AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಗಳಿಗೆ ಪರಾರಿಯಾಗಿದ್ದ 274 ಆರ್ಥಿಕ ಅಪರಾಧಿಗಳು ಭಾರತಕ್ಕೆ ಹಸ್ತಾಂತರ: 2019-26ರಲ್ಲಾದ ಸಾಧನೆ ಇದು

274 fugitive criminals from 36 countries extradited to India in last 5 years: 2019ರಿಂದ 2026ರವರೆಗೆ ವಿದೇಶಗಳಲ್ಲಿ ತಲೆಮರೆಸಿಕೊಂಡಿದ್ದ ಅಪರಾಧಿಗಳನ್ನು ಭಾರತಕ್ಕೆ ಕರೆತಂದು ಕಾನೂನು ಕ್ರಮಕ್ಕೆ ಒಪ್ಪಿಸಲಾಗಿದೆ. ಭಾರತದಲ್ಲಿ ವಿವಿಧ ಅಪರಾಧಗಳನ್ನು ಎಸಗಿ ದೇಶಬಿಟ್ಟು ಹೋಗಿದ್ದ ಈ ಅಪರಾಧಿಗಳು 36 ದೇಶಗಳಲ್ಲಿ ಅಡಗಿದ್ದರು. ಅಪರೇಶನ್ ತ್ರಿಶೂಲ್ ಅಡಿಯಲ್ಲಿ ವಿವಿಧ ಕಾರ್ಯತಂತ್ರಗಳನ್ನು ಬಳಸಿ ಈ ಅಪರಾಧಿಗಳನ್ನು ಪತ್ತೆ ಮಾಡಲು ಸರ್ಕಾರ ಯಶಸ್ವಿಯಾಗಿದೆ.

ವಿದೇಶಗಳಿಗೆ ಪರಾರಿಯಾಗಿದ್ದ 274 ಆರ್ಥಿಕ ಅಪರಾಧಿಗಳು ಭಾರತಕ್ಕೆ ಹಸ್ತಾಂತರ: 2019-26ರಲ್ಲಾದ ಸಾಧನೆ ಇದು
ಪೊಲೀಸರ ಸಾಂದರ್ಭಿಕ ಚಿತ್ರImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 04, 2026 | 6:32 PM

Share

ನವದೆಹಲಿ, ಆಗಸ್ಟ್ 4: ವಿವಿಧ ಅಪರಾಧಗಳನ್ನು ಎಸಗಿ ದೇಶದಿಂದ ಪರಾರಿಯಾಗಿ ತಲೆಮರೆಸಿಕೊಂಡಿರುವ ಅಪರಾಧಿಗಳ (Fugitive criminals) ಪೈಕಿ 274 ಮಂದಿಯನ್ನು ಕಳೆದ ಐದು ವರ್ಷದ ಅವಧಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗಿದೆ (Extradition). 2019 ರಿಂದ 2026 ರ ನಡುವಿನ ಅವಧಿಯಲ್ಲಿ 36 ದೇಶಗಳಿಂದ 274 ಅಪರಾಧಿಗಳನ್ನು ಭಾರತಕ್ಕೆ ತರಲಾಗಿದೆ ಎನ್ನುವ ಮಾಹಿತಿಯನ್ನು ಸರ್ಕಾರ ನೀಡಿದೆ. ಪ್ರಸಕ್ತ ಕೇಂದ್ರ ಸರ್ಕಾರವು ಅಪರಾಧಿಗಳ ಹಸ್ತಾಂತರವನ್ನು ‘ರಾಷ್ಟ್ರೀಯ ಆದ್ಯತೆ’ಯನ್ನಾಗಿ (National Priority) ಮಾಡಿಕೊಂಡಿದೆ.

ತ್ರಿಮುಖ ಕಾರ್ಯತಂತ್ರ ಮತ್ತು ಜಾಗತಿಕ ಸಹಕಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ, ಅಪರಾಧಿಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ‘ಮಿಷನ್ ಮೋಡ್’ನಲ್ಲಿ ಜಾರಿಗೆ ತರಲಾಗಿದೆ. ಇದಕ್ಕಾಗಿ ಮೋದಿ ಸರ್ಕಾರವು ಮೂರು ಮುಖ್ಯ ತತ್ವಗಳ ಮೇಲೆ ಕಾರ್ಯತಂತ್ರ ರೂಪಿಸಿದೆ:

  • ಜಾಗತಿಕ ಕಾರ್ಯಾಚರಣೆಗಳು (Global Operations)
  • ಸದೃಢ ಸಮನ್ವಯತೆ (Robust Coordination)
  • ಚಾಣಾಕ್ಷ ರಾಜತಾಂತ್ರಿಕತೆ (Smart Diplomacy)

ಇದನ್ನೂ ಓದಿ: ಕಂಪನಿ ಎಂಡಿ ಮತ್ತು ನಿರ್ದೇಶಕರಾಗಲು 21 ಅಲ್ಲ, 18 ವರ್ಷ ವಯಸ್ಸಾಗಿದ್ದರೂ ಸಾಕು; ಸರ್ಕಾರದ ಮುಂದಿದೆ ಪ್ರಸ್ತಾಪ

ತಂತ್ರಜ್ಞಾನ ಮತ್ತು ಗುಪ್ತಚರ ಆಧಾರಿತ ಮಾದರಿಯನ್ನು ಬಳಸಿ, ಹೆಸರು ಹಾಗೂ ಗುರುತು ಬದಲಾಯಿಸಿಕೊಂಡು ವಿದೇಶಗಳಲ್ಲಿ ಅಡಗಿರುವ ಅಪರಾಧಿಗಳನ್ನು ಪತ್ತೆಹಚ್ಚಲು ‘ಆಪರೇಷನ್ ತ್ರಿಶೂಲ್’ (Operation Trishul) ಅಡಿಯಲ್ಲಿ ಉಪಗ್ರಹ ತಂತ್ರಜ್ಞಾನ ಹಾಗೂ ಡಿಜಿಟಲ್ ಹೆಜ್ಜೆಗುರುತುಗಳನ್ನು (Digital Footprints) ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ.

ಭಾರತ್‌ಪೋಲ್ ಮತ್ತು ಇಂಟರ್‌ಪೋಲ್ ಬಳಕೆ

ಕಳೆದ ಮೂರು ವರ್ಷಗಳಲ್ಲಿ ಇಂಟರ್‌ಪೋಲ್ ಮೂಲಕ ಕನಿಷ್ಠ 401 ಅಪರಾಧಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ (Red Corner Notice) ಹೊರಡಿಸಲಾಗಿದೆ.

ಇದರ ಜೊತೆಗೆ, ಭಾರತ ಸರ್ಕಾರವು ‘ಭಾರತ್‌ಪೋಲ್’ (BHARATPOL) ಎಂಬ ನೂತನ ತಂತ್ರಜ್ಞಾನ ವ್ಯವಸ್ಥೆಯನ್ನು ಪ್ರಾರಂಭಿಸಿದ್ದು, ಇದು ದೇಶದ 1,400ಕ್ಕೂ ಹೆಚ್ಚು ತನಿಖಾ ಸಂಸ್ಥೆಗಳನ್ನು ನೇರವಾಗಿ ಇಂಟರ್‌ಪೋಲ್‌ನೊಂದಿಗೆ ಜೋಡಿಸುತ್ತದೆ. ಇದರಿಂದಾಗಿ ಅಪರಾಧಿಗಳ ಮಾಹಿತಿ ವಿನಿಮಯದ ಸಮಯವು ಕೇವಲ 3 ರಿಂದ 10 ದಿನಗಳಿಗೆ ಕಡಿಮೆಯಾಗಿದೆ.

ಇದನ್ನೂ ಓದಿ: ಆರ್​ಬಿಐ ಹೊಸ ಮಾರ್ಗಸೂಚಿ; ಅ. 1ರಿಂದ ಬದಲಾಗಲಿವೆ ಬ್ಯಾಂಕ್ ಡೆಪಾಸಿಟ್ ನಿಯಮಗಳು

ಕಠಿಣ ಕಾನೂನುಗಳು ಮತ್ತು ಆಸ್ತಿ ಜಪ್ತಿ

ಅಪರಾಧಿಗಳನ್ನು ಮಟ್ಟಹಾಕಲು ಸರ್ಕಾರವು ಎನ್‍ಐಎ (NIA) ತಿದ್ದುಪಡಿ ಕಾಯ್ದೆ ಹಾಗೂ ಯುಎಪಿಎ (UAPA) ಕಾಯ್ದೆಗಳನ್ನು ಬಲಪಡಿಸಿದೆ. ನೂತನ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 355 ಮತ್ತು 356 ಅಡಿಯಲ್ಲಿ, ದೇಶದಿಂದ ಓಡಿಹೋದ ಅಪರಾಧಿಗಳ ಗೈರುಹಾಜರಿಯಲ್ಲೂ ವಿಚಾರಣೆ ನಡೆಸುವ (Trials in absentia) ಐತಿಹಾಸಿಕ ಕಾನೂನು ತರಲಾಗಿದೆ.

ಆಸ್ತಿ ಮುಟ್ಟುಗೋಲು: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ, 2019 ರಿಂದ 2026 ರವರೆಗೆ ವಿದೇಶಕ್ಕೆ ಓಡಿಹೋದ ಅಪರಾಧಿಗಳಿಗೆ ಸೇರಿದ ₹17,874 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಹಣ ಮರುವಸೂಲಿ: ಆರ್ಥಿಕ ಅಪರಾಧಿಗಳಿಂದ ವಶಪಡಿಸಿಕೊಂಡ ಹಣ ಸೇರಿದಂತೆ ಒಟ್ಟು ₹18,762 ಕೋಟಿಗಳನ್ನು ಬಾಧಿತರಿಗೆ/ಬ್ಯಾಂಕ್‌ಗಳಿಗೆ ಯಶಸ್ವಿಯಾಗಿ ಹಿಂತಿರುಗಿಸಲಾಗಿದೆ.

ದೇಶದ ಸಾರ್ವಭೌಮತ್ವ, ಆರ್ಥಿಕ ಸ್ಥಿರತೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೇ ಅಪರಾಧಿಯನ್ನು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕೇಂದ್ರ ಸರ್ಕಾರ ಈ ಮೂಲಕ ರವಾನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ