ಪ್ರಸಕ್ತ ಹಣಕಾಸು ವರ್ಷ ಭಾರತದ ಆರ್ಥಿಕತೆ ಶೇ. 6.8ರಷ್ಟು ಬೆಳೆಯುವ ಸಾಧ್ಯತೆ; ಅಂದಾಜು ಹೆಚ್ಚಿಸಿದ ಐಎಂಎಫ್

IMF raises India's GDP forecast to 6.8pc for current FY: 2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.8ರಷ್ಟು ಬೆಳೆಯಬಹುದು ಎಂದು ಐಎಂಎಫ್ ತನ್ನ ಏಪ್ರಿಲ್ ತಿಂಗಳ ವರ್ಲ್ಡ್ ಎಕನಾಮಿಕ್ ಔಟ್​ಲುಕ್ ವರದಿಯಲ್ಲಿ ಅಂದಾಜು ಮಾಡಿದೆ. ಈ ಹಿಂದಿನ ವರದಿಯಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟು ಹೆಚ್ಚಬಹುದು ಎಂದು ಅಭಿಪ್ರಾಯಪಟ್ಟಿತ್ತು. 2023-24ರ ಹಣಕಾಸು ವರ್ಷದ ಮೊದಲ ಮೂರು ಕ್ವಾರ್ಟರ್​ನಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಮೀರಿ ಬೆಳವಣಿಗೆ ತೋರಿದ್ದು ಐಎಂಎಫ್​ನ ಲೆಕ್ಕಾಚಾರ ಬದಲಿಸುವಂತೆ ಮಾಡಿರಬಹುದು.

ಪ್ರಸಕ್ತ ಹಣಕಾಸು ವರ್ಷ ಭಾರತದ ಆರ್ಥಿಕತೆ ಶೇ. 6.8ರಷ್ಟು ಬೆಳೆಯುವ ಸಾಧ್ಯತೆ; ಅಂದಾಜು ಹೆಚ್ಚಿಸಿದ ಐಎಂಎಫ್
ಐಎಂಎಫ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 17, 2024 | 10:16 AM

ನವದೆಹಲಿ, ಏಪ್ರಿಲ್ 17: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಭಾರತದ ಆರ್ಥಿಕ ಬೆಳವಣಿಗೆ (economic growth) ಬಗ್ಗೆ ತನ್ನ ನಿರೀಕ್ಷೆ ಹೆಚ್ಚಿಸಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.5ರಷ್ಟು ಬೆಳೆಯಬಹುದು ಎಂದು ಅಂದಾಜಿಸಿದ್ದ ಐಎಂಎಫ್ ಇದೀಗ ತನ್ನ ಅಂದಾಜು ಪರಿಷ್ಕರಿಸಿದ್ದು, ಶೇ. 6.8ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅಭಿಪ್ರಾಯಪಟ್ಟಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಮೀರಿ ಬೆಳೆದಿರುವುದು ಮತ್ತು ಈ ವರ್ಷದಲ್ಲಿ ಪ್ರಮುಖ ಆರ್ಥಿಕ ಅಂಶಗಳು ಸುದೃಢವಾಗಿರುವುದರಿಂದ ಐಎಂಎಫ್ ಮಾತ್ರವಲ್ಲ ಬಹುತೇಕ ಏಜೆನ್ಸಿಗಳೂ ಕೂಡ ಭಾರತದ ಬಗ್ಗೆ ನಿರೀಕ್ಷೆ ಹೆಚ್ಚಿಸಿವೆ.

ನಿನ್ನೆ ಮಂಗಳವಾರ (ಏ. 16) ಬಿಡುಗಡೆ ಮಾಡಿದ ವರ್ಲ್ಡ್ ಎಕನಾಮಿಕ್ ಔಟ್​ಲುಕ್ ವರದಿಯಲ್ಲಿ ಐಎಂಎಫ್ ಭಾರತವನ್ನೂ ಒಳಗೊಂಡಂತೆ ವಿವಿಧ ದೇಶಗಳ ಆರ್ಥಿಕ ಬೆಳವಣಿಗೆ ಬಗ್ಗೆ ಅಂದಾಜು ಪರಿಷ್ಕರಿಸಿದೆ. ಈ ವರದಿ ಪ್ರಕಾರ 2023-24ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7.8ರಷ್ಟು ಬೆಳೆಯಬಹುದು ಎಂದಿದೆ. 2024-25 ಮತ್ತು 2025-26ರಲ್ಲಿ ಕ್ರಮವಾಗಿ ಶೇ. 6.8 ಮತ್ತು ಶೇ. 6.5ರಷ್ಟು ಜಿಡಿಪಿ ವೃದ್ಧಿಯನ್ನು ಭಾರತ ಕಾಣಬಹುದು ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಅದೇ ಸಂಬಳ, ಹೆಚ್ಚು ಕೆಲಸ; ಉದ್ಯೋಗಿಗಳನ್ನು ಕಾಡುತ್ತಿದೆ ‘ಒಣ ಬಡ್ತಿ’ ಟ್ರೆಂಡ್

2024ರ ಕ್ಯಾಲಂಡರ್ ವರ್ಷದಲ್ಲಿ ಜಾಗತಿಕವಾಗಿ ಆರ್ಥಿಕತೆ ಸರಾಸರಿ ಶೇ. 3.2ರಷ್ಟು ವೃದ್ಧಿ ಕಾಣಬಹುದು ಎಂದು ಐಎಂಎಫ್ ನಿರೀಕ್ಷಿಸಿದೆ. 2025ರಲ್ಲೂ ಇಷ್ಟೇ ಪ್ರಮಾಣದ ಬೆಳವಣಿಗೆ ಮುಂದುವರಿಯಬಹುದು ಎಂದಿದೆ. ಮುಂದುವರಿದ ದೇಶಗಳ ಆರ್ಥಿಕತೆ 2024ರಲ್ಲಿ ಶೇ. 1.7ರಷ್ಟು, ಅಭಿವೃದ್ದಿಶೀಲ ದೇಶಗಳ ಆರ್ಥಿಕತೆ ಶೇ. 4.2ರಷ್ಟು ಹೆಚ್ಚಾಗಬಹುದು ಎಂದಿದೆ.

ಚೀನಾದ ಆರ್ಥಿಕತೆ 2024 ಮತ್ತು 2025ರಲ್ಲಿ ಕ್ರಮವಾಗಿ ಶೇ. 4.6 ಮತ್ತು ಶೇ. 4.1ರಷ್ಟು ಬೆಳವಣಿಗೆ ಕಾಣಬಹುದು ಎಂಬುದು ಐಎಂಎಫ್​ನ ಅಂದಾಜು. ಕೆಳ ಆದಾಯ ಗುಂಪಿನ ಅಭಿವೃದ್ಧಿಶೀಲ ದೇಶಗಳ ಆರ್ಥಿಕತೆ 2025ರಲ್ಲಿ ಶೇ. 5.2ರಷ್ಟು ಹೆಚ್ಚಬಹುದು ಎಂದು ನಿರೀಕ್ಷಿಸಿದೆ.

ಇದನ್ನೂ ಓದಿ: ಮಾರ್ಚ್ ಕ್ವಾರ್ಟರ್​ನಲ್ಲಿ ಚೀನಾ ಆರ್ಥಿಕತೆ ನಿರೀಕ್ಷೆಮೀರಿ ಬೆಳವಣಿಗೆ; ಭಾರತದಕ್ಕಿಂತ ಕಡಿಮೆ

ಭಾರತದ ಆರ್ಥಿಕತೆ 2023-24ರಲ್ಲಿ ಶೇ. 6.7ರಷ್ಟು ಹೆಚ್ಚಬಹುದು ಎಂದು ಈ ಮೊದಲು ನಿರೀಕ್ಷಿದ್ದ ಐಎಂಎಫ್ ಈಗ ಅದನ್ನು ಶೇ. 7.8ಕ್ಕೆ ಬದಲಿಸಿದೆ. ಭಾರತದ ಹಣಕಾಸು ಸಚಿವಾಲಯ ಮಾಡಿದ ಅಂದಾಜಿಗಿಂತಲೂ ಇದು ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್