AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಬ್ಯಾಂಕ್​ನಿಂದ 1.5 ಬಿಲಿಯನ್, ಎಡಿಬಿಯಿಂದ 1 ಬಿಲಿಯನ್ ಡಾಲರ್ ಸಾಲ ಪಡೆಯಲಿರುವ ಭಾರತ

World Bank and ADB loans to India: ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕುಗಳಿಂದ ಭಾರತ 2.5 ಬಿಲಿಯನ್ ಡಾಲರ್​ನಷ್ಟು ಸಾಲ ಪಡೆಯುತ್ತಿದೆ. ವಿಶ್ವಬ್ಯಾಂಕ್ ನಿರ್ದೇಶಕರ ಮಂಡಳಿಯು ಭಾರತಕ್ಕೆ 1.5 ಬಿಲಿಯನ್ ಡಾಲರ್ ಸಾಲಕ್ಕೆ ಅನುಮೋದನೆ ನೀಡಿದೆ. ಎಡಿಬಿಯಿಂದ 1 ಬಿಲಿಯನ್ ಡಾಲರ್ ಸಾಲ ಸಿಗುವ ನಿರೀಕ್ಷೆ ಇದೆ. ಸಬ್ಸಿಡಿ ವೆಚ್ಚ ಸರಿದೂಗಿಸಲು ಮತ್ತು ಅಭಿವೃದ್ಧಿ ಯೋಜನೆಗಳಿಗೆ ವೆಚ್ಚ ಭರಿಸಲು ಈ ಸಾಲ ಬಳಕೆಯಾಗಲಿದೆ.

ವಿಶ್ವಬ್ಯಾಂಕ್​ನಿಂದ 1.5 ಬಿಲಿಯನ್, ಎಡಿಬಿಯಿಂದ 1 ಬಿಲಿಯನ್ ಡಾಲರ್ ಸಾಲ ಪಡೆಯಲಿರುವ ಭಾರತ
ವಿಶ್ವ ಬ್ಯಾಂಕ್Image Credit source: Pavlo Gonchar/SOPA Images/LightRocket via Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 21, 2026 | 1:32 PM

Share

ನವದೆಹಲಿ, ಜೂನ್ 21: ಸುಧಾರಣಾ ಯೋಜನೆಗಳಿಗೆ ಬೆಂಬಲ ನೀಡಲು, ಏರುತ್ತಿರುವ ಸಬ್ಸಿಡಿ ವೆಚ್ಚಗಳನ್ನು ಸರಿದೂಗಿಸಲು ಮತ್ತು ನಗರಾಭಿವೃದ್ಧಿ ಯೋಜನೆಗಳಿಗೆ ಧನಸಹಾಯ ನೀಡಲು ಭಾರತ ಸರ್ಕಾರವು ಅಂತಾರಾಷ್ಟ್ರೀಯ ಬ್ಯಾಂಕುಗಳಿಂದ ಭಾರೀ ಮೊತ್ತದ ಸಾಲ ಪಡೆಯುತ್ತಿದೆ. ವಿಶ್ವ ಬ್ಯಾಂಕ್ (World Bank) ಮತ್ತು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB) ನಿಂದ ಸುಮಾರು $2.5 ಬಿಲಿಯನ್ (24,000 ಕೋಟಿ ರೂ) ಸಾಲ ಪಡೆಯಲು ಮಾತುಕತೆ ನಡೆಸುತ್ತಿದೆ.

ವಿಶ್ವ ಬ್ಯಾಂಕ್‌ನಿಂದ $1.5 ಬಿಲಿಯನ್ ಮತ್ತು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್‌ನಿಂದ $1 ಬಿಲಿಯನ್ ಸಾಲ ಪಡೆಯುವ ನಿರೀಕ್ಷೆ ಇದೆ. ಮುಂದಿನ ಎರಡು ತಿಂಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬಹುದು. ವರದಿ ಪ್ರಕಾರ ವಿಶ್ವ ಬ್ಯಾಂಕ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್​ಗಳ ಮಂಡಳಿಯು ಭಾರತದ ಸಾಲಕ್ಕೆ ಶುಕ್ರವಾರ (ಜೂನ್ 19) ಅನುಮೋದನೆ ನೀಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: 2008ರ ಆರ್ಥಿಕ ಹಿಂಜರಿತದಂತೆ ಕಾಡಲಿದೆಯೇ ಕೃತಕ ಬುದ್ಧಿಮತ್ತೆ?: ಜಾಗತಿಕ ಎಐ ಹೂಡಿಕೆಯ ಕುರಿತು ಆತಂಕ ವ್ಯಕ್ತಪಡಿಸಿದ ಪ್ರೊ. ಅಶ್ವತ್ ದಾಮೋದರನ್

ಸಾಲಕ್ಕೆ ಕಾರಣವೇನು?: ಮಧ್ಯಪ್ರಾಚ್ಯದಲ್ಲಿ (ಇರಾನ್ ಸಂಘರ್ಷ) ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಏರಿಕೆಯಾಗಿವೆ. ಭಾರತವು ತನ್ನ 80% ಕ್ಕಿಂತ ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದರಿಂದ, ದೇಶದ ನಾಗರಿಕರನ್ನು ಬೆಲೆ ಏರಿಕೆಯಿಂದ ರಕ್ಷಿಸಲು ಇಂಧನ ಮತ್ತು ರಸಗೊಬ್ಬರಗಳ ಮೇಲಿನ ಸಬ್ಸಿಡಿ ವೆಚ್ಚವನ್ನು ಸರ್ಕಾರ ಹೆಚ್ಚಿಸಬೇಕಾಗಿ ಬಂದಿದೆ. ಇದರಿಂದಾಗಿ ಬಜೆಟ್ ಕೊರತೆ ಎದುರಾಗಿದ್ದು, ದೊಡ್ಡ ಯೋಜನೆಗಳಿಗೆ ಹಣದ ಕೊರತೆಯಾಗಿದೆ.

ಹಣದ ಬಳಕೆ ಎಲ್ಲಿ?: ಈ ಸಾಲದ ಮೊತ್ತವನ್ನು ಮುಖ್ಯವಾಗಿ ನಗರ ಮೂಲಸೌಕರ್ಯಗಳ ಅಭಿವೃದ್ಧಿ (Urban Infrastructure) ಮತ್ತು ಹೊಸ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆಗಳಿಗಾಗಿ ಬಳಸಿಕೊಳ್ಳಲು ಸರ್ಕಾರ ಯೋಜಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದ್ದು, ಅದಕ್ಕೆ ಈ ಹಣ ಸಹಕಾರಿಯಾಗಲಿದೆ.

ಇದನ್ನೂ ಓದಿ: ರಿಲಯನ್ಸ್​ನ ಸೆಲ್ ಮತ್ತು ಬೆಸ್ ತಯಾರಿಕೆಯ ಸಾಮರ್ಥ್ಯ 120 GWhಕ್ಕೆ; ಬೆಸ್ ಯಾಕೆ ಮುಖ್ಯ?

ಭಾರತವು ವಿಶ್ವ ಬ್ಯಾಂಕ್‌ನ ಅತಿ ದೊಡ್ಡ ಗ್ರಾಹಕ ದೇಶಗಳಲ್ಲಿ ಒಂದಾಗಿದ್ದು, ಈಗಾಗಲೇ $37 ಬಿಲಿಯನ್​ನಷ್ಟು ಮೊತ್ತದ ಸಾಲಗಳನ್ನು ಹೊಂದಿದೆ. ಪ್ರಸ್ತುತ ಕೇಳಲಾಗಿರುವ ಸಾಲವು ವಿಶ್ವ ಬ್ಯಾಂಕ್ ಭಾರತಕ್ಕೆ ವಾರ್ಷಿಕವಾಗಿ ನೀಡಲು ಒಪ್ಪಿಕೊಂಡಿರುವ $8-$10 ಬಿಲಿಯನ್ ಸಾಲದ ಕಾರ್ಯಕ್ರಮದ ಭಾಗವೇ ಆಗಿದೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!