ICICI Bank Fixed Deposits: ಐಸಿಐಸಿಐ ಬ್ಯಾಂಕ್​ ಎಫ್​ಡಿ ಬಡ್ಡಿ ದರಗಳ ಪರಿಷ್ಕರಣೆ; ಎಷ್ಟು ಎಂಬ ಮಾಹಿತಿ ಇಲ್ಲಿದೆ

ಪ್ರಮುಖ ಖಾಸಗಿ ಬ್ಯಾಂಕ್​ ಆದ ಐಸಿಐಸಿಐ ಬ್ಯಾಂಕ್​ ನಿಶ್ಚಿತ ಠೇವಣಿ ಮೇಲಿನ ತನ್ನ ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ಆ ಬಗ್ಗೆ ಇಲ್ಲಿ ವಿವರ ಇಲ್ಲಿದೆ.

ICICI Bank Fixed Deposits: ಐಸಿಐಸಿಐ ಬ್ಯಾಂಕ್​ ಎಫ್​ಡಿ ಬಡ್ಡಿ ದರಗಳ ಪರಿಷ್ಕರಣೆ; ಎಷ್ಟು ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 01, 2021 | 11:29 PM

ಐಸಿಐಸಿಐ ಬ್ಯಾಂಕ್ (ICICI Bank) ನಿಶ್ಚಿತ ಠೇವಣಿಗಳ (Fixed Deposits) ಬಡ್ಡಿದರಗಳನ್ನು ಪರಿಷ್ಕರಿಸಿದೆ. 7 ದಿನಗಳಿಂದ 10 ವರ್ಷಗಳ ಅವಧಿಯವರೆಗೆ ಫಿಕ್ಸೆಡ್​ ಡೆಪಾಸಿಟ್​ಗಳನ್ನು ನೀಡುತ್ತದೆ. ಐಸಿಐಸಿಐ ಬ್ಯಾಂಕ್ ಶೇ 2.5ರಿಂದ ಶೇ 5.50ವರೆಗಿನ ಬಡ್ಡಿದರಗಳನ್ನು 7 ದಿನಗಳಿಂದ 10 ವರ್ಷಗಳಲ್ಲಿ ಮೆಚ್ಯೂರಿಟಿ ಠೇವಣಿಗಳ ಮೇಲೆ ನೀಡುತ್ತದೆ. ಈ ದರಗಳು 16ನೇ ನವೆಂಬರ್ 2021ರಿಂದ ಅನ್ವಯಿಸುತ್ತವೆ.

ಐಸಿಐಸಿಐ ಬ್ಯಾಂಕ್ ಸಾಮಾನ್ಯ ಜನರಿಗೆ ನೀಡುವ ಇತ್ತೀಚಿನ ಫಿಕ್ಸೆಡ್ ಡೆಪಾಸಿಟ್ ಬಡ್ಡಿ ದರಗಳು ಮತ್ತು ಅವಧಿ ಹೀಗಿದೆ (2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತಕ್ಕೆ): 7 ದಿನಗಳಿಂದ 14 ದಿನಗಳು – ಶೇ 2.50 15 ದಿನಗಳಿಂದ 29 ದಿನಗಳು -ಶೇ 2.50 30 ದಿನಗಳಿಂದ 45 ದಿನಗಳು -ಶೇ 3 46 ದಿನಗಳಿಂದ 60 ದಿನಗಳು -ಶೇ 3 61 ದಿನಗಳಿಂದ 90 ದಿನಗಳು-ಶೇ 3 91 ದಿನಗಳಿಂದ 120 ದಿನಗಳು- ಶೇ 3.5 121 ದಿನಗಳಿಂದ 184 ದಿನಗಳು -ಶೇ 3.5 185 ದಿನಗಳಿಂದ 210 ದಿನಗಳು -ಶೇ 4.40 211 ದಿನಗಳಿಂದ 270 ದಿನಗಳು – ಶೇ 4.40 271 ದಿನಗಳಿಂದ 289 ದಿನಗಳು – ಶೇ 4.40 290 ದಿನಗಳಿಂದ 1 ವರ್ಷಕ್ಕಿಂತ ಕಡಿಮೆ – ಶೇ 4.40 1 ವರ್ಷದಿಂದ 389 ದಿನಗಳು – ಶೇ 4.9 390 ದಿನಗಳಿಂದ < 18 ತಿಂಗಳುಗಳು – ಶೇ 4.9 18 ತಿಂಗಳ ದಿನಗಳಿಂದ 2 ವರ್ಷಗಳವರೆಗೆ – ಶೇ 5 2 ವರ್ಷಗಳು 1 ದಿನದಿಂದ 3 ವರ್ಷಗಳು – ಶೇ 5.15 3 ವರ್ಷಗಳು 1 ದಿನದಿಂದ 5 ವರ್ಷಗಳು – ಶೇ 5.35 5 ವರ್ಷಗಳು 1 ದಿನದಿಂದ 10 ವರ್ಷಗಳು – ಶೇ 5.50

ಹಿರಿಯ ನಾಗರಿಕರಿಗೆ ಐಸಿಐಸಿಐ ಬ್ಯಾಂಕ್​ನಿಂದ ಇತ್ತೀಚಿನ ಎಫ್​.ಡಿ. ಬಡ್ಡಿ ದರಗಳು (2 ಕೋಟಿ ರೂಪಾಯಿಂತ ಕಡಿಮೆ ಮೊತ್ತಕ್ಕೆ): ಹಿರಿಯ ನಾಗರಿಕರು ಇತರರಿಗಿಂತ 50 ಬೇಸಿಸ್ ಪಾಯಿಂಟ್‌ಗಳ (bps) ಹೆಚ್ಚಿನ ಬಡ್ಡಿದರವನ್ನು ಪಡೆಯುತ್ತಾರೆ. ಇತ್ತೀಚಿನ ಪರಿಷ್ಕರಣೆಯ ನಂತರ, ಹಿರಿಯ ನಾಗರಿಕರು 7 ದಿನಗಳಿಂದ 10 ವರ್ಷಗಳಲ್ಲಿ ಮೆಚ್ಯೂರಿಟಿ ಆಗುವ ಎಫ್​.ಡಿ.ಗಳ ಮೇಲೆ ಶೇ 3ರಿಂದ ಶೇ 6.3ರ ವರೆಗೆ ಬಡ್ಡಿಯನ್ನು ಪಡೆಯುತ್ತಾರೆ.

ಐಸಿಐಸಿಐ ಬ್ಯಾಂಕ್ ಹಿರಿಯ ನಾಗರಿಕರಿಗೆ ICICI ಬ್ಯಾಂಕ್ ಗೋಲ್ಡನ್ ಇಯರ್ಸ್ ಎಫ್​.ಡಿ. ಎಂಬ ವಿಶೇಷ ನಿಶ್ಚಿತ ಠೇವಣಿ ಯೋಜನೆಯನ್ನು ಸಹ ನೀಡುತ್ತದೆ. ಈ ಯೋಜನೆಯಡಿ ಹಿರಿಯ ನಾಗರಿಕರು 5 ವರ್ಷಗಳಲ್ಲಿ ಮತ್ತು 10 ವರ್ಷಗಳವರೆಗೆ ಮೆಚ್ಯೂರ್ ಆಗುವ ತಮ್ಮ ಠೇವಣಿಗಳ ಮೇಲೆ ವಾರ್ಷಿಕ ಶೇ 0.30 ಹೆಚ್ಚುವರಿ ಬಡ್ಡಿ ದರವನ್ನು ಪಡೆಯುತ್ತಾರೆ.

ಇದನ್ನೂ ಓದಿ: Blockchain ETF: ಏನಿದು ಬ್ಲಾಕ್​ಚೈನ್ ಇಟಿಎಫ್​? ಇದು ಹೇಗೆ ಬಿಟ್​ಕಾಯಿನ್ ಇಟಿಎಫ್​ಗಿಂತ ಭಿನ್ನ?

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು