ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್

Know How to Claim Crop Insurance compensation: ಬೇಸಿಗೆಯ ಬಿಸಿಗಾಳಿಗೆ ರೈತರ ಬೆಳೆಗಳು ನಾಶವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೇಂದ್ರದ ಪಿಎಂ ಫಸಲ್ ಬಿಮಾ ಯೋಜನೆಯಲ್ಲಿ ನೈಸರ್ಗಿಕ ವಿಕೋಪಗಳಿಂದ ಬೆಳೆ ನಾಶವಾದರೆ ಪರಿಹಾರ ಪಡೆಯಬಹುದು. ಇದರಲ್ಲಿ ಹೀಟ್​ವೇವ್ ಅಥವಾ ಬಿಸಿಗಾಳಿಯ ವಿಕೋಪವೂ ಇದೆ. ಬಿಸಿಗಾಳಿಯಿಂದ ಅಥವಾ ಇನ್ಯಾವುದಾದರೂ ಪ್ರಾಕೃತಿಕ ವಿಕೋಪಗಳಿಂದ ಬೆಳೆ ನಾಶವಾದರೆ, ಆ ಅವಘಡವಾಗಿ 72 ಗಂಟೆ ಅಥವಾ ಮೂರು ದಿನದೊಳಗೆ ಇನ್ಷೂರೆನ್ಸ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. 14 ದಿನದಲ್ಲಿ ಪರಿಹಾರ ಸಿಗುವ ಸಾಧ್ಯತೆ ಇದೆ.

ಬಿರುಬಿಸಿಲಿಗೆ ಬೆಳೆನಾಶದ ಭಯ; ರೈತರು ಬೆಳೆವಿಮೆ ಯೋಜನೆಯ ಲಾಭ ಪಡೆಯುವುದು ಹೇಗೆ? ಇಲ್ಲಿದೆ ಡೀಟೇಲ್ಸ್
ಬೆಳೆನಾಶಕ್ಕೆ ಪರಿಹಾರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2024 | 12:27 PM

ಈ ಬಾರಿ ಬೇಸಿಗೆಯಲ್ಲಿ ಬಿಸಿ ಬಹಳ ಅಧಿಕ ಮಟ್ಟದಲ್ಲಿ ಇದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಬಿಸಿಗಾಳಿಯ ಕಾಟ ತೀವ್ರವಾಗಿದೆ. ರೈತರ ಬೆಳೆಗಳಿಗೆ ಈ ಬಾರಿ ಹೆಚ್ಚು ಹಾನಿಯಾಗುವ (crop loss) ಸಾಧ್ಯತೆ ದಟ್ಟವಾಗಿದೆ. ಸಾಕಷ್ಟು ಖರ್ಚು ಮಾಡಿ ಬೆಳೆದ ಬೆಳೆ ಕೈಕೊಟ್ಟರೆ ರೈತರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ. ಸಾಲದ ವಿಷವರ್ತುಲಕ್ಕೆ ಸಿಲುಕಬೇಕಾಗುತ್ತದೆ. ಅದಕ್ಕಾಗಿ ಸರ್ಕಾರ ಬೆಳೆ ವಿಮೆ ಯೋಜನೆಯನ್ನು ರೈತರಿಗಾಗಿ ಜಾರಿಗೆ ತಂದಿದೆ. ಪಿಎಂ ಫಸಲ್ ಬಿಮಾ ಯೋಜನೆ (PM Fasal Bima Yojana) 2016ರಲ್ಲಿ ಜಾರಿಗೆ ಬಂದಿದ್ದು, ಸಾಕಷ್ಟು ರೈತರಿಗೆ ಇದು ಸಮಾಧಾನದ ನಿಟ್ಟುಸಿರು ಬಿಡುವಂತೆ ಮಾಡಿದೆ.

ನೈಸರ್ಗಿಕ ವಿಕೋಪಗಳಿಂದ ಮತ್ತು ಅವಘಡಗಳಿಂದ ಬೆಳೆಗಳಿಗೆ ಹಾನಿಯಾದರೆ ವಿಮಾ ಯೋಜನೆ ಮೂಲಕ ಪರಿಹಾರ ಪಡೆಯಬಹುದು. ಅತಿವೃಷ್ಟಿ, ಅನಾವೃಷ್ಟಿ, ಬಿಸಿಗಾಳಿ, ಚಂಡಮಾರುತ, ಭೂಕುಸಿತ ಇತ್ಯಾದಿ ಪ್ರಾಕೃತಿಕ ಅವಘಡಗಳಿಂದ ಬೆಳೆ ನಾಶವಾದರೆ ರೈತರಿಗೆ ಪರಿಹಾರ ಸಿಗುತ್ತದೆ.

ಇದನ್ನೂ ಓದಿ: ಕಡಿಮೆ ಸಂಬಳ ಇದ್ದರೆ, ಉದ್ಯೋಗ ಕಳೆದುಕೊಂಡರೆ ಸಿಬಿಲ್ ಸ್ಕೋರ್ ಕಡಿಮೆ ಆಗುತ್ತಾ? ಇಲ್ಲಿದೆ ವಾಸ್ತವಿಕ ಅಂಶಗಳು

ಬೆಳೆನಾಶಕ್ಕೆ ಪರಿಹಾರ ಹೇಗೆ ಪಡೆಯುವುದು?

ಪ್ರಾಕೃತಿಕ ಅವಘಡದಿಂದ ಬೆಳೆ ನಾಶವಾದರೆ, ಆ ಘಟನೆಯಾಗಿ 72 ಗಂಟೆಯೊಳಗೆ ಸಂಬಂಧಿತ ಇನ್ಷೂರೆನ್ಸ್ ಕಂಪನಿ ಅಥವಾ ಸ್ಥಳೀಯ ಕೃಷಿ ಕಚೇರಿಗೆ ಮಾಹಿತಿ ನೀಡಬೇಕು. ಆಗ ಸಂಬಂಧಿತ ಅಧಿಕಾರಿಗಳು ಹಾನಿ ಎಷ್ಟಾಗಿದೆ ಎಂದು ಅಂದಾಜಿಸಲು ಸಾಧ್ಯವಾಗುತ್ತದೆ. ಇದಾದ ಬಳಿಕ ಪರಿಹಾರ ಪ್ರಕ್ರಿಯೆ ಚಾಲನೆಗೊಳ್ಳುತ್ತದೆ. ಬಿಸಿಗಾಳಿಯಿಂದ ಬೆಳೆಗೆ ಹಾನಿಯಾಗಿದ್ದರೂ 72 ಗಂಟೆಯೊಳಗೆ ಕೃಷಿ ಕಚೇರಿಯ ಗಮನಕ್ಕೆ ತರಬೇಕಾಗುತ್ತದೆ.

ಇದನ್ನೂ ಓದಿ: 50 ರೂ ಇಟ್ಟುಕೊಂಡು ದೇಶ ಬಿಟ್ಟು, ಬ್ರೂನೇ ಸುಲ್ತಾನರಿಂದ ಶಭಾಷ್​ಗಿರಿ ಪಡೆಯುವ ಮಟ್ಟಕ್ಕೆ ಬೆಳೆದ ರಿಯಲ್ ಎಸ್ಟೇಟ್ ಕಿಂಗ್

ಶೇ. 33ರಷ್ಟು ಬೆಳೆ ನಾಶವಾಗಿರಬೇಕು

ರೈತರು ಪಿಎಂ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಬೆಳೆ ಪರಿಹಾರ ಪಡೆಯುವುದಾದರೆ, ಕನಿಷ್ಠ ಶೇ. 33ರಷ್ಟಾದರೂ ಬೆಳೆಗೆ ಹಾನಿಯಾಗಿರಬೇಕು. ಆಗ ಪರಿಹಾರ ಕ್ಲೈಮ್ ಮಾಡಲು ಅರ್ಹರಿರುತ್ತೀರಿ. ಸಾಮಾನ್ಯವಾಗಿ ನೀವು ಇನ್ಷೂರೆನ್ಸ್ ಕ್ಲೈಮ್​ಗೆ ಅರ್ಜಿ ಸಲ್ಲಿಸಿದ 14 ದಿನದಲ್ಲಿ ಪರಿಹಾರ ಹಣ ನಿಮ್ಮ ಖಾತೆಗೆ ಬಂದಿರುತ್ತದೆ.

ಹೆಚ್ಚಿನ ಮಾಹಿತಿಗೆ ಫಸಲ್ ಬಿಮಾ ಯೋಜನೆಯ ಅಧಿಕೃತ ವೆಬ್​ಸೈಟ್​ನಲ್ಲಿ ನೋಡಬಹುದು: pmfby.gov.in/

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್