AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಹೆಚ್ಚು ತೆರಿಗೆ ವಿಧಿಸಿ ತಂಬಾಕು ಉತ್ಪನ್ನ ಖರೀದಿಸದಂತೆ ಮಾಡಿ; ಸರ್ಕಾರಕ್ಕೆ ತಜ್ಞರ ಆಗ್ರಹ

ಸಿಗರೇಟ್, ಗುಟ್ಕಾದಂಥ ತಂಬಾಕು ಉತ್ಪನ್ನಗಳ ಮೇಲೆ ಅತಿಹೆಚ್ಚು ತೆರಿಗೆ ವಿಧಿಸಿ ಅವುಗಳನ್ನು ಜನ ಖರೀದಿಸುವುದೇ ಕಡಿಮೆಯಾಗುವಂತೆ ಮಾಡಬೇಕು ಎಂಬ ಒಕ್ಕೊರಲ ಆಗ್ರಹ ಆರ್ಥಿಕ ತಜ್ಞರು, ಆರೋಗ್ಯ ಕ್ಷೇತ್ರದ ಪರಿಣತರಿಂದ ವ್ಯಕ್ತವಾಗಿದೆ.

ಅತಿಹೆಚ್ಚು ತೆರಿಗೆ ವಿಧಿಸಿ ತಂಬಾಕು ಉತ್ಪನ್ನ ಖರೀದಿಸದಂತೆ ಮಾಡಿ; ಸರ್ಕಾರಕ್ಕೆ ತಜ್ಞರ ಆಗ್ರಹ
ಸಾಂದರ್ಭಿಕ ಚಿತ್ರ : ಧೂಮಪಾನ-ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ
ಗಣಪತಿ ಶರ್ಮಾ
| Edited By: |

Updated on:Feb 13, 2023 | 3:13 PM

Share

ನವದೆಹಲಿ: ಸಿಗರೇಟ್, ಗುಟ್ಕಾದಂಥ ತಂಬಾಕು ಉತ್ಪನ್ನಗಳ (Tobacco Products) ಮೇಲೆ ಅತಿಹೆಚ್ಚು ತೆರಿಗೆ (Tax) ವಿಧಿಸಿ ಅವುಗಳನ್ನು ಜನ ಖರೀದಿಸುವುದೇ ಕಡಿಮೆಯಾಗುವಂತೆ ಮಾಡಬೇಕು ಎಂಬ ಒಕ್ಕೊರಲ ಆಗ್ರಹ ಆರ್ಥಿಕ ತಜ್ಞರು, ಆರೋಗ್ಯ ಕ್ಷೇತ್ರದ ಪರಿಣತರಿಂದ ವ್ಯಕ್ತವಾಗಿದೆ. ದೆಹಲಿಯಲ್ಲಿ ತಂಬಾಕು ಮುಕ್ತ ಸಂಘಟನೆಯು (Tobacco Free India) ಆಯೋಜಿಸಿದ್ದ ‘ಅಮೃತಕಾಲ: ತಂಬಾಕು ಮುಕ್ತ ಭಾರತದತ್ತ ಒಂದು ಪಯಣ’ ಎಂಬ ಕಾರ್ಯಕ್ರಮದಲ್ಲಿ ತಜ್ಞರು ತಂಬಾಕು ಉತ್ಪನ್ನಗಳ ಮೇಲೆ ಇನ್ನಷ್ಟು ತೆರಿಗೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜತೆಗೆ, ಈ ಬಾರಿಯ ಬಜೆಟ್​​ನಲ್ಲಿ ಸಿಗರೇಟ್ ಮೇಲಿನ ತೆರಿಗೆ ಹೆಚ್ಚಳವನ್ನು ಸ್ವಾಗತಿಸಿದ್ದಾರೆ.

ಸಿಗರೇಟ್ ಮೇಲಿನ ಸುಂಕವನ್ನು ಶೇ 16ರಷ್ಟು ಹೆಚ್ಚಳ ಮಾಡಿರುವುದು ಸರ್ಕಾರದ ಉದ್ದೇಶವೇನೆಂಬುದನ್ನು ಸ್ಪಷ್ಟಪಡಿಸಿದೆ. ತೆರಿಗೆ ಹೆಚ್ಚಿಸುವ ಮೂಲಕ ತಂಬಾಕು ನಿಯಂತ್ರ ನೀತಿಯನ್ನು ಇನ್ನಷ್ಟು ಕಠಿಣಗೊಳಿಸಲು ಸರ್ಕಾರ ಮುಂದಾಗಿದೆ. ತಂಬಾಕು ಉತ್ಪನ್ನಗಳ ಪರಿಣಾಮ ದೇಶದಲ್ಲಿ ವಾರ್ಷಿಕ 13 ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಪಾಯಕಾರಿ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸುವ ಮೂಲಕ ಅವುಗಳ ಬಳಕೆ ಕಡಿಮೆ ಮಾಡುವುದು ಉತ್ತಮ ವಿಧಾನ ಎಂದು ಅರ್ಥಶಾಸ್ತ್ರಜ್ಞ, ಬಿಜೆಪಿ ವಕ್ತಾರ ಗೋಪಾಲ ಕೃಷ್ಣ ಅಗರ್​ವಾಲ್ ಹೇಳಿದ್ದಾರೆ.

‘ತೆರಿಗೆ ದರವನ್ನು ವಿಪರೀತ ಹೆಚ್ಚಿಸುವ ಮೂಲಕ ತಂಬಾಕು ಉತ್ಪನ್ನಗಳ ಲಭ್ಯತೆ ಕಡಿಮೆ ಮಾಡಬೇಕು ಹಾಗೂ ಅದು ಜನರ ಕೈಗೆ ಸಿಗದಂತೆ ಮಾಡಬೇಕು. ಜನರು ಅಂಥ ಅಪಾಯಕಾರಿ ಉತ್ಪನ್ನಗಳ ಬಗ್ಗೆ ಜಾಗೃತಿ ಹೊಂದುವಂತೆ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Ujjivan Small Finance Bank: 560 ದಿನಗಳ ಠೇವಣಿಗೆ ಶೇ 8.20ರ ವರೆಗೆ ಬಡ್ಡಿ ನೀಡುತ್ತಿದೆ ಈ ಬ್ಯಾಂಕ್

ಪ್ರಸ್ತುತ ಸಿಗರೇಟ್ ಮೇಲೆ ಒಟ್ಟು ಶೇ 53ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಬೀಡಿಗಳ ಮೇಲೆ ಶೇ 22ರಷ್ಟು ಮತ್ತು ಹೊಗೆರಹಿತ ತಂಬಾಕಿನ ಮೇಲೆ ಶೇ 60ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಹೀಗಾಗಿ ತೆರಿಗೆಯನ್ನು ಇನ್ನೂ ಹೆಚ್ಚಿಸಲು ಸಾಕಷ್ಟು ಅವಕಾಶವಿದೆ. ಅದರಿಂದ ಉದ್ಯಮದ ಮೇಲೆ ಹೆಚ್ಚು ಪರಿಣಾಮವಾಗುವಿಲ್ಲ. ಆದರೆ ಖಂಡಿತವಾಗಿಯೂ ತಂಬಾಕು ಸೇವನೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ತಂಬಾಕು ಉತ್ಪನ್ನದ ಮೇಲೆ ಒಂದೇ ರೀತಿಯಲ್ಲಿ ಶೇ 75ರಷ್ಟು ತೆರಿಗೆ ವಿಧಿಸಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದೆ. ತಂಬಾಕು ಉತ್ಪನ್ನಗಳ ಮೇಲೆ ಈಗ ವಿಧಿಸುತ್ತಿರುವ ತೆರಿಗೆ ತುಂಬಾ ಕಡಿಮೆ ಇದೆ ಎಂಬುದಾಗಿ ಸಂಸದೀಯ ಸಮಿತಿಯೂ ಇತ್ತೀಚೆಗೆ ಹೇಳಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Mon, 13 February 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ