AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ

India EU sign FTA, described as mother of all deals: ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿರುವ ಬೃಹತ್ ವ್ಯಾಪಾರ ಒಪ್ಪಂದಕ್ಕೆ ಭಾರತ ಮತ್ತು ಐರೋಪ್ಯ ಒಕ್ಕೂಟ ಸಹಿಹಾಕಿವೆ. ಈ ಎರಡೂ ಶಕ್ತಿಗಳ ಸಮಾಗಮವಾದ ಶೃಂಗಸಭೆಯಲ್ಲಿ ಈ ಡೀಲ್​ಗೆ ಸಹಿ ಹಾಕಲಾಗಿದೆ. ವಿಶ್ವದ ಶೇ. 25ರಷ್ಟು ಆರ್ಥಿಕತೆ ಮತ್ತು 200 ಕೋಟಿ ಜನರ ಬೃಹತ್ ಮಾರುಕಟ್ಟೆ ಇದಾಗಿದೆ.

ಭಾರತ ಮತ್ತು ಯೂರೋಪಿಯನ್ ಯೂನಿಯನ್ ವ್ಯಾಪಾರ ಒಪ್ಪಂದಕ್ಕೆ ಸಹಿ; ಹೊಸ ಇತಿಹಾಸ
ಭಾರತ ಮತ್ತು ಯೂರೋಪಿಯನ್ ಒಕ್ಕೂಟದ ಮುಖಂಡರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 27, 2026 | 2:18 PM

Share

ನವದೆಹಲಿ, ಜನವರಿ 27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ (India-EU trade deal) ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ ಪ್ರವೇಶ ಒಂದೇ ಒಪ್ಪಂದದಲ್ಲಿ ಭಾರತಕ್ಕೆ ಸಿಗಲಿದೆ. ಯೂರೋಪಿಯನ್ ಕೌನ್ಸಿಲ್ ಮುಖ್ಯಸ್ಥ ಆಂಟೋನಿಯೋ ಕೋಸ್ಟಾ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಡೀಲ್​ಗೆ ಸಹಿ ಹಾಕಿದ್ದಾರೆ.

ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವಿನ ವ್ಯಾಪಾರ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಅವರು ‘ಮದರ್ ಆಫ್ ಆಲ್ ಡೀಲ್ಸ್’ (ವಿಶ್ವದ ಅತಿದೊಡ್ಡ ಒಪ್ಪಂದ) ಎಂದು ಬಣ್ಣಿಸಿದ್ದಾರೆ. ಭಾರತದ ಜವಳಿ, ಹರಳು, ಆಭರಣ, ಲೆದರ್ ಇತ್ಯಾದಿ ಸೆಕ್ಟರ್​ಗಳಿಗೆ ಪುಷ್ಟಿ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಯೂರೋಪ್​ನ ಕಾರುಗಳ ಮೇಲಿನ ಟ್ಯಾರಿಫ್ ಶೇ. 110ರಿಂದ ಶೇ. 40ಕ್ಕೆ ಇಳಿಸಲಿದೆಯಾ ಭಾರತ?

ವರ್ಷಗಳಿಂದ ನಡೆದ ಪ್ರಯತ್ನಗಳಿಗೆ ಫಲ

ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಫ್ರೀ ಟ್ರೇಡ್ ಡೀಲ್​ಗಾಗಿ 2007ರಲ್ಲೇ ಮಾತುಕತೆ ಆರಂಭವಾಗಿತ್ತು. ಟ್ಯಾರಿಫ್, ಮಾರುಕಟ್ಟೆ ಪ್ರವೇಶ ಮತ್ತು ನಿಯಮಗಳ ಕಾರಣಗಳಿಂದ 2013ರಲ್ಲಿ ಮಾತುಕತೆಗಳು ಸ್ಥಗಿತಗೊಂಡಿದ್ದವು. 2022ರಲ್ಲಿ ಮತ್ತೆ ಚಾಲನೆಗೊಂಡಿತು. ಜಾಗತಿಕ ವ್ಯಾಪಾರ ಬಿಕ್ಕಟ್ಟು ಉದ್ಭವಗೊಂಡ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಒಪ್ಪಂದ ಸಂಬಂಧ ಮಾತುಕತೆಗೆ ವೇಗ ಸಿಕ್ಕಿತು.

ಮದರ್ ಆಫ್ ಆಲ್ ಡೀಲ್ಸ್ ಎನ್ನೋದು ಯಾಕೆ?

ಭಾರತ ವಿಶ್ವದಲ್ಲೇ ನಾಲ್ಕನೇ ಅಥವಾ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ ಎನಿಸಿದೆ. ಐರೋಪ್ಯ ಒಕ್ಕೂಟದಲ್ಲಿ 27 ದೇಶಗಳಿವೆ. ಯೂರೋಪ್ ಖಂಡದ ಅರ್ಧಕ್ಕೂ ಹೆಚ್ಚು ದೇಶಗಳು ಈ ಯೂನಿಯನ್​ನ ಭಾಗವಾಗಿವೆ. ಭಾರತ ಹಾಗೂ ಈ 27 ದೇಶಗಳ ಆರ್ಥಿಕತೆಯನ್ನು ಗಣನೆಗೆ ತೆಗೆದುಕೊಂಡರೆ, ಅದು ವಿಶ್ವದ ಶೇ. 25ರಷ್ಟು ಜಿಡಿಪಿಯಷ್ಟಾಗುತ್ತದೆ.

ಇದನ್ನೂ ಓದಿ: CUSMA ನಿಯಮಗಳಿಗೆ ಬದ್ಧ; ಚೀನಾದೊಂದಿಗೆ ವ್ಯಾಪಾರ ಒಪ್ಪಂದ ಇಲ್ಲ: ಕೆನಡಾ ಹೇಳಿಕೆ

200 ಕೋಟಿ ಗ್ರಾಹಕರಿರುವ ಬೃಹತ್ ಮಾರುಕಟ್ಟೆ ಸೃಷ್ಟಿಯಾಗುತ್ತದೆ. 2024-25ರ ಹಣಕಾಸು ವರ್ಷದಲ್ಲಿ ಈ ಎರಡು ಮಹಾನ್ ಆರ್ಥಿಕ ಶಕ್ತಿಗಳ ನಡುವೆ ನಡೆದ ದ್ವಿಪಕ್ಷೀಯ ವ್ಯಾಪಾರ ಗಣನೀಯವಾಗಿದೆ. ಸರಕುಗಳ ವಹಿವಾಟು 136.5 ಬಿಲಿಯನ್ ಡಾಲರ್ ಇದ್ದರೆ, ಸರ್ವಿಸಸ್ ಟ್ರೇಡ್ 80 ಬಿಲಿಯನ್ ಡಾಲರ್​ನಷ್ಟು ಇತ್ತು. ಒಟ್ಟೂ ಮಾರುಕಟ್ಟೆ ಗಾತ್ರ ಗಮನಿಸಿದಾಗ ಈ ದ್ವಿಪಕ್ಷೀಯ ವ್ಯಾಪಾರ ಪ್ರಮಾಣ ಇನ್ನೂ ಬೃಹತ್ ಆಗುವ ಎಲ್ಲಾ ಸಾಧ್ಯತೆ ಇದೆ.

ಇತರ ಐರೋಪ್ಯ ದೇಶಗಳೊಂದಿಗೂ ಭಾರತದ ಸಂಬಂಧ

ಯೂರೋಪ್​ನ ಇತರ ದೇಶಗಳೊಂದಿಗೂ ಭಾರತ ವ್ಯಾಪಾರ ಒಪ್ಪಂದ ಕುದುರಿಸಿದೆ. ಐರೋಪ್ಯ ಒಕ್ಕೂಟದ ಭಾಗವಾಗಿರದ ಬ್ರಿಟನ್ ಜೊತೆ ಭಾರತ ಎಫ್​ಟಿಎ ಮಾಡಿಕೊಂಡಿದೆ. ಯೂರೋಪಿಯನ್ ಫ್ರೀ ಟ್ರೇಡ್ ಅಸೋಸಿಯೇಶನ್ (ಇಎಫ್​ಟಿಎ) ಜೊತೆಗೂ ಒಪ್ಪಂದ ಕುದುರಿದೆ. ಬಹಳ ಮುಂದುವರಿದ ಆರ್ಥಿಕತೆಗಳಾದ ಸ್ವಿಟ್ಜರ್ಲ್ಯಾಂಡ್, ನಾರ್ವೇ, ಲೇಕ್ಟನ್​ಸ್ಟೀನ್ ಮತ್ತು ಐಸ್​ಲ್ಯಾಂಡ್ ದೇಶಗಳು ಇಎಫ್​ಟಿಎನಲ್ಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ