AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ

ಭಾರತದ ಕೈಗಾರಿಕೆ ಉತ್ಪಾದನೆ ಸೂಚ್ಯಂಕ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ ಆಗಿದೆ. ಇದರಲ್ಲಿ ಯಾವ ಕ್ಷೇತ್ರದ ಪಾಲು ಎಷ್ಟು ಎಂಬುದರ ಮಾಹಿತಿ ಇಲ್ಲಿದೆ.

Index of Industrial Production: ಕೈಗಾರಿಕೆ ಉತ್ಪಾದನೆ 2021ರ ಅಕ್ಟೋಬರ್​ನಲ್ಲಿ ಶೇ 3.2ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 10, 2021 | 11:26 PM

Share

ಭಾರತದ ಕೈಗಾರಿಕಾ ಉತ್ಪಾದನೆಯು ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, 2021ರ ಅಕ್ಟೋಬರ್‌ ತಿಂಗಳಿನಲ್ಲಿ ಶೇ 3.2ರಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO) ಕೈಗಾರಿಕೆ ಉತ್ಪಾದನೆ (IIP) ದತ್ತಾಂಶದಂತೆ, 2021ರ ಅಕ್ಟೋಬರ್​ನಲ್ಲಿ ಉತ್ಪಾದನಾ ವಲಯದ ಉತ್ಪಾದನೆಯು ಶೇ 2ರಷ್ಟು ಏರಿಕೆಯಾಗಿದೆ. ಅಕ್ಟೋಬರ್‌ನಲ್ಲಿ ಗಣಿಗಾರಿಕೆ ಉತ್ಪಾದನೆಯು ಶೇ 11.4ರಷ್ಟು ಏರಿಕೆ ಕಂಡಿತು ಮತ್ತು ವಿದ್ಯುತ್ ಉತ್ಪಾದನೆಯು ಶೇ 3.1ರಷ್ಟು ಹೆಚ್ಚಾಗಿದೆ. 2020ರ ಅಕ್ಟೋಬರ್​ನಲ್ಲಿ IIP ಶೇ 4.5ರಷ್ಟು ಬೆಳೆದಿತ್ತು.

2021ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಐಐಪಿ ಶೇ 20ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಶೇ 17.3ರಷ್ಟು ಕುಗ್ಗಿತ್ತು. ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೈಗಾರಿಕಾ ಉತ್ಪಾದನೆಯು ಕಳೆದ ವರ್ಷ ಮಾರ್ಚ್‌ನಿಂದ ಶೇ 18.7ರಷ್ಟು ಕುಸಿತ ಕಂಡಿದೆ.

ಕೊವಿಡ್​- 19 ಸೋಂಕು ಹರಡುವುದನ್ನು ತಡೆಯುವ ಉದ್ದೇಶ ಇಟ್ಟುಕೊಂಡು ದೇಶದಾದ್ಯಂತ ಲಾಕ್​ಡೌನ್ ವಿಧಿಸಲಾಯಿತು. ಆ ಕಾರಣದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಆಗುವಂತಾಯಿತು. ಆರ್ಥಿಕ ಚಟುವಟಿಕೆಗಳಲ್ಲಿನ ಕುಸಿತದಿಂದಾಗಿ 2020ರ ಏಪ್ರಿಲ್​ನಲ್ಲಿ ಶೇ 57.3ರಷ್ಟು ಕಡಿಮೆಯಾಗಿದೆ.

ಇದನ್ನೂ ಓದಿ: GDP: ಜುಲೈನಿಂದ ಸೆಪ್ಟೆಂಬರ್ ಎರಡನೇ ತ್ರೈಮಾಸಿಕ ಜಿಡಿಪಿ ಶೇ 8.4ರಷ್ಟು ಬೆಳವಣಿಗೆ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ