AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯನ್ ತೈಲ ಖರೀದಿಸಲ್ಲ ಅಂತ ಟ್ರಂಪ್​ಗೆ ಮೋದಿ ಭರವಸೆ ಕೊಟ್ಟರಾ? ಇಲ್ಲಿದೆ ಭಾರತದ ನಿಲುವು

India clarifies its stand on buying oil from Russia: ರಷ್ಯಾದಿಂದ ಭಾರತ ತೈಲ ಖರೀದಿಸುವುದನ್ನು ನಿಲ್ಲಿಸುತ್ತದೆ ಎಂದು ನರೇಂದ್ರ ಮೋದಿ ಭರವಸೆ ಕೊಟ್ಟಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ತಮಗೆ ಗ್ರಾಹಕನ ಹಿತಾಸಕ್ತಿ ರಕ್ಷಣೆಯೇ ಪ್ರಮುಖ ಆದ್ಯತೆಯಾಗಿದೆ ಎಂದಿದೆ. ಇದೇ ವೇಳೆ, ರಷ್ಯನ್ ತೈಲ ಖರೀದಿಸುತ್ತಿರುವ ಭಾರತ ಮೂಲದ ನಯಾರಾ ಎನರ್ಜಿ ಸೇರಿದಂತೆ 90 ಸಂಸ್ಥೆಗಳು ಹಾಗೂ ವ್ಯಕ್ತಿಗಳ ಮೇಲೆ ಬ್ರಿಟನ್ ನಿಷೇಧ ಹಾಕಿದೆ.

ರಷ್ಯನ್ ತೈಲ ಖರೀದಿಸಲ್ಲ ಅಂತ ಟ್ರಂಪ್​ಗೆ ಮೋದಿ ಭರವಸೆ ಕೊಟ್ಟರಾ? ಇಲ್ಲಿದೆ ಭಾರತದ ನಿಲುವು
ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2025 | 1:31 PM

Share

ನವದೆಹಲಿ, ಅಕ್ಟೋಬರ್ 16: ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ನರೇಂದ್ರ ಮೋದಿ ತಮಗೆ ಭರವಸೆ ನೀಡಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಹೇಳಿಕೆ ಸಾಕಷ್ಟು ವೈರಲ್ ಆಗುತ್ತಿದೆ. ಈ ವಿಚಾರದ ಬಗ್ಗೆ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ಭಾರತೀಯ ಗ್ರಾಹಕನ ಹಿತಾಸಕ್ತಿಯ ರಕ್ಷಣೆಯೇ ಸರ್ಕಾರದ ಆದ್ಯತೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

‘ಭಾರತ ಸಾಕಷ್ಟು ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳುತ್ತದೆ. ಜಾಗತಿಕವಾಗಿ ಇಂಧನದ ಪರಿಸ್ಥಿತಿ ಪ್ರಕ್ಷುಬ್ದವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಗ್ರಾಹಕನ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ನಿರಂತರ ಆದ್ಯತೆಯಾಗಿದೆ. ಇದೇ ಗುರಿಯು ನಮ್ಮ ಆಮದು ನೀತಿಗಳನ್ನು ಪ್ರಭಾವಿಸಿದೆ’ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿಕೆ ನೀಡಿದೆ.

ಇದನ್ನೂ ಓದಿ: ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ, ಮೋದಿ ಭರವಸೆ ಎಂದ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಅಮೆರಿಕ ಅಧ್ಯಕ್ಷರ ಗೃಹ ಕಚೇರಿಯಾದ ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವಾಗ ಡೊನಾಲ್ಡ್ ಟ್ರಂಪ್ ಅವರು ರಷ್ಯನ್ ತೈಲ ವಿಚಾರ ಪ್ರಸ್ತಾಪಿಸಿದರು. ರಷ್ಯಾದಿಂದ ತೈಲ ಖರೀದಿಯನ್ನು ತಮ್ಮ ದೇಶ ನಿಲ್ಲಿಸುವುದಾಗಿ ನರೇಂದ್ರ ಮೋದಿ ತಮಗೆ ಭರವಸೆ ಕೊಟ್ಟರು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

‘ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವುದು ನನಗೆ ಇಷ್ಟ ಆಗುತ್ತಿಲ್ಲ. ರಷ್ಯಾದಿಂದ ತೈಲ ಪಡೆಯುವುದಿಲ್ಲ ಎಂದು ಇವತ್ತು ಅವರು ನನಗೆ ಭರವಸೆ ನೀಡಿದರು. ಕೂಡಲೇ ಅದನ್ನು ಮಾಡಲು ಆಗುವುದಿಲ್ಲ. ಸ್ವಲ್ಪ ಪ್ರಕ್ರಿಯೆಗಳು ಇರುತ್ತವೆ. ಆದರೆ, ಈ ಪ್ರಕ್ರಿಯೆ ಬಹಳ ಬೇಗ ಮುಗಿಯುತ್ತದೆ. ನಂತರ ಚೀನಾವನ್ನೂ ನಾವು ಒಪ್ಪಿಸುತ್ತೇವೆ’ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ: ಈ ವರ್ಷ ಬಿಗ್ ಕ್ರ್ಯಾಷ್; ಕರೆನ್ಸಿಗೆ ಇರಲ್ಲ ಮೌಲ್ಯ; ಚಿನ್ನ, ಬೆಳ್ಳಿ, ಬಿಟ್​ಕಾಯಿನ್​ನಂತಹ ಆಸ್ತಿಗಳಿಗೆ ಉಳಿಗಾಲ: ಕಿಯೋಸಾಕಿ

ಭಾರತದ ನಯಾರಾ ಎನರ್ಜಿ ಮೇಲೆ ಬ್ರಿಟನ್ ನಿರ್ಬಂಧ

ರಷ್ಯಾದಿಂದ ತೈಲ ಖರೀದಿ ವ್ಯವಹಾರದಲ್ಲಿ ತೊಡಗಿರುವ 90 ಸಂಸ್ಥೆಗಳುಮತ್ತು ವ್ಯಕ್ತಿಗಳ ಮೇಲೆ ಬ್ರಿಟನ್ ದೇಶ (ಯುಕೆ) ನಿಷೇಧ ಹಾಕಿದೆ. ಈ ನಿಷೇಧಿತ ಸಂಸ್ಥೆಗಳಲ್ಲಿ ಭಾರತದ ನಯಾರಾ ಎನರ್ಜಿ ಲಿಮಿಟೆಡ್ (Nayara Energy Ltd) ಕೂಡ ಸೇರಿದೆ.

ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾಗೆ ಈಗ ಅದರ ಇಂಧನವೇ ಪ್ರಮುಖ ಆದಾಯ ಮೂಲವಾಗಿದೆ. ಈ ಆದಾಯ ಮೂಲವನ್ನು ಮೊಟಕುಗೊಳಿಸಲು ಅಮೆರಿಕ ಪ್ರಯತ್ನಿಸುತ್ತಿದ್ದು, ಐರೋಪ್ಯ ರಾಷ್ಟ್ರಗಳ ಮೇಲೂ ಒತ್ತಡ ಹಾಕುತ್ತಿದೆ. ಇದರ ಬೆನ್ನಲ್ಲೇ ಬ್ರಿಟನ್ ದೇಶವು ನಯಾರಾ ಎನರ್ಜಿ ಹಾಗೂ ಇತರ ಸಂಸ್ಥೆಗಳ ಮೇಲೆ ನಿಷೇಧ ಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್