AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ವ್ಯಕ್ತಿ ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಲು ಅವಕಾಶವಿದೆ? ಈ ವಿಷ್ಯ ನಿಮ್ಗೆ ತಿಳಿದಿರಲಿ

ತುರ್ತು ಸಂದರ್ಭ ಎದುರಾದರೆಂದು ಮನೆಯಲ್ಲಿ ಸ್ವಲ್ಪ ಹಣವನ್ನು ಇಟ್ಟುಕೊಳ್ಳುತ್ತಾರೆ. ಆದರೆ, ಭಾರತದ ಆದಾಯ ತೆರಿಗೆ ಕಾಯ್ದೆಯ ಪ್ರಕಾರ ಮನೆಯಲ್ಲಿ ನಗದು ಹಣವನ್ನು ಇಟ್ಟುಕೊಳ್ಳಲು ಯಾವುದೇ ನಿರ್ದಿಷ್ಟ ಗರಿಷ್ಠ ಮಿತಿಯನ್ನು ವಿಧಿಸಿಲ್ಲ. ಆದರೆ ಮನೆಯಲ್ಲಿ ಇಟ್ಟುಕೊಳ್ಳುವ ಹಣಕ್ಕೆ ಆದಾಯದ ಮೂಲ ಹಾಗೂ ದಾಖಲೆಗಳು ಇರಲೇಬೇಕು.

ಒಬ್ಬ ವ್ಯಕ್ತಿ ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಲು ಅವಕಾಶವಿದೆ? ಈ ವಿಷ್ಯ ನಿಮ್ಗೆ ತಿಳಿದಿರಲಿ
ಸಾಂದರ್ಭಿಕ ಚಿತ್ರImage Credit source: DEV IMAGES/Moment/Getty Images
ಸಾಯಿನಂದಾ
|

Updated on: Sep 11, 2026 | 6:33 PM

Share

ಮುಖ್ಯಾಂಶಗಳು

  • ತುರ್ತು ಸಂದರ್ಭಗಳಿಗಾಗಿ ಇಂತಿಷ್ಟು ಹಣವನ್ನು ಮಾತ್ರ ಇಟ್ಟುಕೊಂಡಿರುತ್ತಾರೆ
  • ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಬಹುದು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ
  • ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ಮನೆಯಲ್ಲಿ ಇಷ್ಟೇ ನಗದು ಇಡಬೇಕು ಎನ್ನುವುದಿಲ್ಲ

ಇತ್ತೀಚೆಗಿನ ದಿನಗಳಲ್ಲಿ ಡಿಜಿಟಲ್ ಪಾವತಿಗಳು (online payment) ಹೆಚ್ಚಾಗಿವೆ. ಹೀಗಾಗಿ ಮನೆಯಲ್ಲಿ ತುರ್ತು ಸಂದರ್ಭಗಳಿಗಾಗಿ ಇಂತಿಷ್ಟು ಹಣವನ್ನು ಮಾತ್ರ ಇಟ್ಟಿಕೊಂಡಿರುತ್ತಾರೆ. ಆದರೆ ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಬಹುದು ಎಂಬುದು ತಿಳಿದಿದೆಯೇ. ಹೆಚ್ಚಿನವರಿಗೆ ಈ ಬಗ್ಗೆ ತಿಳಿದೇ ಇಲ್ಲ. ಆದರೆ ದಾಖಲೆಯೊಂದಿರುವ ನಗದು ಹಾಗೂ ತೆರಿಗೆ ಪಾವತಿಸಿದ ಎಷ್ಟು ಹಣವನ್ನು ಬೇಕಾದರೂ ಮನೆಯಲ್ಲಿಡಲು ಅವಕಾಶವಿದೆ.

ಮನೆಯಲ್ಲಿ ಎಷ್ಟು ನಗದು ಇಟ್ಟುಕೊಳ್ಳಬಹುದು?

ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ನೀವು ಮನೆಯಲ್ಲಿ ಇಷ್ಟೇ ನಗದು ಅಥವಾ ಹಣ ಇಡಬೇಕು ಎನ್ನುವುದಿಲ್ಲ. ಆದರೆ ಮನೆಗೆ ಆದಾಯ ತೆರಿಗೆ ದಾಳಿ ನಡೆಸಿದರೆ ಆ ಸಂದರ್ಭದಲ್ಲಿ ನೀವು ನಿಮ್ಮ ಬಳಿಯಿರುವ ಹಣದ ಮೂಲವನ್ನು ತೋರಿಸಬೇಕು. ಈ ವೇಳೆ ನಿಮಗೆ ಇಷ್ಟು ಮೊತ್ತ ಎಲ್ಲಿಂದ ಬಂದಿತು ಎಂಬ ದಾಖಲೆಗಳನ್ನು ಸಲ್ಲಿಸಬೇಕು. ನೀವು ಈ ಮೊತ್ತಕ್ಕೆ ನಿಮ್ಮ ಬಳಿ ಸರಿಯಾದ ಲೆಕ್ಕಪತ್ರ ಹಾಗೂ ತೆರಿಗೆ ಪಾವತಿಸಿದ ದಾಖಲೆ ಇರುವುದು ಕಡ್ಡಾಯ.

ಇದನ್ನೂ ಓದಿ: ಟರ್ಮ್ ಇನ್ಷೂರೆನ್ಸ್​ಗೆ ಏಜೆಂಟ್​ಗಳು ಶಿಫಾರಸು ಮಾಡೋದು ನೋಡಿದ್ದೀರಾ? ಇಲ್ಲಿವೆ ಉತ್ತಮ ಲಾಭ ತರುವ ಕೆಲ ಹೂಡಿಕೆಗಳು

ಆದಾಯದ ಮೂಲ ಇಲ್ಲದಿದ್ದರೆ ದಂಡ ಗ್ಯಾರಂಟಿ

ನಿಮ್ಮ ಬಳಿಯಿರುವ ಹಣವು ಎಲ್ಲಿಂದ ಬಂತು ಎಂಬ ದಾಖಲೆಗಳು ಅಥವಾ ಆದಾಯದ ಮೂಲವನ್ನು ತೋರಿಸಬೇಕು, ಆದಾಯ ತೆರಿಗೆ ರಿಟರ್ನ್ಸ್ ನಲ್ಲಿ ಈ ಬಗ್ಗೆ ಉಲ್ಲೇಖಿಸಿರಬೇಕು. ಒಂದು ವೇಳೆ ಆದಾಯದ ದಾಖಲೆಗಳು ಇಲ್ಲದೇ ಹೋದಲ್ಲಿ ಆ ಹಣವನ್ನು ಅಘೋಷಿತ ಆದಾಯವೆಂದು ಪರಿಗಣಿಸಲಾಗುತ್ತದೆ. ಆದಾಯ ತೆರಿಗೆ ಇಲಾಖೆಯೂ ದೊಡ್ಡ ಮೊತ್ತದ ದಂಡ ಮತ್ತು ತೆರಿಗೆ ವಿಧಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು