AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​ಡಿಎಫ್​ಸಿ ಬ್ಯಾಂಕ್ ನೋಟೀಸ್ ಪೀರಿಯಡ್ ಅವಧಿ 90ರಿಂದ 30 ದಿನಗಳಿಗೆ ಇಳಿಕೆ

HDFC bank employees notice period reduced: ರಾಜೀನಾಮೆ ನೀಡಿದ ಬಳಿಕ ಉದ್ಯೋಗಿಗಳ ಪ್ರೊಬೇಶನ್ ಅವಧಿಯನ್ನು ಎಚ್​ಡಿಎಫ್​ಸಿ ಬ್ಯಾಂಕ್ 90 ದಿನಗಳಿಂದ 30 ದಿನಗಳಿಗೆ ಇಳಿಸಿದೆ. ಹಿಂದೆಲ್ಲಾ ಉದ್ಯೋಗಿಗಳು ರಾಜೀನಾಮೆ ನೀಡಿದ ಬಳಿಕ 90 ದಿನಗಳವರೆಗೆ ನೋಟೀಸ್ ಪೀರಿಯಡ್ ಸರ್ವ್ ಮಾಡಬೇಕಿತ್ತು. ಈಗ 30 ದಿನ ಮಾಡಿದರೆ ಸಾಕು. ಉದ್ಯೋಗಿ ಬಯಸಿದರೆ ಮತ್ತು ರಿಪೋರ್ಟಿಂಗ್ ಮ್ಯಾನೇಜರ್ ಅಂಗೀಕರಿಸಿದರೆ 30 ದಿನದೊಳಗೆ ರಿಲೀವ್ ಮಾಡಬಹುದಾಗಿದೆ.

ಎಚ್​ಡಿಎಫ್​ಸಿ ಬ್ಯಾಂಕ್ ನೋಟೀಸ್ ಪೀರಿಯಡ್ ಅವಧಿ 90ರಿಂದ 30 ದಿನಗಳಿಗೆ ಇಳಿಕೆ
ಎಚ್​ಡಿಎಫ್​ಸಿ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2024 | 10:35 AM

Share

ನವದೆಹಲಿ, ಮೇ 13: ಎಚ್​ಡಿಎಫ್​ಸಿ ಬ್ಯಾಂಕ್ ತನ್ನ ಉದ್ಯೋಗಿಗಳಿಗೆ ನೋಟೀಸ್ ಪೀರಿಯಡ್ (Notice period)​ ಅವಧಿಯನ್ನು ಕಡಿಮೆಗೊಳಿಸಿದೆ. ಫೈನಾನ್ಷಿಯಲ್ ಎಕ್ಸ್​ಪ್ರೆಸ್ ವರದಿ ಪ್ರಕಾರ 90 ದಿನಗಳಷ್ಟು ಇದ್ದ ನೋಟೀಸ್ ಪೀರಿಯಡ್ ಅವಧಿಯನ್ನು 30 ದಿನಗಳಿಗೆ ಇಳಿಸಲಾಗಿದೆ. ರಾಜೀನಾಮೆ ನೀಡಿದ ಉದ್ಯೋಗಿಗಳು ಈಗ 30 ತಿಂಗಳು ನೋಟೀಸ್ ಪೀರಿಯಡ್ ಸರ್ವ್ ಮಾಡಿದರೆ ಸಾಕಾಗುತ್ತದೆ. ನಾಲ್ಕು ವರ್ಷಗಳ ಹಿಂದೆ ಐಸಿಐಸಿಐ ಬ್ಯಾಂಕ್ ಕೂಡ ನೋಟೀಸ್ ಪೀರಿಯಡ್ ಅವಧಿಯನ್ನು 90 ದಿನಗಳಿಂದ 30 ದಿನಗಳಿಗೆ ಇಳಿಸಿತ್ತು. ಈಗ ಎಚ್​ಡಿಎಫ್​ಸಿ ಬ್ಯಾಂಕ್ ಕೂಡ ಈ ಹೆಜ್ಜೆ ಇಟ್ಟಿದೆ. ಇದರೊಂದಿಗೆ ಉದ್ಯೋಗಿಗಳಿಗೆ ಅನುಕೂಲ ಆಗಬಹುದು.

ಈಗ ಪ್ರೊಬೇಶನ್​ನಲ್ಲಿರುವ ಉದ್ಯೋಗಿ 30 ದಿನ ನೋಟೀಸ್ ಅವಧಿ ಕೆಲಸ ಮಾಡಬೇಕಾಗುತ್ತದೆ. ಈ ಉದ್ಯೋಗಿ ಮನವಿ ಮೇರೆಗೆ ಅವರ ರಿಪೋರ್ಟಿಂಗ್ ಮ್ಯಾನೇಜರ್ ಬೇಕಿದ್ದಲ್ಲಿ 30 ದಿನದೊಳಗೆ ರಿಲೀವ್ ಮಾಡಬಹುದು. ಉದ್ಯೋಗಿ ಇಚ್ಛಿಸಿದಲ್ಲಿ ಅವರು ಪೂರ್ಣ 30 ದಿನ ನೋಟೀಸ್ ಪೀರಿಯಡ್ ಸರ್ವ್ ಮಾಡಬಹುದು. ದೇಶದ ಬಹುತೇಕ ಪ್ರಮುಖ ಬ್ಯಾಂಕುಗಳ ಉದ್ಯೋಗಿಗಳು ರಾಜೀನಾಮೆ ಸಲ್ಲಿಸಿದ ಬಳಿಕ 90 ದಿನಗಳ ನೋಟೀಸ್ ಪೀರಿಯಡ್ ಸರ್ವ್ ಮಾಡಬೇಕಾಗುತ್ತದೆ.

ಎಚ್​ಡಿಎಫ್​ಸಿ ಬ್ಯಾಂಕ್ ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಆಗಿದ್ದು, 2023ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ಉದ್ಯೋಗಿಗಳ ಸಂಖ್ಯೆ 2 ಲಕ್ಷ ದಾಟಿದೆ. 2024ರ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಎಚ್​ಡಿಎಫ್​ಸಿ ಬ್ಯಾಂಕ್​ನ ನಿವ್ವಳ ಲಾಭ 16,511.85 ಕೋಟಿ ರೂ ಆಗಿದೆ. ಕಳೆದ ಬಾರಿಗಿಂತ ಲಾಭದಲ್ಲಿ ಬರೋಬ್ಬರಿ ಶೇ. 37.05ರಷ್ಟು ಹೆಚ್ಚಳವಾಗಿದೆ. ನಿವ್ವಳ ಬಡ್ಡಿ ಆದಾಯ 23,351 ಕೋಟಿ ರೂ ಇದ್ದದ್ದು 29,076 ಕೋಟಿ ರೂಗೆ ಏರಿದೆ.

ಇದನ್ನೂ ಓದಿ: ಎಸ್​ಬಿಐನಿಂದ ನಡೆಯಲಿದೆ 12,000 ಹುದ್ದೆಗಳ ನೇಮಕಾತಿ; ಎಂಜಿನಿಯರಿಂಗ್ ಮಾಡಿದ್ದರೆ ಸುವರ್ಣಾವಕಾಶ

ಇಡೀ ವರ್ಷದ ಆದಾಯ ಪರಿಗಣಿಸುವುದಾದರೆ 2023-24ರ ಹಣಕಾಸು ವರ್ಷದಲ್ಲಿ ಎಚ್​ಡಿಎಫ್​ಸಿ ಬ್ಯಾಂಕ್​ನ ನಿವ್ವಳ ಆದಾಯ 60,810 ಕೋಟಿ ರೂ ಇದೆ. ಹಿಂದಿನ ಹಣಕಾಸು ವರ್ಷದಲ್ಲಿ ಗಳಿಸಿದ್ದಕ್ಕಿಂತ ಶೇ 37.9ರಷ್ಟು ನಿವ್ವಳ ಲಾಭದಲ್ಲಿ ಹೆಚ್ಚಳವಾಗಿದೆ.

ಇತರ ಬ್ಯಾಂಕುಗಳಂತೆ ಎಚ್​ಡಿಎಫ್​ಸಿ ಬ್ಯಾಂಕ್​ನ ಷೇರುಬೆಲೆ ಇತ್ತೀಚೆಗೆ ಇಳಿಕೆ ಆಗುತ್ತಿದೆ. ಸೋಮವಾರದ ಬೆಳಗಿನ ವಹಿವಾಟಿನಲ್ಲಿ ಬಿಎಸ್​ಇನಲ್ಲಿ ಅದರ ಷೇರುಬೆಲೆ 1,434 ರೂ ಇದೆ. 2023-24ರ ಹಣಕಾಸು ವರ್ಷಕ್ಕೆ ಎಚ್​ಡಿಎಫ್​ಸಿ ಬ್ಯಾಂಕ್​ನ ಒಂದು ಈಕ್ವಿಟಿ ಷೇರಿಗೆ 19.50 ರೂನಂತೆ ಡಿವಿಡೆಂಡ್ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ