AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ಅವಧಿ ವಿಸ್ತರಣೆ; ಇದನ್ನು ಮಾಡುವ ಹಂತಹಂತದ ವಿವರಣೆ ಇಲ್ಲಿದೆ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಲಾಭವನ್ನು ಪಡೆಯುವುದಕ್ಕೆ ರೈತ ಫಲಾನುಭವಿಗಳು ಇಕೆವೈಸಿ ಪೂರ್ಣಗೊಳಿಸಬೇಕಾಗುತ್ತದೆ. ಅದು ಹೇಗೆ ಎಂಬುದರ ವಿವರ ಇಲ್ಲಿದೆ.

PM Kisan eKYC: ಪಿಎಂ ಕಿಸಾನ್ ಇಕೆವೈಸಿ ಅವಧಿ ವಿಸ್ತರಣೆ; ಇದನ್ನು ಮಾಡುವ ಹಂತಹಂತದ ವಿವರಣೆ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Jun 22, 2022 | 11:14 PM

Share

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಎಂಬುದು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಇದರ ಅಡಿ ನೋಂದಣಿ ಮಾಡಲಾದ ರೈತರಿಗೆ ವಾರ್ಷಿಕ 6,000 ರೂಪಾಯಿ ಆದಾಯದ ನೆರವನ್ನು ಮೂರು ಸಮಾನ ಕಂತುಗಳಲ್ಲಿ ಒದಗಿಸುತ್ತದೆ. ಮತ್ತೊಂದೆಡೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಿಎಂ ಕಿಸಾನ್ ಯೋಜನೆಯ (PM-KISAN) ಹಣಕಾಸಿನ ಪ್ರಯೋಜನವನ್ನು ಪಡೆಯಲು ರೈತರು ತಮ್ಮ ಕೆವೈಸಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಭಾರತ ಸರ್ಕಾರವು ಪಿಎಂ ಕಿಸಾನ್ (PM-Kisan) ಖಾತೆ ಕೆವೈಸಿ ಪೂರ್ತಿ ಮಾಡಲು ಗಡುವನ್ನು ವಿಸ್ತರಿಸಿದೆ. ಕೇಂದ್ರವು 2022ರ ಮೇ 31ರ ಗಡುವನ್ನು ನಿಗದಿಪಡಿಸಿತ್ತು, ಆದರೆ ರೈತರ ಅನುಕೂಲಕ್ಕಾಗಿ 11ನೇ ಕಂತು ರೂ. 2000 ಪಡೆಯಲು ಅದನ್ನು ಈಗ 31ನೇ ಜುಲೈ 2022ರ ವರೆಗೆ ವಿಸ್ತರಿಸಲಾಗಿದೆ.

ಪಿಎಂ ಕಿಸಾನ್ ಪೋರ್ಟಲ್ ಪ್ರಕಾರ, “ಪಿಎಂ ಕಿಸಾನ್ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC PMKISAN ಪೋರ್ಟಲ್‌ನಲ್ಲಿ ಲಭ್ಯವಿದೆ ಅಥವಾ ಬಯೋಮೆಟ್ರಿಕ್ ಆಧಾರಿತ eKYCಗಾಗಿ ಹತ್ತಿರದ ಸಿಎಸ್​ಸಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಎಲ್ಲ ಪಿಎಂಕಿಸಾನ್ ಫಲಾನುಭವಿಗಳಿಗೆ eKYCಯ ಗಡುವನ್ನು 31 ಜುಲೈ 2022ರ ವರೆಗೆ ವಿಸ್ತರಿಸಲಾಗಿದೆ.”

ಆಫ್​ಲೈನ್​ ಮೂಲಕ ಇಕೆವೈಸಿ ಪೂರ್ಣಗೊಳಿಸುವುದು ಹೇಗೆ ಅಂತ ನೋಡಿದರೆ, ಹತ್ತಿರದ ಸಿಎಸ್​ಸಿ ಸೆಂಟರ್​ ಅನ್ನು ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಭೇಟಿ ಮಾಡಬೇಕು. ಬಯೋಮೆಟ್ರಿಕ್ ಮಾಹಿತಿ ನೀಡುವ ಮೂಲಕ ಇಕೆವೈಸಿ ಸಾಧ್ಯ.

ಪಿಎಂ ಕಿಸಾನ್ ಯೋಜನೆಗಾಗಿ ಇಕೆವೈಸಿ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸುವುದು?

1. http://pmkisan.nic.in/ ಗೆ ಭೇಟಿ ನೀಡಿ ಮತ್ತು ‘ಫಾರ್ಮರ್ಸ್ ಕಾರ್ನರ್’ ವಿಭಾಗದ ಅಡಿಯಲ್ಲಿ ‘eKYC’ ಕ್ಲಿಕ್ ಮಾಡಿ.

2. ಈಗ ನಿಮ್ಮನ್ನು ‘OTP ಆಧಾರಿತ Ekyc’ ಪುಟಕ್ಕೆ ಮರು ನಿರ್ದೇಶಿಸಲಾಗುತ್ತದೆ, ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ನಂತರ ‘search’ ಕ್ಲಿಕ್ ಮಾಡಿ.

3. ನಿಮ್ಮ ಆಧಾರ್ ಸಂಖ್ಯೆಯನ್ನು ಪ್ರದರ್ಶಿಸಿದ ನಂತರ, ಆಧಾರ್‌ನೊಂದಿಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ನಂತರ ‘Get OTP’ ಕ್ಲಿಕ್ ಮಾಡಿ.

4. ನೀವು ಈಗ ನಿಮ್ಮ ನೋಂದಾಯಿತ ಅಥವಾ ಆಧಾರ್-ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯಲ್ಲಿ ಒಂದು-ಬಾರಿ ಪಾಸ್‌ವರ್ಡ್ (OTP) ಅನ್ನು ಪಡೆಯುತ್ತೀರಿ, ಅಗತ್ಯವಿರುವ ಕ್ಷೇತ್ರದಲ್ಲಿ OTP ಅನ್ನು ನಮೂದಿಸಿ ಮತ್ತು ಮುಂದುವರಿಯಿರಿ.

5. ಒಮ್ಮೆ OTP ಪರಿಶೀಲಿಸಿದ ನಂತರ, ಎಲ್ಲ ವಿವರಗಳು ಹೊಂದಾಣಿಕೆಯಾದರೆ eKYC ಕಾರ್ಯವು ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆ -ಕರ್ನಾಟಕದ 47.86 ಲಕ್ಷ ರೈತರಿಗೆ ನೇರವಾಗಿ 956.71 ಕೋಟಿ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published On - 11:14 pm, Wed, 22 June 22

ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ