Videocon CEO: ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

Videocon CEO: ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ
ವೇಣುಗೋಪಾಲ್ ಧೂತ್Image Credit source: Twitter
Follow us
Ganapathi Sharma
|

Updated on:Jan 20, 2023 | 5:28 PM

ಮುಂಬೈ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವ ವಿಡಿಯೊಕಾನ್ ಗ್ರೂಪ್ (Videocon Group) ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ (Venugopal Dhoot) ಅವರಿಗೆ ಬಾಂಬೆ ಹೈಕೋರ್ಟ್ (Bombay High Court) ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2022ರ ಡಿಸೆಂಬರ್ 26ರಂದು ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಬಂಧಿಸಿತ್ತು. ನ್ಯಾಯಮೂರ್ತಿ ಮೋಹಿತೆ ದೇರೆ ಮತ್ತು ಪಿಕೆ ಚವಾಣ್ ಅವರಿದ್ದ ಅವರಿದ್ದ ವಿಭಾಗೀಯ ಪೀಠ ಜನವರಿ 13ರಂದು ವಿಚಾರಣೆ ಮುಕ್ತಾಯಗೊಳಿಸಿ ಆದೇಶವನ್ನು ಕಾಯ್ದಿರಿಸಿತ್ತು. ಇದೇ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳಾದ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್​​ಗೆ ಇದೇ ವಿಭಾಗೀಯ ಪೀಠ ಜನವರಿ 9ರಂದು ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಧೂತ್ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

2009ರ ಜೂನ್​ನಿಂದ 2011ರ ಅಕ್ಟೋಬರ್​ ಅವಧಿಯಲ್ಲಿ ವಿಡಿಯೊಕಾನ್ ಗ್ರೂಪ್ ಮತ್ತು ಅದರ ಅಂಗಸಂಸ್ಥೆಗಳಿಗೆ ಐಸಿಐಸಿ ಬ್ಯಾಂಕ್​ನಿಂದ ಅಕ್ರಮವಾಗಿ ಸುಮಾರು 3,000 ಕೋಟಿ ರೂ. ಸಾಲ ನೀಡಲಾಗಿತ್ತು ಎಂಬ ಆರೋಪ ದಾಖಲಾಗಿದ್ದು, ಆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.

ಇದನ್ನೂ ಓದಿ: Videocon CEO Arrested: ಚಂದಾ ಕೊಚ್ಚರ್‌ ಬೆನ್ನಲ್ಲೇ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ

ಪ್ರಕರಣಕ್ಕೆ ಸಂಬಂಧಿಸಿ 2018ರಲ್ಲಿ ತನಿಖೆ ಆರಂಭವಾಗಿತ್ತು. 2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿತ್ತು ಎನ್ನಲಾಗಿದೆ. ಇದಾದ ಕೆಲ ತಿಂಗಳ ನಂತರ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Fri, 20 January 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?