AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

India in a very comfortable position in energy security, says govt sources: ಕಚ್ಚಾ ತೈಲ, ಎಲ್​ಪಿಜಿ, ಎಲ್​ಎನ್​ಜಿಗೆ ಯಾವ ಕೊರತೆ ಇಲ್ಲ. ಇವುಗಳಿಗೆ ಭಾರತ ಪರ್ಯಾಯ ಮೂಲಗಳನ್ನು ಅವಲೋಕಿಸುತ್ತಿದೆ ಎಂದು ಮೂಲಗಳು ಹೇಳಿವೆ. ಭಾರತದಲ್ಲಿ ಸದ್ಯ ಸಾಕಷ್ಟು ಇಂಧನ ದಾಸ್ತಾನು ಇದೆ. ಕಳವಳಪಡಬೇಕಾದ ಪರಿಸ್ಥಿತಿ ಇಲ್ಲ. ಎಲ್​ಪಿಇ ಮತ್ತು ಎಲ್​ಎನ್​ಜಿಗಾಗಿ ಬೇರೆ ಬೇರೆ ಮೂಲಗಳನ್ನು ಹುಡುಕಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು
ಕಚ್ಚಾ ತೈಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 05, 2026 | 6:30 PM

Share

ನವದೆಹಲಿ, ಮಾರ್ಚ್ 5: ಭಾರತದ ಇಂಧನ ಭದ್ರತೆ (Energy security) ಉತ್ತಮವಾಗಿದೆ. ಇಂಧನ ದಾಸ್ತಾನು ಸಾಕಷ್ಟು ಇದೆ ಎದು ಸರ್ಕಾರದ ಮೂಲಗಳು ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ. ಕಚ್ಚಾ ತೈಲವನ್ನು (Crude Oil) ದಿನವೂ ಭರಿಸಲಾಗುತ್ತಿದೆ ಎಂದೂ ವರದಿಯಲ್ಲಿ ಹೇಳಲಾಗಿದೆ. ಭಾರತಕ್ಕೆ ಎಲ್​ಪಿಜಿ ಮತ್ತು ಎಲ್​ಎನ್​ಜಿ ಗ್ಯಾಸ್ ಬಿಕ್ಕಟ್ಟು ಎದುರಾಗಿದೆ ಎನ್ನುವಂತಹ ವರದಿಗಳನ್ನೂ ಸರ್ಕಾರದ ಮೂಲಗಳು ತಳ್ಳಿಹಾಕಿವೆ.

‘ವಿಶ್ವದಲ್ಲಿ ಕಚ್ಚಾ ತೈಲಕ್ಕೆ ಯಾವ ಕೊರತೆ ಇಲ್ಲ. ಎಲ್​ಪಿಜಿ ಅಥವಾ ಎಲ್​ಎನ್​ಜಿಗೂ ಕೊರತೆ ಬಂದಿಲ್ಲ. ಇತರ ಪೂರೈಕೆದಾರರೊಂದಿಗೂ ಭಾರತ ಸಂಪರ್ಕದಲ್ಲಿದೆ. ಆಸ್ಟ್ರೇಲಿಯಾ ಮತ್ತು ಕೆನಡಾ ದೇಶಗಳು ಭಾರತಕ್ಕೆ ಗ್ಯಾಸ್ ಮಾರಲು ಮುಂದೆ ಬಂದಿವೆ. ಭಾರತ ಪರ್ಯಾಯ ಮೂಲಗಳನ್ನೂ ಹುಡುಕುತ್ತಿದೆ. ಇತ್ತೀಚೆಗಷ್ಟೇ ಯುಎಇ ಮತ್ತು ಅಮೆರಿಕ ಜೊತೆ ಭಾರತ ಹೊಸ ಗುತ್ತಿಗೆಗೆ ಸಹಿ ಹಾಕಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ.

ಭಾರತ 195 ಎಂಎಂಎಸ್​ಸಿಎಂಡಿಯಷ್ಟು ಅನಿಲವನ್ನು ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಕತಾರ್ 60 ಎಂಎಂಎಸ್​ಸಿಎಂಡಿ ಗ್ಯಾಸ್ ಪೂರೈಸುತ್ತದೆ. ಅನಿಲಕ್ಕಾಗಿ ಭಾರತ ಇತರ ಮಾರುಕಟ್ಟೆಗಳನ್ನೂ ಅವಲೋಕಿಸುತ್ತಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ. ಎಂಎಂಎಸ್​ಸಿಎಂಡಿ ಎಂದರೆ ಮಿಲಿಯನ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ಸ್ ಪರ್ ಡೇ. ಅಂದರೆ ದಿನಕ್ಕೆ ಮಿಲಿಯನ್ ಸ್ಟ್ಯಾಂಡರ್ ಕ್ಯೂಬಿಕ್ ಮೀಟರ್ನ್ಸ್​ನಷ್ಟು ಗ್ಯಾಸ್ ಪೂರೈಕೆ. ಕಿಲೋಗೆ ಪರಿವರ್ತಿಸುವುದಾದರೆ ಸುಮಾರು ದಿನಕ್ಕೆ 8.5 ಲಕ್ಷ ಕಿಲೋ ಗ್ಯಾಸ್ ಆಗುತ್ತದೆ.

ಇದನ್ನೂ ಓದಿ: ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

ಕಚ್ಚಾ ತೈಲ ಮತ್ತು ಅನಿಲಗಳನ್ನು ಖರೀದಿಸಲು ಭಾರತ ವಿಶ್ವದ ವಿವಿಧ ಏಜೆನ್ಸಿಗಳೊಂದಿಗೆ ಸಂಪರ್ಕದಲ್ಲಿದೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆಯಾದ ಐಇಎ ಮತ್ತು ಒಕೆಪ್ (ಒಪಿಇಸಿ) ಜೊತೆ ಮಾತುಕತೆ ನಡೆಸುತ್ತಿದೆ. ತೈಲ ಸಾಗಿಸುವ ಹಡಗುಗಳಿಗೆ ಇನ್ಷೂರೆನ್ಸ್ ಪಡೆಯಲು ಅಮೆರಿಕದೊಂದಿಗೂ ಭಾರತ ಮಾತುಕತೆ ನಡೆಸುತ್ತಿದೆ. ದಿನಕ್ಕೆ ಎರಡು ಬಾರಿ ಇಂಧನ ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ