2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ

20207ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದ್ದು, ಜರ್ಮನಿ ಮತ್ತು ಜಪಾನ್ ಅನ್ನು ಹಿಂದಿಕ್ಕಲಿದೆ ಎಂದು ಜಾಗತಿಕ ಹೂಡಿಕೆ ಬ್ಯಾಂಕ್ ‘ಮಾರ್ಗನ್ ಸ್ಟ್ಯಾನ್ಲಿ’ ವರದಿ ತಿಳಿಸಿದೆ.

2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ
ಸಾಂದರ್ಭಿಕ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on: Nov 09, 2022 | 5:55 PM

ನವದೆಹಲಿ: 20207ರ ವೇಳೆಗೆ ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದ್ದು, ಜರ್ಮನಿ (Germany) ಮತ್ತು ಜಪಾನ್ (Japan) ಅನ್ನು ಹಿಂದಿಕ್ಕಲಿದೆ. 2030ರ ವೇಳೆಗೆ ವಿಶ್ವದ ಮೂರನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ (stock market) ಗುರುತಿಸಿಕೊಳ್ಳಲಿದೆ. ತಂತ್ರಜ್ಞಾನ ಮತ್ತು ಇಂಧನ ಕ್ಷೇತ್ರಗಳಲ್ಲಿನ ಹೂಡಿಕೆ ಮತ್ತು ಜಾಗತಿಕ ಟ್ರೆಂಡ್​ಗಳು ಈ ಮುನ್ಸೂಚನೆ ನೀಡಿವೆ ಎಂದು ಜಾಗತಿಕ ಹೂಡಿಕೆ ಬ್ಯಾಂಕ್ ‘ಮಾರ್ಗನ್ ಸ್ಟ್ಯಾನ್ಲಿ (Morgan Stanley)’ ವರದಿ ತಿಳಿಸಿದೆ.

ಭಾರತವು ಈಗಾಗಲೇ ವಿಶ್ವದಲ್ಲೇ ಅತಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಗಿದೆ. ಕಳೆದ ದಶಕದಲ್ಲಿ ಸರಾಸರಿ ಶೇಕಡಾ 5.5ರ ಒಟ್ಟು ದೇಶೀಯ ಉತ್ಪನ್ನ ಬೆಳವಣಿಗೆ (ಜಿಡಿಪಿ) ಸಾಧಿಸಿದೆ. ಡಿಜಿಟಲೀಕರಣ, ಇಂಧನ ಪರಿವರ್ತನೆಗಳು ದೇಶದ ಆರ್ಥಿಕ ಬೆಳವಣಿಗೆಯ ವೇಗವನ್ನು ವೃದ್ಧಿಸಿವೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Meta Layoffs: ಮೆಟಾದಿಂದ 11,000 ಉದ್ಯೋಗಿಗಳ ವಜಾ; ಮಾರ್ಕ್ ಝುಕರ್​ಬರ್ಗ್ ಘೋಷಣೆ

ಇದನ್ನೂ ಓದಿ
Image
ಆರೋಗ್ಯ ವಿಮೆ ಪೋರ್ಟ್ ಮಾಡುವುದು ಹೇಗೆ, ಪ್ರಯೋಜನವೇನು? ಇಲ್ಲಿದೆ ವಿವರ
Image
ನಿಮ್ಮ ಪಿಎಫ್​ ಖಾತೆಗೂ ಬಂತೇ ಇಪಿಎಫ್​ ಬಡ್ಡಿ ಹಣ, ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ
Image
Stock Market: ಷೇರುಪೇಟೆ ವಹಿವಾಟಿಗೆ ಇಂದು ಬಿಡುವು; ಕಾರಣವೇನು?
Image
Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ

2027ರ ವೇಳೆಗೆ ಭಾರತವು ಜಪಾನ್ ಮತ್ತು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗುವ ಭರವಸೆ ಇದೆ. ಈ ದಶಕದ ಅಂತ್ಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ಷೇರುಮಾರುಕಟ್ಟೆಯಾಗಿ ಹೊರಹೊಮ್ಮುವ ವಿಶ್ವಾಸವಿದೆ. ಭಾರತವು ಜಾಗತಿಕ ಮಟ್ಟದಲ್ಲಿ ಸತತವಾಗಿ ಬೆಳವಣಿಗೆ ಹೊಂದುತ್ತಲೇ ಇದೆ ಎಂದು ‘ಮಾರ್ಗನ್ ಸ್ಟ್ಯಾನ್ಲಿ’ ಭಾರತ ವಿಭಾಗದ ಚೀಫ್ ಈಕ್ವಿಟಿ ಸ್ಟ್ರಾಟಜಿಸ್ಟ್ ರಿಧಂ ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಜಿಡಿಪಿ ಬೆಳವಣಿಗೆಯು ಸದ್ಯ 3.5 ಟ್ರಿಲಿಯನ್ ಡಾಲರ್​ನಷ್ಟಿದ್ದು 2031ರ ವೇಳೆಗೆ ಇದು 7.5 ಟ್ರಿಲಿಯನ್ ಡಾಲರ್ ತಲುಪಲಿದೆ. ಈ ಅವಧಿಯಲ್ಲಿ ಜಾಗತಿಕ ರಫ್ತು ವಹಿವಾಟು ಕೂಡ ದ್ವಿಗುಣಗೊಳ್ಳಲಿದೆ. ಬಿಎಸ್​ಇ ವಾರ್ಷಿಕ ಶೇಕಡಾ 11ರ ಬೆಳವಣಿಗೆ ಕಾಣುತ್ತಿದ್ದು, ಮುಂದಿನ ದಶಕದ ವೇಳೆಗೆ 10 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಬಂಡವಾಳ ಹೊಂದಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್