ವರ್ಷದ ಅವಧಿಯ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿ ದರವನ್ನು 10 ಬೇಸಿಸ್ ಪಾಯಿಂಟ್‌ಗಳಿಂದ ಹಿಂದಿನ ಶೇ 4.9ರಿಂದ ಶೇ 5ಕ್ಕೆ ಹೆಚ್ಚಿಸಿದೆ.

ಅಲ್ಲದೆ, 1-2 ವರ್ಷಗಳ ಮಧ್ಯದ ಅವಧಿಯನ್ನು ಹೊಂದಿರುವ ಠೇವಣಿಗಳ ಮೇಲಿನ ಬಡ್ಡಿ ದರವು ಶೇ 5 ಆಗಿದೆ. ಎರಡು-ಮೂರು ವರ್ಷಗಳ ಅವಧಿಯ ಫಿಕ್ಸೆಡ್ ಡೆಪಾಸಿಟ್​ಗಳ ಮೇಲಿನ ಬಡ್ಡಿ ದರವು ಶೇ 5.20 ಎಂದು ಬ್ಯಾಂಕ್ ಹೇಳಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಪ್ರಕಾರ, 3ರಿಂದ 5 ವರ್ಷಗಳ ಅವಧಿಯ ಠೇವಣಿಗಳ ಮೇಲಿನ ದರಗಳನ್ನು 5 ಬೇಸಿಸ್ ಪಾಯಿಂಟ್‌ಗಳಿಂದ ಶೇ 5.45ಕ್ಕೆ ಹೆಚ್ಚಿಸಲಾಗಿದೆ. 5ರಿಂದ 10 ವರ್ಷಗಳ ಅವಧಿಯೊಂದಿಗೆ ಠೇವಣಿಗಳ ಮೇಲಿನ ಎಫ್​ಡಿ ದರವು ಪ್ರಸ್ತುತ ಶೇ 5.60 ಆಗಿದೆ. ಕಳೆದ ವಾರ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಯುಕೊ ಬ್ಯಾಂಕ್ ಕೂಡ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಪರಿಷ್ಕರಿಸಿದ್ದವು.

ಇನ್ನೂ ಅಚ್ಚರಿ ಎಂಬಂಥ ಕ್ರಮದಲ್ಲಿ, ಆರ್​ಬಿಐ ಹಣಕಾಸು ನೀತಿ ಸಮಿತಿಯು ಕಳೆದ ವಾರ ದರಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿತು. ರೆಪೊ ದರ ಪ್ರಸ್ತುತ ಶೇ 4 ಮತ್ತು ರಿವರ್ಸ್ ರೆಪೊ ದರ ಶೇ 3.35ರಲ್ಲಿದೆ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: HDFC Bank Q3 Results: ಎಚ್​ಡಿಎಫ್​ಸಿ ಬ್ಯಾಂಕ್ ಮೂರನೇ ತ್ರೈಮಾಸಿಕ ಲಾಭ 10342 ಕೋಟಿ ರೂಪಾಯಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು