AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾನೂನಿನಿಂದ ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧಕ್ಕೆ ಹಿನ್ನಡೆ, ಜಾಗತಿಕ ಇಂಧನ ಮಾರುಕಟ್ಟೆಗೂ ಧಕ್ಕೆ: ಭಾರತ ಪ್ರತಿಕ್ರಿಯೆ

ರಷ್ಯಾ, ಇರಾನ್ ನಿರ್ಬಂಧ ಕಾಯ್ದೆಗೆ ಅಮೆರಿಕ ಸಂಸತ್ತು ಅನುಮೋದನೆ ನೀಡಿದೆ. ಅದರಂತೆ ಆ ಎರಡು ದೇಶಗಳಿಂದ ತೈಲ, ಅನಿಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ. 100ರವರೆಗೆ ಟ್ಯಾರಿಫ್ ವಿಧಿಸುವ ಅಧಿಕಾರವನ್ನು ಅಧ್ಯಕ್ಷರಿಗೆ ಕೊಡಲಾಗುತ್ತದೆ. ಅಮೆರಿಕದ ಈ ಬೆಳವಣಿಗೆ ಬಗ್ಗೆ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ತನಗೆ 140 ಕೋಟಿ ಜನರಿಗೆ ಇಂಧನ ಭದ್ರತೆ ಒದಗಿಸುವುದೇ ಮುಖ್ಯ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.

ಈ ಕಾನೂನಿನಿಂದ ಭಾರತ-ಅಮೆರಿಕ ದ್ವಿಪಕ್ಷೀಯ ಸಂಬಂಧಕ್ಕೆ ಹಿನ್ನಡೆ, ಜಾಗತಿಕ ಇಂಧನ ಮಾರುಕಟ್ಟೆಗೂ ಧಕ್ಕೆ: ಭಾರತ ಪ್ರತಿಕ್ರಿಯೆ
ಅಮೆರಿಕದ ಕಾಯ್ದೆಗೆ ತೀಕ್ಷ್ಣ ಉತ್ತರ ಕೊಟ್ಟ ಭಾರತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 17, 2026 | 2:00 PM

Share

ನವದೆಹಲಿ, ಸೆಪ್ಟೆಂಬರ್ 17: ಅಮೆರಿಕದ ಸಂಸತ್ತು (US Congress) ಅನುಮೋದಿಸಿರುವ ಕಾಯ್ದೆಗೆ (‘Sanctioning Russia and Iran Act’) ಕಾಯ್ದೆಗೆ ಭಾರತ ಸರ್ಕಾರವು ತನ್ನ ಅಧಿಕೃತ ಪ್ರತಿಕ್ರಿಯೆಯನ್ನು ನೀಡಿದೆ. ಈ ಕುರಿತು ವಿದೇಶಾಂಗ ಸಚಿವಾಲಯವು (MEA) ವಿಶೇಷ ಪ್ರಕಟಣೆ ಹೊರಡಿಸಿದ್ದು, ದೇಶದ 140 ಕೋಟಿ ಜನರ ಇಂಧನ ಭದ್ರತೆ ಹಾಗೂ ಭಾರತೀಯ ಆರ್ಥಿಕ ಹಿತಾಸಕ್ತಿಯನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.

ಅಮೆರಿಕ ಕಾಂಗ್ರೆಸ್‌ನಲ್ಲಿ ಮಸೂದೆ ಅಂಗೀಕಾರವಾಗಿರುವುದನ್ನು ಭಾರತ ಸರ್ಕಾರವು ಗಮನಿಸಿದ್ದು, ಈ ವಿಷಯದಲ್ಲಿ ಮುಂದಿನ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇಶದ 140 ಕೋಟಿ ಪ್ರಜೆಗಳ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಬದ್ಧವಾಗಿದೆ. ವಿವಿಧ ಮೂಲಗಳಿಂದ (Diversified Sourcing) ಇಂಧನ ಆಮದು ಮಾಡಿಕೊಳ್ಳುವುದು ಮತ್ತು ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳಿಗೆ ಅನುಗುಣವಾಗಿ ತೈಲ ಖರೀದಿ ನಿರ್ಧಾರಗಳನ್ನು ಕೈಗೊಳ್ಳುವುದು ಮುಂದುವರಿಯಲಿದೆ ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ ಶೇ. 100 ಟ್ಯಾರಿಫ್ ಹಾಕುವ ಭೀತಿ; ಬೃಹತ್ ಸುಂಕದ ತಡೆ ಬಂದರೆ ಭಾರತಕ್ಕಾಗುವ ಹಾನಿ ದೊಡ್ಡದೇ

ಉನ್ನತ ಮಟ್ಟದ ಮಾತುಕತೆ: ಕಳೆದ ಕೆಲವು ತಿಂಗಳುಗಳಲ್ಲಿ ಅಮೆರಿಕದ ಉನ್ನತ ಅಧಿಕಾರಿಗಳು ಮತ್ತು ಪ್ರತಿನಿಧಿಗಳೊಂದಿಗೆ ಈ ವಿಷಯದ ಕುರಿತು ಸವಿಸ್ತಾರವಾಗಿ ಚರ್ಚಿಸಲಾಗಿದೆ. ಈ ಮಸೂದೆಯು ಕೇವಲ ದ್ವಿಪಕ್ಷೀಯ ಬಾಂಧವ್ಯದ ಮೇಲಷ್ಟೇ ಅಲ್ಲದೆ, ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆಯೂ ಬೀರುವ ಪರಿಣಾಮಗಳನ್ನು ಭಾರತವು ಸ್ಪಷ್ಟವಾಗಿ ಮನವರಿಕೆ ಮಾಡಿಕೊಟ್ಟಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪತ್ರಕರ್ತೆಯ ಎಕ್ಸ್ ಪೋಸ್ಟ್

ವ್ಯಾಪಾರ ಮತ್ತು ಆರ್ಥಿಕ ಹಿತಾಸಕ್ತಿ ರಕ್ಷಣೆ: ದೇಶದ ವ್ಯಾಪಾರ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳಲು ಭಾರತ ಸರ್ಕಾರ ಬದ್ಧವಾಗಿದೆ. ಈ ಕಾಯ್ದೆಯು ಜಾರಿಗೆ ಬಂದರೆ ಉಂಟಾಗಬಹುದಾದ ಆರ್ಥಿಕ ಹಾಗೂ ವಾಣಿಜ್ಯ ಸವಾಲುಗಳನ್ನು ಎದುರಿಸಲು ಸರ್ಕಾರವು ಭಾರತೀಯ ಉದ್ಯಮ ಮತ್ತು ವಾಣಿಜ್ಯ ಮಂಡಳಿಗಳೊಂದಿಗೆ (Trade & Industry Bodies) ನಿಕಟವಾಗಿ ಕಾರ್ಯಾಚರಿಸಲಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಅಮೆರಿಕದ ಶೇ.100 ಸುಂಕ ಬೆದರಿಕೆಗೆ ಭಾರತದ ಖಡಕ್ ಪ್ರತ್ಯುತ್ತರ: 140 ಕೋಟಿ ಜನರ ಇಂಧನ ಭದ್ರತೆ ನಮಗೆ ಮೊದಲ ಆದ್ಯತೆ

ಅಮೆರಿಕದ ಸಂಸತ್ತು ಅನುಮೋದನೆ ನೀಡಿರುವ ಈ ಕಾಯ್ದೆಯು ರಷ್ಯಾ ಹಾಗು ಇರಾನ್​ನಿಂದ ತೈಲ ಮತ್ತು ಅನಿಲ ಖರೀದಿಸುವ ದೇಶಗಳ ಮೇಲೆ ಗರಿಷ್ಠ ಶೇ. 100ರಷ್ಟು ಟ್ಯಾರಿಫ್ ಹಾಕುವ ಅಧಿಕಾರವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡುತ್ತದೆ. ರಷ್ಯಾದಿಂದ ಹೆಚ್ಚು ತೈಲ ಖರೀದಿಸುವ ರಾಷ್ಟ್ರಗಳಲ್ಲಿ ಚೀನಾ ಮತ್ತು ಭಾರತ ಇದೆ. ಹೀಗಾಗಿ, ಭಾರತದ ಮೇಲೆ ಟ್ರಂಪ್ ಶೇ. 100 ಟ್ಯಾರಿಫ್ ಹಾಕುವ ಅವಕಾಶ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:55 pm, Thu, 17 September 26

Follow Us
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್