Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಸೆಪ್ಟೆಂಬರ್ 15, ಭಾನುವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶಾದ್ಯಂತ ಇಂಧನ ದರ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 71 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.28ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.61 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಪೆಟ್ರೋಲ್
Image Credit source: Indian Express

Updated on: Sep 15, 2024 | 7:40 AM

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ 71 ಡಾಲರ್‌ಗಿಂತ ಹೆಚ್ಚಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 72.28ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. WTI ಕಚ್ಚಾ ಪ್ರತಿ ಬ್ಯಾರೆಲ್‌ಗೆ 71.61 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ.

ಸರ್ಕಾರಿ ತೈಲ ಕಂಪನಿಗಳು ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿ ಇರಿಸಿದೆ.
ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.76 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.66 ರೂ.
ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 103.43 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.95 ರೂ.
ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.93 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 91.75 ರೂ.
ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100.73 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 92.32 ರೂ.

ಮತ್ತಷ್ಟು ಓದಿ: Petrol Diesel Price on September 13: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ದೇಶದ ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು
ನೋಯ್ಡಾ: ಪೆಟ್ರೋಲ್ ಪ್ರತಿ ಲೀಟರ್‌ಗೆ ರೂ 94.83 ಮತ್ತು ಡೀಸೆಲ್ ಲೀಟರ್‌ಗೆ ರೂ 87.96.

ಗುರುಗ್ರಾಮ: ಪೆಟ್ರೋಲ್ ಲೀಟರ್‌ಗೆ 95.19 ಮತ್ತು ಡೀಸೆಲ್ ಲೀಟರ್‌ಗೆ 88.05 ರೂ.

ಬೆಂಗಳೂರು: ಪೆಟ್ರೋಲ್ ಲೀಟರ್‌ಗೆ 102.84 ಮತ್ತು ಡೀಸೆಲ್ ಲೀಟರ್‌ಗೆ 88.92 ರೂ.

ಚಂಡೀಗಢ: ಪ್ರತಿ ಲೀಟರ್ ಪೆಟ್ರೋಲ್ 94.22 ರೂ. ಮತ್ತು ಡೀಸೆಲ್ ಲೀಟರ್ ಗೆ 82.38 ರೂ

ಹೈದರಾಬಾದ್: ಪೆಟ್ರೋಲ್ ಲೀಟರ್‌ಗೆ 107.39 ರೂ. ಮತ್ತು ಡೀಸೆಲ್ ಲೀಟರ್‌ಗೆ 95.63 ರೂ.

ಜೈಪುರ: ಪೆಟ್ರೋಲ್ ಲೀಟರ್‌ಗೆ 104.86 ಮತ್ತು ಡೀಸೆಲ್ ಲೀಟರ್‌ಗೆ 90.34 ರೂ.

ಪಾಟ್ನಾ: ಪೆಟ್ರೋಲ್ ಲೀಟರ್‌ಗೆ 105.16 ರೂ. ಮತ್ತು ಡೀಸೆಲ್ ಲೀಟರ್‌ಗೆ 92.03 ರೂ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.

ರಾಜ್ಯ ಮಟ್ಟದಲ್ಲಿ ಪೆಟ್ರೋಲ್‌ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್‌ನಿಂದ SMS ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಹ ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us