ಭಾರತದ ಫಾರೆಕ್ಸ್ ರಿಸರ್ವ್ಸ್ 657 ಬಿಲಿಯನ್ ಡಾಲರ್​ಗೆ ಏರಿಕೆ; ಹೊಸ ದಾಖಲೆ ಬರೆದ ವಿದೇಶೀ ವಿನಿಮಯ ಮೀಸಲು ನಿಧಿ

Forex reserves of India on July 5th: ವಿದೇಶೀ ವಿನಿಮಯ ಮೀಸಲು ನಿಧಿ ಜುಲೈ 5ರಂದು 657.16 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಭಾರತದ ಫಾರೆಕ್ಸ್ ಇತಿಹಾಸದಲ್ಲೇ ಕಂಡ ಅತಿ ಹೆಚ್ಚು ಫಾರೆಕ್ಸ್ ನಿಧಿ ಸಂಗ್ರಹ ಇದು. ಆರ್​​ಬಿಐ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಜುಲೈ 5ಕ್ಕೆ ಅಂತ್ಯಗೊಂಡ ವಾರದಲ್ಲಿ ಹೆಚ್ಚಳವಾದ ಫಾರೆಕ್ಸ್ ರಿಸರ್ವ್ಸ್ ಸಂಪತ್ತಿನಲ್ಲಿ ಚಿನ್ನದ ಸಂಗ್ರಹದ ಪ್ರಮಾಣ ಹೆಚ್ಚಿದೆ.

ಭಾರತದ ಫಾರೆಕ್ಸ್ ರಿಸರ್ವ್ಸ್ 657 ಬಿಲಿಯನ್ ಡಾಲರ್​ಗೆ ಏರಿಕೆ; ಹೊಸ ದಾಖಲೆ ಬರೆದ ವಿದೇಶೀ ವಿನಿಮಯ ಮೀಸಲು ನಿಧಿ
ಫಾರೆಕ್ಸ್
Follow us
|

Updated on: Jul 14, 2024 | 10:43 AM

ನವದೆಹಲಿ, ಜುಲೈ 14: ಭಾರತದ ಫಾರೆಕ್ಸ್ ರಿಸರ್ವ್ಸ್ ಜುಲೈ 5ಕ್ಕೆ ಅಂತ್ಯಗೊಂಡ ವಾರದಲ್ಲಿ 5.16 ಬಿಲಿಯನ್ ಡಾಲರ್​ನಷ್ಟು ಏರಿಕೆ ಆಗಿ 657.16 ಬಿಲಿಯನ್ ಡಾಲರ್ ತಲುಪಿದೆ. ಇದುವರೆಗೆ ಭಾರತದ ಫಾರೆಕ್ಸ್ ರಿಸರ್ವ್ಸ್​ನಲ್ಲಿ ಕಂಡಿರುವ ಅತಿಹೆಚ್ಚು ಸಂಗ್ರಹವಾಗಿದೆ. ಆರ್​ಬಿಐ ಜುಲೈ 10ರಂದು ಈ ದತ್ತಾಂಶವನ್ನು ಬಿಡುಗಡೆ ಮಾಡಿದೆ. ಹಿಂದಿನ ವಾರದಲ್ಲಿ, ಅಂದರೆ ಜೂನ್ 28ರಂದು ವಿದೇಶೀ ವಿನಿಮಯ ಮೀಸಲು ನಿಧಿ 1.71 ಬಿಲಿಯನ್ ಡಾಲರ್​ನಷ್ಟು ಇಳಿಕೆ ಆಗಿತ್ತು.

ಜುಲೈ 5ರಂದು ಹೆಚ್ಚಳವಾದ 5.16 ಬಿಲಿಯನ್ ಡಾಲರ್ ಫಾರೆಕ್ಸ್ ರಿಸರ್ವ್ಸ್ ಪೈಕಿ ಫಾರೀನ್ ಕರೆನ್ಸಿ ಆಸ್ತಿ ಹೆಚ್ಚ 42.29 ಮಿಲಿಯನ್ ಡಾಲರ್​ನಷ್ಟಿದೆ. ಫಾರೆಕ್ಸ್ ನಿಧಿಯಲ್ಲಿ ಈ ವಿದೇಶೀ ಕರೆನ್ಸಿ ಪ್ರಮಾಣ ಅತ್ಯಧಿಕ ಇರುತ್ತದೆ. ಇನ್ನು, ಗೋಲ್ಡ್ ರಿಸರ್ವ್ಸ್​ನಲ್ಲಿ 904 ಮಿಲಿಯನ್ ಡಾಲರ್​ನಷ್ಟು ಹೆಚ್ಚಳವಾಗಿದೆ. ಎಸ್​ಡಿಆರ್​ಗಳ ಪ್ರಮಾಣ 21 ಮಿಲಿಯನ್ ಡಾಲರ್, ಐಎಂಎಫ್​ನೊಂದಿಗಿನ ರಿಸರ್ವ್ಸ್ 4 ಮಿಲಿಯನ್ ಡಾಲರ್​ನಷ್ಟು ಹೆಚ್ಚಾಗಿದೆ.

2024ರ ಜುಲೈ 4ಕ್ಕೆ ಭಾರತದ ಫಾರೆಕ್ಸ್ ರಿಸರ್ವ್ಸ್ ಮೊತ್ತ

ಒಟ್ಟು ಫಾರೆಕ್ಸ್ ರಿಸರ್ವ್ಸ್: 657.16 ಬಿಲಿಯನ್ ಡಾಲರ್

  • ವಿದೇಶೀ ಕರೆನ್ಸಿ ಆಸ್ತಿ: 577.11 ಬಿಲಿಯನ್ ಡಾಲರ್
  • ಗೋಲ್ಡ್ ರಿಸರ್ವ್ಸ್: 57.43 ಬಿಲಿಯನ್ ಡಾಲರ್
  • ಸ್ಪೆಷಲ್ ಡ್ರಾಯಿಂಗ್ ರೈಟ್ಸ್: 18.04 ಬಿಲಿಯನ್ ಡಾಲರ್
  • ಐಎಂಎಫ್​ನೊಂದಿಗಿನ ರಿಸರ್ವ್ ಮಟ್ಟ: 4.58 ಬಿಲಿಯನ್ ಡಾಲರ್.

ಇದನ್ನೂ ಓದಿ: ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 5.08; ತರಕಾರಿ ಬೆಲೆ ಏರಿಕೆ ಪ್ರಮುಖ ಕಾರಣ

ಚೀನಾದಲ್ಲಿ ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್

ಒಂದು ದೇಶದ ಕರೆನ್ಸಿ ಮೌಲ್ಯ ರಕ್ಷಣೆ ಮತ್ತು ಅಂತಾರಾಷ್ಟ್ರೀಯ ವ್ಯವಹಾರಕ್ಕೆ ಅನುಕೂಲವಾಗಲು ಸೆಂಟ್ರಲ್ ಬ್ಯಾಂಕುಗಳು ವಿದೇಶೀ ಆಸ್ತಿಗಳ ಸಂಗ್ರಹ ಮಾಡುತ್ತವೆ. ಅದುವೇ ಫಾರೆಕ್ಸ್ ರಿಸರ್ವ್ಸ್ ಆಗಿರುತ್ತದೆ. ಚೀನಾದಲ್ಲಿ ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್ ಇದೆ. 3.58 ಟ್ರಿಲಿಯನ್ ಡಾಲರ್ ಮೌಲ್ಯದ ಫಾರೆಕ್ಸ್ ರಿಸರ್ವ್ಸ್ ಚೀನಾ ಬಳಿ ಇದೆ. ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್ ಇರುವ ದೇಶಗಳ ಪಟ್ಟಿ ಇಲ್ಲಿದೆ:

  1. ಚೀನಾ: 3.58 ಟ್ರಿಲಿಯನ್ ಡಾಲರ್
  2. ಜಪಾನ್: 1.83 ಟ್ರಿಲಿಯನ್ ಡಾಲರ್
  3. ಸ್ವಿಟ್ಜರ್​ಲ್ಯಾಂಡ್: 1.29 ಟ್ರಿಲಿಯನ್ ಡಾಲರ್
  4. ಭಾರತ: 657.16 ಬಿಲಿಯನ್ ಡಾಲರ್
  5. ರಷ್ಯಾ: 572 ಬಿಲಿಯನ್ ಡಾಲರ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್