Forex Reserves: ಭಾರತದ ಫಾರೆಕ್ಸ್ ರಿಸರ್ವ್ಸ್ 616.733 ಬಿಲಿಯನ್ ಡಾಲರ್​ಗೆ ಹೆಚ್ಚಳ

RBI data: ಭಾರತದ ಫಾರೆಕ್ಸ್ ರಿಸರ್ವ್ಸ್ ಜನವರಿ 26ರಂದು ಅಂತ್ಯಗೊಂಡ ವಾರದಲ್ಲಿ 591 ಮಿಲಿಯನ್ ಡಾಲರ್​ನಷ್ಟು ಏರಿದೆ. ಆರ್​ಬಿಐ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಆ ವಾರದಂದು ವಿದೇಶೀ ವಿನಿಮಯ ಮೀಸಲು ಸಂಪತ್ತು 616.733 ಬಿಲಿಯನ್ ಡಾಲರ್ ಮಟ್ಟಕ್ಕೆ ಹೋಗಿದೆ. 2021ರ ಅಕ್ಟೋಬರ್ ತಿಂಗಳಲ್ಲಿ ಭಾರತದ ಫಾರೆಕ್ಸ್ ಸಂಪತ್ತು 645 ಬಿಲಿಯನ್ ಡಾಲರ್​ಗೆ ಹೋಗಿತ್ತು. ಅದು ಗರಿಷ್ಠ ಮಟ್ಟವಾಗಿದೆ.

Forex Reserves: ಭಾರತದ ಫಾರೆಕ್ಸ್ ರಿಸರ್ವ್ಸ್ 616.733 ಬಿಲಿಯನ್ ಡಾಲರ್​ಗೆ ಹೆಚ್ಚಳ
ಆರ್​ಬಿಐ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 02, 2024 | 6:58 PM

ನವದೆಹಲಿ, ಫೆ. 2: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ (forex reserves) ಏರಿಕೆಯಾಗಿದೆ. ಜನವರಿ 26ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ 591 ಮಿಲಿಯನ್ ಡಾಲರ್​ನಷ್ಟು ಹೆಚ್ಚಳಗೊಂಡು 616.733 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ಶುಕ್ರವಾರ (ಫೆ. 2) ಈ ಮಾಹಿತಿ ಬಿಡುಗಡೆ ಮಾಡಿದೆ. 616.733 ಬಿಲಿಯನ್ ಡಾಲರ್ ಎಂದರೆ ಸುಮಾರು 51.37 ಲಕ್ಷ ಕೋಟಿ ರುಪಾಯಿ ಆಗುತ್ತದೆ. ಹಿಂದಿನ ವಾರದಲ್ಲಿ (ಜ. 19) ಫಾರೆಕ್ಸ್ ನಿಧಿ 2.795 ಬಿಲಿಯನ್ ಡಾಲರ್​ನಷ್ಟು ಕಡಿಮೆ ಆಗಿ 616.143 ಬಿಲಿಯನ್ ಡಾಲರ್ ಮಟ್ಟಕ್ಕೆ ಇಳಿದಿತ್ತು. ಇತ್ತೀಚಿನ ಕೆಲ ತಿಂಗಳುಗಳಿಂದ ಫಾರೆಕ್ಸ್ ರಿಸರ್ವ್ಸ್ ಇಳಿಕೆಯಾಗಿರುವುದಕ್ಕಿಂತ ಏರಿಕೆಯಾಗಿದ್ದೇ ಹೆಚ್ಚು.

ಜನವರಿ 26ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್​ನ ಎಲ್ಲಾ ನಾಲ್ಕು ಅಂಶಗಳೂ ಹೆಚ್ಚಾಗಿವೆ. ಫಾರೆಕ್ಸ್​ನ ಪ್ರಮುಖ ಭಾಗವಾಗಿರುವ ಫಾರೀನ್ ಕರೆನ್ಸಿ ಆಸ್ತಿ ಅಥವಾ ವಿದೇಶೀ ಕರೆನ್ಸಿ ಆಸ್ತಿ 289 ಮಿಲಿಯನ್ ಡಾಲರ್​ನಷ್ಟು ಹೆಚ್ಚಿದೆ. ಗೋಲ್ಡ್ ರಿಸರ್ವ್ಸ್ ಮೊತ್ತ 269 ಮಿಲಿಯನ್ ಡಾಲರ್​ನಷ್ಟು ಏರಿಕೆ ಆಗಿದೆ.

ಸ್ಪೆಷಲ್ ಡ್ರಾಯಿಂಗ್ ರೈಟ್ಸ್, ಅಥವಾ ಎಸ್​ಡಿಆರ್​ಗಳು 27 ಮಿಲಿಯನ್ ಡಾಲರ್​ನಷ್ಟು ಹೆಚ್ಚಾದರೆ, ಐಎಂಎಫ್​ನೊಂದಿಗಿನ ಮೀಸಲು ಪ್ರಮಾಣ 6 ಮಿಲಿಯನ್ ಡಾಲರ್ ಏರಿಕೆ ಆಗಿದೆ ಎಂದು ಆರ್​ಬಿಐನ ದತ್ತಾಂಶ ತಿಳಿಸುತ್ತದೆ.

ಇದನ್ನೂ ಓದಿ: ಕೂಲಿಯಾಗಿ ಕೆಲಸ ಮಾಡುತ್ತಿದ್ದವ ತನ್ನ ದೇಶದ ಅತಿಶ್ರೀಮಂತನಾದ ಕಥೆ ಕೇಳಿ

ಭಾರತದ ಫಾರೆಕ್ಸ್ ರಿಸರ್ವ್ಸ್, ಜನವರಿ 26ಕ್ಕೆ

ಒಟ್ಟು ನಿಧಿ: 616.733 ಬಿಲಿಯನ್ ಡಾಲರ್

  • ವಿದೇಶೀ ಕರೆನ್ಸಿ ಆಸ್ತಿ (ಎಫ್​ಸಿಎ): 546.144 ಬಿಲಿಯನ್ ಡಾಲರ್
  • ಚಿನ್ನದ ಮೀಸಲು ನಿಧಿ: 47.481 ಬಿಲಿಯನ್ ಡಾಲರ್
  • ಎಸ್​​ಡಿಆರ್: 18.248 ಬಿಲಿಯನ್ ಡಾಲರ್
  • ಐಎಂಎಫ್​ನೊಂದಿಗಿನ ಮೀಸಲು ನಿಧಿ: 4.86 ಬಿಲಿಯನ್ ಡಾಲರ್

ಇಲ್ಲಿ ಫಾರೀನ್ ಕರೆನ್ಸಿ ಅಸೆಟ್ ಎಂದರೆ ಫಾರೀನ್ ಎಕ್ಸ್​ಚೇಂಜ್ ರಿಸರ್ವ್ಸ್​ನಲ್ಲಿ ಇರುವ ಡಾಲರ್ ಅಲ್ಲದ ಕರೆನ್ಸಿಗಳಾದ ಯೂರೋ, ಪೌಂಡ್, ಯೆನ್ ಇತ್ಯಾದಿ ಕರೆನ್ಸಿಗಳ ಮೊತ್ತವಾಗಿದೆ.

ಇದನ್ನೂ ಓದಿ: ಪೇಟಿಎಂ ಮಾಡಿದ ತಪ್ಪುಗಳೇನು? ಆರ್​ಬಿಐನದ್ದು ಪ್ರತೀಕಾರದ ಕ್ರಮವಾ? ನಿರ್ಬಂಧದ ಹಿಂದಿನ ಅಸಲಿ ಕಾರಣ ಇದು

2021ರಲ್ಲಿ ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್

ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ 2021ರ ಅಕ್ಟೋಬರ್ ತಿಂಗಳಲ್ಲಿ 645 ಬಿಲಿಯನ್ ಡಾಲರ್ ಮಟ್ಟಕ್ಕೆ ಹೋಗಿತ್ತು. ಅದು ಈವರೆಗೆ ಭಾರತ ಹೊಂದಿರುವ ಗರಿಷ್ಠ ಫಾರೆಕ್ಸ್ ಮೀಸಲು ನಿಧಿ ಎನಿಸಿದೆ. ಅದಾದ ಬಳಿಕ ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ರುಪಾಯಿ ಮೌಲ್ಯ ಕುಸಿತವನ್ನು ತಡೆಯಲು ಆರ್​ಬಿಐ ಕ್ರಮ ಕೈಗೊಂಡ ಪರಿಣಾಮವಾಗಿ ಫಾರೆಕ್ಸ್ ಸಂಪತ್ತು ಕರಗುತ್ತಾ ಹೋಗಿತ್ತು. ಕಳೆದ ವರ್ಷ ಫಾರೆಕ್ಸ್ ಸಂಪತ್ತು 600 ಬಿಲಿಯನ್ ಡಾಲರ್ ಮಟ್ಟಕ್ಕಿಂತ ಕೆಳಗೆ ಹೋಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ