AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುರುನ್ ಇಂಡಿಯಾ ರಿಚ್ ಲಿಸ್ಟ್ 2026: ಮುಕೇಶ್ ಅಂಬಾನಿ ಹಿಂದಿಕ್ಕಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ

M3M ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರಲ್ಲಿ ಮುಕೇಶ್ ಅಂಬಾನಿ ಅವವನ್ನು ಹಿಂದಿಕ್ಕಿದ ಗೌತಮ್ ಅದಾನಿ 9.23 ಲಕ್ಷ ಕೋಟಿ ರೂಪಾಯಿ ನಿವ್ವಳ ಸಂಪತ್ತಿನೊಂದಿಗೆ ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಅಗ್ರಸ್ಥಾನ ಪಡೆದಿದ್ದಾರೆ. ಅದಾನಿ ಕುಟುಂಬದ ಸಂಪತ್ತು 13% ಹೆಚ್ಚಳ ಕಂಡಿದ್ದರೆ, ಅಂಬಾನಿ ಕುಟುಂಬದ ಸಂಪತ್ತು 10% ಇಳಿಕೆಯಾಗಿದೆ. 93% ಸಂಪತ್ತು ಹೆಚ್ಚಳದೊಂದಿಗೆ ಎಂಟು ಸ್ಥಾನಗಳಷ್ಟು ಮೇಲೇರಿರುವ ಮಿತ್ತಲ್ ಕುಟುಂಬ ಮೂರನೇ ಸ್ಥಾನಕ್ಕೇರಿದೆ.

ಹುರುನ್ ಇಂಡಿಯಾ ರಿಚ್ ಲಿಸ್ಟ್ 2026: ಮುಕೇಶ್ ಅಂಬಾನಿ ಹಿಂದಿಕ್ಕಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ
ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿImage Credit source: PTI
ಪ್ರಸನ್ನ ಹೆಗಡೆ
|

Updated on:Sep 23, 2026 | 6:19 PM

Share

ನವದೆಹಲಿ, ಸೆಪ್ಟೆಂಬರ್​​ 23: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಕುಟುಂಬವು M3M ಹುರುನ್ ಇಂಡಿಯಾ ರಿಚ್ ಲಿಸ್ಟ್ 2026ರಲ್ಲಿ ಅಗ್ರಸ್ಥಾನ ಪಡೆದಿದೆ. 9.23 ಲಕ್ಷ ಕೋಟಿ ನಿವ್ವಳ ಸಂಪತ್ತಿನೊಂದಿಗೆ ಅದಾನಿ ಕುಟುಂಬವು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬವನ್ನು ಹಿಂದಿಕ್ಕಿದೆ. ಮುಕೇಶ್ ಅಂಬಾನಿ ಹಾಗೂ ಕುಟುಂಬವು 8.64 ಲಕ್ಷ ಕೋಟಿ ನಿವ್ವಳ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ಆರ್ಸೆಲರ್‌ ಮಿತ್ತಲ್‌ನ ಎಲ್.ಎನ್. ಮಿತ್ತಲ್ ಹಾಗೂ ಕುಟುಂಬವು 3.40 ಲಕ್ಷ ಕೋಟಿ ಸಂಪತ್ತಿನೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದೆ.

ಅದಾನಿ ಕುಟುಂಬದ ಸಂಪತ್ತು 13% ಹೆಚ್ಚಳ

ವರದಿಯ ಪ್ರಕಾರ, ಅದಾನಿ ಕುಟುಂಬದ ಸಂಪತ್ತು 13% ಹೆಚ್ಚಳ ಕಂಡಿದ್ದರೆ, ಅಂಬಾನಿ ಕುಟುಂಬದ ಸಂಪತ್ತು 10% ಇಳಿಕೆಯಾಗಿದೆ. 93% ಸಂಪತ್ತು ಹೆಚ್ಚಳದೊಂದಿಗೆ ಎಂಟು ಸ್ಥಾನಗಳಷ್ಟು ಮೇಲೇರಿರುವ ಮಿತ್ತಲ್ ಕುಟುಂಬ ಮೂರನೇ ಸ್ಥಾನಕ್ಕೇರಿದೆ. ಯುರೋಪ್‌ನಲ್ಲಿ ಉಕ್ಕಿನ ವ್ಯಾಪಾರದ ಮೇಲಿನ ಕಠಿಣ ನಿಯಮಗಳು ಹಾಗೂ ಬೆಲೆ ನಿಗದಿ ನೀತಿಗಳು ಈ ಏರಿಕೆಗೆ ಕಾರಣವೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಭಾರತದ ಜಿಡಿಪಿ ಬೆಳವಣಿಗೆ ಬಗ್ಗೆ ಹೆಚ್ಚಿದ ಭರವಸೆ; ಫಿಚ್ ಶೇ. 6.9, ಎಸ್&ಪಿ ಶೇ 7, ಒಇಸಿಡಿ ಶೇ. 7.1 ವೃದ್ಧಿಯ ಅಂದಾಜು

ಹುರುನ್ ವರದಿಯನ್ನು 1999ರಲ್ಲಿ ಲಂಡನ್‌ನಲ್ಲಿ ಸಂಶೋಧನೆ, ಐಷಾರಾಮಿ ಪ್ರಕಾಶನ ಮತ್ತು ಜಾಗತಿಕವಾಗಿ ಕಾರ್ಯನಿರ್ವಹಿಸುವ ಕಾರ್ಯಕ್ರಮಗಳ ಸಂಸ್ಥೆಯಾಗಿ ಸ್ಥಾಪಿಸಲಾಯಿತು. ಅನಾಸ್ ರಹಮಾನ್ ಜುನೈದ್ ನೇತೃತ್ವದಲ್ಲಿ 2012ರಲ್ಲಿ ಹುರುನ್ ಇಂಡಿಯಾ ಆರಂಭಗೊಂಡಿದ್ದು, ‘ಇಂಡಿಯಾ ರಿಚ್ ಲಿಸ್ಟ್’ ಮತ್ತು ‘ಇಂಡಿಯಾ 500’ ಸೇರಿದಂತೆ ವಿವಿಧ ಪಟ್ಟಿಗಳ ಮೂಲಕ ಸಂಪತ್ತು ಸೃಷ್ಟಿ, ನಾವೀನ್ಯತೆ ಮತ್ತು ಸಮಾಜಸೇವೆಯನ್ನು ಗುರುತಿಸುವ ಉದ್ದೇಶವನ್ನು ಇದು ಹೊಂದಿದೆ. ಇಂಡಿಯಾ ರಿಚ್ ಲಿಸ್ಟ್ 2026ರಲ್ಲಿ 1,000 ಕೋಟಿಗೂ ಅಧಿಕ ಸಂಪತ್ತು ಹೊಂದಿರುವ 1,810 ಮಂದಿ ಸ್ಥಾನ ಪಡೆದಿದ್ದಾರೆ. ಇವರ ಒಟ್ಟು ಸಂಪತ್ತು ವರ್ಷದಿಂದ ವರ್ಷಕ್ಕೆ 12.8% ಹೆಚ್ಚಳವಾಗಿ 187.5 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:16 pm, Wed, 23 September 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!