AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP: 3ನೇ ತ್ರೈಮಾಸಿಕದ ಜಿಡಿಪಿ ವರದಿ: ಡಿಸೆಂಬರ್ ಕ್ವಾರ್ಟರ್​ನಲ್ಲಿ ಶೇ. 4.4ರ ದರಕ್ಕೆ ಸೀಮಿತಗೊಂಡ ಆರ್ಥಿಕತೆ

NSO Releases Latest GDP Figure: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ 3ನೇ ತ್ರೈಮಾಸಿಕ ಅವಧಿಯ ಜಿಡಿಪಿ ಡಾಟಾ ಬಿಡುಗಡೆ ಆಗಿದೆ. ಇದರ ಪ್ರಕಾರ ಹಿಂದಿನ ವರ್ಷ ಶೇ. 11.2ರಷ್ಟು ಬೆಳವಣಿಗೆ ಸಾಧಿಸಿದ್ದ ಭಾರತದ ಆರ್ಥಿಕತೆ 3ನೇ ತ್ರೈಮಾಸಿಕ ಅವಧಿಯಲ್ಲಿ ಕೇವಲ ಶೇ. 4.4ರಷ್ಟು ಮಾತ್ರ ಪ್ರಗತಿ ಹೊಂದಿದೆ.

GDP: 3ನೇ ತ್ರೈಮಾಸಿಕದ ಜಿಡಿಪಿ ವರದಿ: ಡಿಸೆಂಬರ್ ಕ್ವಾರ್ಟರ್​ನಲ್ಲಿ ಶೇ. 4.4ರ ದರಕ್ಕೆ ಸೀಮಿತಗೊಂಡ ಆರ್ಥಿಕತೆ
ಜಿಡಿಪಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 28, 2023 | 6:15 PM

Share

ನವದೆಹಲಿ: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ 3ನೇ ತ್ರೈಮಾಸಿಕ ಅವಧಿಯ ಜಿಡಿಪಿ ಡಾಟಾ (GDP Data) ಬಿಡುಗಡೆ ಆಗಿದೆ. ಇದರ ಪ್ರಕಾರ ಹಿಂದಿನ ವರ್ಷ ಶೇ. 11.2ರಷ್ಟು ಬೆಳವಣಿಗೆ ಸಾಧಿಸಿದ್ದ ಭಾರತದ ಆರ್ಥಿಕತೆ 3ನೇ ತ್ರೈಮಾಸಿಕ ಅವಧಿಯಲ್ಲಿ ಕೇವಲ ಶೇ. 4.4ರಷ್ಟು ಮಾತ್ರ ಪ್ರಗತಿ ಹೊಂದಿದೆ. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (NSO- National Statistical Office) ಇಂದು ಮಂಗಳವಾರ 3ನೇ ತ್ರೈಮಾಸಿಕ ಅವಧಿಯ ಜಿಡಿಪಿ ವಿವರಗಳಿರುವ ವರದಿಯನ್ನು ಪ್ರಸ್ತುಪಡಿಸಿದೆ.

ಹಿಂದಿನ ಕ್ವಾರ್ಟರ್​ನಲ್ಲಿ, ಅಂದರೆ 2022 ಜುಲೈನಿಂದ ಸೆಪ್ಟಂಬರ್​ವರೆಗಿನ ತ್ರೈಮಾಸಿಕದಲ್ಲಿ ಶೇ. 6.3 ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಿತ್ತು. ಮೂರನೇ ತ್ರೈಮಾಸಿಕದಲ್ಲಿ ಬೆಳವಣಿಗೆ ಮಂದಗೊಂಡಿದ್ದರೂ 2022-23ರ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7ರಷ್ಟು ಬೆಳೆಯುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಆದರೆ, ಆರ್​ಬಿಐ ಲೆಕ್ಕಾಚಾರ ತುಸು ಭಿನ್ನವಾಗಿತ್ತು. 2022-23ರ ಹಣಕಾಸು ವರ್ಷದಲ್ಲಿ ಶೇ. 7ರಷ್ಟು ಜಿಡಿಪಿ ಬೆಳೆಯಬಹುದು ಎಂದು ಹಿಂದೆ ಅಂದಾಜು ಮಾಡಿದ್ದ ಆರ್​ಬಿಐ ಡಿಸೆಂಬರ್ ತಿಂಗಳಲ್ಲಿ ತನ್ನ ಅಂದಾಜನ್ನು ಶೇ. 6.8ಕ್ಕೆ ಇಳಿಸಿತ್ತು. ಐಎಂಫ್, ಎಡಿಬಿ ಸಂಸ್ಥೆಗಳೂ ಕೂಡ ಭಾರತದ ಆರ್ಥಿಕತೆ ಶೇ. 6.8ರ ದರದಲ್ಲಿ ಬೆಳೆಯಬಹುದು ಎಂದು ಅಂದಾಜು ಮಾಡಿದ್ದವು.

ಇದನ್ನೂ ಓದಿ: Apple Jobs: ಆ್ಯಪಲ್ ಕರಾಮತ್ತು; ಕರ್ನಾಟಕ ಸೇರಿ ವಿವಿಧೆಡೆ 19 ತಿಂಗಳಲ್ಲಿ 1 ಲಕ್ಷ ನೇರ ಉದ್ಯೋಗ

ಗಮನಾರ್ಹ ಸಂಗತಿ ಎಂದರೆ ಸರ್ಕಾರದ ವಿತ್ತೀಯ ಕೊರತೆ ಅಗಾಧ ಇದೆ. ಉದ್ದೇಶಿತ ಗುರಿಗೆ ಹೋಲಿಸಿದರೆ ವಿತ್ತೀಯ ಕೊರತೆ ಶೇ. 67.8ರಷ್ಟಿದೆ. ಕಡಿಮೆ ಆದಾಯ, ಹೆಚ್ಚು ವೆಚ್ಚ ಇದಕ್ಕೆ ಕಾರಣ. 2022ರ ಏಪ್ರಿಲ್​ನಿಂದ 2023 ಜನವರಿ ಅವಧಿಯಲ್ಲಿ ವೆಚ್ಚ ಮತ್ತು ಆದಾಯದ ನಡುವಿನ ಅಂತರವಾದ ವಿತ್ತೀಯ ಕೊರತೆ ಬರೋಬ್ಬರಿ 11.9 ಲಕ್ಷ ಕೋಟಿ ರೂ ಎಂದು ಸಿಜಿಎ ಬಿಡುಗಡೆ ಮಾಡಿದ ದತ್ತಾಂಶಗಳಿಂದ ತಿಳಿದುಬರುತ್ತದೆ.

ಇನ್ನು ಮೂರನೇ ತ್ರೈಮಾಸಿಕದಲ್ಲಿನ ಜಿಡಿಪಿ ಬೆಳವಣಿಗೆ ವಿಷಯಕ್ಕೆ ಬಂದರೆ ವಿವಿಧ ಹಣಕಾಸು ಸಂಸ್ಥೆಗಳು, ರೇಟಿಂಗ್ ಏಜೆನ್ಸಿಗಳು ಬಹುತೇಕ ಸಮಾನ ರೀತಿಯಲ್ಲಿ ಅಂದಾಜು ಮಾಡಿದ್ದವು. ಆರ್​ಬಿಐ ಶೇ. 4.4ರಷ್ಟು ಜಿಡಿಪಿ ಬೆಳೆಯಬಹುದು ಎಂದು ನಿಖರವಾಗಿ ಅಂದಾಜು ಮಾಡಿತ್ತು. ಇಕ್ರಾ ರೇಟಿಂಗ್ ಏಜೆನ್ಸಿ ಶೇ. 5.1, ಎಸ್​ಬಿಐ ಶೇ. 4.6, ಬಾರ್ಕ್ಲೇಸ್ ಇಂಡಿಯಾ ಶೇ. 5 ರಷ್ಟು ಭಾರತದ ಜಿಡಿಪಿ ಬೆಳೆಯಬಹುದು ಎಂದು ಅಂದಾಜಿಸಿದ್ದವು.

ಇನ್ನಷ್ಟು ವ್ಯವಹಾರಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Tue, 28 February 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!