AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಹಣದುಬ್ಬರ ನವೆಂಬರ್​ನಲ್ಲಿ ಶೇ. 5.55ಕ್ಕೆ ಏರಿಕೆ; ಕಳೆದ ಮೂರು ತಿಂಗಳಲ್ಲೇ ಗರಿಷ್ಠ ಮಟ್ಟ

Retail Inflation in 2023 November: ಕೇಂದ್ರ ಸಾಂಖ್ಯಿಕ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಅಕ್ಟೋಬರ್​ನಲ್ಲಿ ಶೇ 4.87ರಷ್ಟಿದ್ದ ರೀಟೇಲ್ ಹಣದುಬ್ಬರ ನವೆಂಬರ್ ತಿಂಗಳಲ್ಲಿ ಶೇ. 5.55ಕ್ಕೆ ಏರಿದೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 5.88ರಷ್ಟಿತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಹಣದುಬ್ಬರ ತುಸು ಕಡಿಮೆ ಇದೆ. ಆಹಾರ ವಸ್ತುಗಳ ಬೆಲೆ ಏರಿಕೆಯು ನವೆಂಬರ್ ತಿಂಗಳ ಹಣದುಬ್ಬರ ಏರಿಕೆಗೆ ಕಾರಣ ಎನ್ನಲಾಗಿದೆ.

ಭಾರತದ ಹಣದುಬ್ಬರ ನವೆಂಬರ್​ನಲ್ಲಿ ಶೇ. 5.55ಕ್ಕೆ ಏರಿಕೆ; ಕಳೆದ ಮೂರು ತಿಂಗಳಲ್ಲೇ ಗರಿಷ್ಠ ಮಟ್ಟ
ಹಣದುಬ್ಬರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 12, 2023 | 6:56 PM

ನವದೆಹಲಿ, ಡಿಸೆಂಬರ್ 12: ಭಾರತದ ಗ್ರಾಹಕ ಬೆಲೆ ಅನುಸೂಚಿ ಆಧಾರಿತ ಹಣದುಬ್ಬರ ಅಥವಾ ರೀಟೇಲ್ ಹಣದುಬ್ಬರ (retail inflation) ನವೆಂಬರ್ ತಿಂಗಳಲ್ಲಿ ಶೇ. 5.55ರಷ್ಟು ಏರಿದೆ. ಕೇಂದ್ರ ಸಾಂಖ್ಯಿಕ ಸಚಿವಾಲಯ (statistics ministry) ಇಂದು (ಡಿ. 12) ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಆಹಾರವಸ್ತುಗಳ ಬೆಲೆ ಏರಿಕೆ ಪರಿಣಾಮವಾಗಿ ಚಿಲ್ಲರೆ ಮಾರಾಟ ಹಣದುಬ್ಬರ ಗಣನೀಯವಾಗಿ ಹೆಚ್ಚಾಗಿದೆ. ಅಕ್ಟೋಬರ್ ತಿಂಗಳಲ್ಲಿ ಹಣದುಬ್ಬರ ಶೇ. 4.87ರಷ್ಟಿತ್ತು. ಆದರೆ, ಕಳೆದ ವರ್ಷದ ನವೆಂಬರ್​ನಲ್ಲಿ ಶೇ. 5.88ಕ್ಕೆ ಹೋಲಿಸಿದರೆ ಈ ಬಾರಿ ಹಣದುಬ್ಬರ ತುಸು ಕಡಿಮೆ ಆಗಿದೆ.

ನವೆಂಬರ್​ನಲ್ಲಿ ಗ್ರಾಮೀಣ ಭಾಗದಲ್ಲಿ ಹಣದುಬ್ಬರ ಶೇ. 5.85ರಷ್ಟು ಇದ್ದರೆ, ನಗರ ಭಾಗದಲ್ಲಿ ಹಣದುಬ್ಬರ ಶೇ. 5.26ರಷ್ಟು ಇದೆ ಎಂದು ಸಾಂಖ್ಯಿಕ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಐಫೋನ್​ಗಳಿಗೆ ಭಾರತದಲ್ಲೇ ಗೊರಿಲ್ಲಾ ಗ್ಲಾಸ್ ಉತ್ಪಾದನೆ; ಅಮೆರಿಕದ ಕಾರ್ನಿಂಗ್​ನಿಂದ ಫ್ಯಾಕ್ಟರಿ ಸ್ಥಾಪನೆ

ನವೆಂಬರ್​ನಲ್ಲಿ ಹಣದುಬ್ಬರ ಶೇ. 6ರ ಗಡಿ ದಾಟಬಹುದು ಎಂದು ಕೆಲ ಆರ್ಥಿಕ ತಜ್ಞರು ನಿರೀಕ್ಷಿಸಿದ್ದರು. ಈರುಳ್ಳಿ, ಟೊಮೆಟೋ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ನಿರೀಕ್ಷೆಮೀರಿ ಹೆಚ್ಚಬಹುದು ಎನ್ನಲಾಗಿತ್ತು. ಆದರೆ, ಹಣದುಬ್ಬರ ದರ ಶೇ. 6ಕ್ಕಿಂತಲೂ ಕಡಿಮೆ ಇದೆ.

ರಿಸರ್ವ್ ಬ್ಯಾಂಕ್ ಹಣದುಬ್ಬರವನ್ನು ಶೇ. 4ಕ್ಕೆ ತಂದು ನಿಲ್ಲಿಸುವ ಗುರಿ ಇಟ್ಟಿದೆ. ಶೇ. 2ರಿಂದ 6 ಅನ್ನು ಹಣದುಬ್ಬರ ತಾಳಿಕೆ ಮಿತಿ ಎಂದು ನಿಗದಿ ಮಾಡಿದೆ. ನವೆಂಬರ್​ನ ಹಣದುಬ್ಬರವು ಆರ್​ಬಿಐನ ತಾಳಿಕೆ ಮಿತಿಗೆ ಸಮೀಪವೇ ಹೋಗಿದೆ.

ಇದನ್ನೂ ಓದಿ: Economy: ಕೋವಿಡ್ ಬಾರದೇ ಹೋಗಿದ್ದರೆ ಭಾರತದ ಆರ್ಥಿಕತೆ ಹೇಗಿರುತ್ತಿತ್ತು? ಎಷ್ಟು ಹಿಂದೆಬಿದ್ದಿದೆ? ಆರ್ಥಿಕ ತಜ್ಞ ನೀಲಕಾಂತ್ ಮಿಶ್ರ ಅಭಿಪ್ರಾಯ ಇದು

ಈ ನವೆಂಬರ್​ನಲ್ಲಿ ಈರುಳ್ಳಿ ಬೆಲೆ ಹೆಚ್ಚಳವನ್ನು ತಡೆಯಲು ಸರ್ಕಾರ ಹರಸಾಹಸ ನಡೆಸುತ್ತಿದೆ. ಇದು ಹತೋಟಿಗೆ ಬರದೇ ಹೋದರೆ ಡಿಸೆಂಬರ್​ನಲ್ಲೂ ಹಣದುಬ್ಬರ ಶೇ. 5ಕ್ಕಿಂತಲೂ ಹೆಚ್ಚೇ ಇರುವ ಸಾಧ್ಯತೆ ಇದೆ. ಹೆಚ್ಚಿನ ಹಣದುಬ್ಬರ ಮಟ್ಟ ಇದ್ದರೂ ಆರ್​ಬಿಐ ಬಡ್ಡಿದರ ಹೆಚ್ಚಿಸುವ ಸಾಧ್ಯತೆ ಬಹಳ ಕಡಿಮೆ ಎಂದು ಪರಿಣಿತರು ಭಾವಿಸಿದ್ದಾರೆ. ರೆಪೋದರ ಹೆಚ್ಚಿಸಿದರೆ ಆರ್ಥಿಕ ಬೆಳವಣಿಗೆ ಧಕ್ಕೆ ಆಗುತ್ತದೆಯಾದ್ದರಿಂದ ಆರ್​ಬಿಐ ಕೂಡ ಅಷ್ಟು ಸುಲಭಕ್ಕೆ ಬಡ್ಡಿದರ ಹೆಚ್ಚಳಕ್ಕೆ ಮುಂದಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ