AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ

ಪೋಸ್ಟ್ ಆಫೀಸ್ ಖಾತೆಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಅಥವಾ ವರ್ಗಾಯಿಸಲು ವಿಶೇಷ ಪರಿಶೀಲನೆಯನ್ನು ಮಾಡುವುದು ಅವಶ್ಯಕವಾಗಿದೆ. ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ
ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಡ್ರಾ ಮಾಡಬೇಕಾದರೆ ವಿಶೇಷ ಪರಿಶೀಲನೆ ಅವಶ್ಯಕ
TV9 Web
| Edited By: Rakesh Nayak Manchi|

Updated on:Sep 26, 2022 | 9:39 AM

Share

ಅಂಚೆ ಕಚೇರಿ ಉಳಿತಾಯ ಖಾತೆ (Post Office Savings Account)ಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು (Withdrawal) ಅಥವಾ ಅದನ್ನು ಯಾರಿಗಾದರೂ ವರ್ಗಾಯಿಸಲು (Transactions) ಬಯಸಿದರೆ ನೀವು ವಿಶೇಷ ಪರಿಶೀಲನೆ (Special Verification)ಯನ್ನು ಮಾಡಬೇಕಾಗುತ್ತದೆ. ಆಗ ಮಾತ್ರ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟು ಮಾಡಬಹುದು. ಏಕೆಂದರೆ ಪರಿಶೀಲನೆ ಇಲ್ಲದೆ ನೀವು 10 ಸಾವಿರಕ್ಕಿಂತ ಹೆಚ್ಚಿನ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನೀವು ನಿಯಮಿತವಾಗಿ ಅಂಚೆ ಕಚೇರಿಯಲ್ಲಿನ ಉಳಿತಾಯ ಖಾತೆಯಿಂದ ಹಣವನ್ನು ಹಿಂಪಡೆಯಬಹುದು. ಆದರೆ ಇದೇ ಖಾತೆಯಿಂದ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ನಡೆಸಬೇಕಾದರೆ ಅದಕ್ಕಿರುವ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಅಂಚೆ ಕಚೇರಿಯಲ್ಲಿ ಖಾತೆಯನ್ನು ಹೊಂದಿದ್ದರೆ ಈ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳುಬಹುದು ಬಹಳ ಮುಖ್ಯ.

ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿರುವಂತೆ ಗ್ರಾಹಕರು 10,000 ರೂ.ಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಬಯಸಿದರೆ ಇದಕ್ಕಾಗಿ ಅವರು ವಿಶೇಷ ಪರಿಶೀಲನೆ ಮಾಡಬೇಕಾಗುತ್ತದೆ. ಈ ಬಗ್ಗೆ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸಿಂಗಲ್ ಹ್ಯಾಂಡ್ ಪೋಸ್ಟ್ ಆಫೀಸ್‌ಗಳಲ್ಲಿ ಹೆಚ್ಚಿನ ಹಿಂಪಡೆಯುವಿಕೆಗಾಗಿ ಪರಿಶೀಲನೆ ಪ್ರಕ್ರಿಯೆಯನ್ನು ತೆಗೆದುಹಾಕಲಾಗಿದೆ. ಇದಲ್ಲದೆ ಕೆಲವು ಷರತ್ತುಗಳಲ್ಲಿ ಅಂಚೆ ಕಛೇರಿಯಿಂದ ವಹಿವಾಟುಗಳನ್ನು ಸಹ ಪರಿಶೀಲಿಸಬಹುದು. ಅಂಚೆ ಕಚೇರಿಯಲ್ಲಿ ಬ್ಯಾಂಕಿಂಗ್ ವಂಚನೆ ತಡೆಯಲು ಇಂತಹ ನಿಯಮಗಳನ್ನು ತರಲಾಗಿದೆ. ಇದರಿಂದ ವಂಚನೆ ಪ್ರಕರಣಗಳು ಕಡಿಮೆಯಾಗಲಿವೆ. ಇದರೊಂದಿಗೆ ಜನರನ್ನು ವಂಚನೆಗೆ ಬಲಿಯಾಗದಂತೆ ಸುರಕ್ಷಿತವಾಗಿರಿಸಬಹುದು.

ನೀವು ವಿಶೇಷ ಪರಿಶೀಲನೆಗಾಗಿ ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೊಬೈಲ್ ಸಂಖ್ಯೆಯನ್ನು ಪೋಸ್ಟ್ ಆಫೀಸ್ ಖಾತೆಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಬ್ಯಾಂಕಿಂಗ್‌ಗೆ ಸಂಬಂಧಿಸಿದ ವಂಚನೆ ತಡೆಯಲು ಜಾರಿಗೆ ತಂದಿರುವ ನಿಯಮಗಳ ಹೊರತಾಗಿ ಹಿಂಪಡೆಯುವ ಮಿತಿಯನ್ನೂ ಅಂಚೆ ಇಲಾಖೆ ಹೆಚ್ಚಿಸಿದೆ. ಈ ಹಿಂದೆ ಖಾತೆದಾರರು 5000 ರೂ.ವರೆಗೆ ಮಾತ್ರ ಹಿಂಪಡೆಯಬಹುದಾಗಿತ್ತು. ಆದರೆ ಈಗ ಅದನ್ನು 20,000 ರೂ.ಗೆ ಹೆಚ್ಚಿಸಲಾಗಿದೆ. ಇದಲ್ಲದೇ ಯಾವುದೇ ಗ್ರಾಹಕರ ಖಾತೆಯಲ್ಲಿ 50 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ಶಾಖೆಯ ಪೋಸ್ಟ್ ಮಾಸ್ಟರ್ ಸ್ವೀಕರಿಸುವುದಿಲ್ಲ.

ದೇಶದ ಯಾವುದೇ ಪ್ರಜೆಯು ಅಂಚೆ ಕಛೇರಿಯಲ್ಲಿ ತನ್ನ ಖಾತೆಯನ್ನು ಸುಲಭವಾಗಿ ತೆರೆಯಬಹುದು. ಇಲ್ಲಿ ಮಿನಿಮಮ್ ಬ್ಯಾಲೆನ್ಸ್ ಆಗಿ 500 ರೂಪಾಯಿ ಕಾಯ್ದುಕೊಳ್ಳಬೇಕು. ಸದ್ಯ ಈ ಖಾತೆಗೆ ಶೇ.4ರಷ್ಟು ಬಡ್ಡಿ ನೀಡಲಾಗುತ್ತಿದೆ. ಇದು ಇತರ ಉಳಿತಾಯ ಖಾತೆಗಳಿಗಿಂತ ಹೆಚ್ಚು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Mon, 26 September 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ