AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ

India-Russia Critical Minerals Deal: ಭಾರತ ಮತ್ತು ರಷ್ಯಾ 'ಪ್ರಮುಖ ಖನಿಜಗಳ' (ಲಿಥಿಯಂ, ಅಪರೂಪದ ಭೂ ಖನಿಜಗಳು) ಪೂರೈಕೆ ಹಾಗೂ ತಂತ್ರಜ್ಞಾನ ಹಂಚಿಕೆಗೆ ಮಹತ್ವದ ಒಪ್ಪಂದಕ್ಕೆ ಸಿದ್ಧವಾಗಿವೆ. ಇಂಧನ ಪರಿವರ್ತನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅತ್ಯಗತ್ಯವಾಗಿರುವ ಈ ಖನಿಜಗಳ ಅನ್ವೇಷಣೆ, ಹೊರತೆಗೆಯುವಿಕೆ, ಸಂಸ್ಕರಣೆಯಲ್ಲಿ ಸಹಯೋಗ ಬೆಸೆಯುವ ಮೂಲಕ ಚೀನಾ ಮೇಲಿನ ಅವಲಂಬನೆ ತಗ್ಗಿಸುವುದು ಇದರ ಮುಖ್ಯ ಉದ್ದೇಶ. ಇದು ಭಾರತದ ಆರ್ಥಿಕ ಭದ್ರತೆಗೆ ನಿರ್ಣಾಯಕ ಹೆಜ್ಜೆಯಾಗಿದೆ.

ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ
ಅಪರೂಪದ ಭೂ ಖನಿಜImage Credit source: AI/Mediaforge/TV9
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 14, 2026 | 5:13 PM

Share

ನವದೆಹಲಿ, ಮೇ 14: ಭಾರತ ಮತ್ತು ರಷ್ಯಾ ದೇಶಗಳು ‘ಪ್ರಮುಖ ಖನಿಜಗಳ’ (Critical Minerals) ಪೂರೈಕೆ ಮತ್ತು ತಂತ್ರಜ್ಞಾನ ಹಂಚಿಕೆಗೆ ಸಂಬಂಧಿಸಿದಂತೆ ಮಹತ್ವದ ಪ್ರಾಥಮಿಕ ಒಪ್ಪಂದಕ್ಕೆ ಸಹಿ ಹಾಕಲು ಸಜ್ಜಾಗಿವೆ. ಇಂಧನ ಪರಿವರ್ತನೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅತ್ಯಗತ್ಯವಾಗಿರುವ ಲಿಥಿಯಂ ಮತ್ತು ಅಪರೂಪದ ಭೂ ಖನಿಜಗಳ (Rare Earth Elements) ಪೂರೈಕೆಯನ್ನು ಖಚಿತಪಡಿಸಿಕೊಳ್ಳುವುದು ಈ ಒಪ್ಪಂದದ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

ಅಂತಿಮ ಹಂತಗಳ ಮಾತುಕತೆಯಲ್ಲಿರುವ ಈ ಒಪ್ಪಂದವು ಕೇವಲ ಖನಿಜಗಳ ಖರೀದಿಗಷ್ಟೇ ಸೀಮಿತವಾಗಿರದೆ, ಖನಿಜಗಳ ಅನ್ವೇಷಣೆ, ಹೊರತೆಗೆಯುವಿಕೆ ಮತ್ತು ಸುಧಾರಿತ ಸಂಸ್ಕರಣಾ ತಂತ್ರಜ್ಞಾನದಲ್ಲಿ ಸಹಯೋಗವನ್ನು ಒಳಗೊಂಡಿದೆ.

ಲಿಥಿಯಂ ಮತ್ತು ರೇರ್ ಅರ್ಥ್ ವಸ್ತುಳ ಮಹತ್ವ

ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ತಯಾರಿಕೆಗೆ ಲಿಥಿಯಂ ಬೇಕು. ಯುದ್ಧೋಪಕರಣಗಳು ಹಾಗೂ ಎಲೆಕ್ಟ್ರಾನಿಕ್ಸ್, ಸೋಲಾರ್ ಕ್ಷೇತ್ರಕ್ಕೆ ವಿರಳ ಖನಿಜಗಳು ಅಗತ್ಯ ಇದೆ. ಈ ವಸ್ತುಗಳ ಪೂರೈಕೆ ಪಡೆಯಲು ಭಾರತ ಈ ಒಪ್ಪಂದದ ಮೂಲಕ ಪ್ರಯತ್ನಿಸುತ್ತಿದೆ.

ಇದನ್ನೂ ಓದಿ: ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

ಭಾರತ ಮತ್ತು ಚೀನಾ, ಉಭಯ ದೇಶಗಳ ಸರ್ಕಾರಗಳು ಖಾಸಗಿ ಮತ್ತು ಸಾರ್ವಜನಿಕ ವಲಯದ ಕಂಪನಿಗಳು ಪರಸ್ಪರರ ಗಣಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹ ನೀಡಲಿವೆ. ಈಗಾಗಲೇ ಭಾರತವು ಒಪ್ಪಂದದ ಕರಡು ಪ್ರತಿಯನ್ನು ರಷ್ಯಾಕ್ಕೆ ಹಂಚಿಕೊಂಡಿದ್ದು, ಮುಂದಿನ ಎರಡು ತಿಂಗಳೊಳಗೆ ಅಧಿಕೃತವಾಗಿ ಸಹಿ ಬೀಳುವ ನಿರೀಕ್ಷೆಯಿದೆ.

ಚೀನಾ ಮೇಲಿನ ಅವಲಂಬನೆ ತಗ್ಗಿಸುವ ಗುರಿ

ಜಾಗತಿಕವಾಗಿ ಪ್ರಮುಖ ಖನಿಜಗಳ ಪೂರೈಕೆ ಮತ್ತು ಸಂಸ್ಕರಣೆಯಲ್ಲಿ ಚೀನಾ ಪ್ರಸ್ತುತ ಪ್ರಾಬಲ್ಯ ಸಾಧಿಸಿದೆ. ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಈ ಕಾರ್ಯತಂತ್ರದ ಹೆಜ್ಜೆ ಇರಿಸಿದೆ. ಈಗಾಗಲೇ ಅರ್ಜೆಂಟೀನಾ, ಆಸ್ಟ್ರೇಲಿಯಾ ಮತ್ತು ಜಪಾನ್‌ನೊಂದಿಗೆ ಭಾರತ ಇಂತಹ ಒಪ್ಪಂದಗಳನ್ನು ಮಾಡಿಕೊಂಡಿದ್ದು, ಈಗ ರಷ್ಯಾ ಈ ಪಟ್ಟಿಗೆ ಸೇರುತ್ತಿದೆ.

ರಷ್ಯಾದಲ್ಲಿನ ಖನಿಜ ಸಂಪತ್ತು ಮತ್ತು ಭಾರತದ ಆಸಕ್ತಿ

ರಷ್ಯಾವು ವಿಶ್ವದ ಅತಿದೊಡ್ಡ ಖನಿಜ ಸಂಪನ್ಮೂಲಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ರಷ್ಯಾದ ನೈಸರ್ಗಿಕ ಸಂಪನ್ಮೂಲ ಸಚಿವಾಲಯದ ಪ್ರಕಾರ, ಅಲ್ಲಿ ಸುಮಾರು 2.85 ಕೋಟಿ ಮೆಟ್ರಿಕ್ ಟನ್ ಅಪರೂಪದ ಖನಿಜಗಳ ನಿಕ್ಷೇಪವಿದೆ. ರಷ್ಯಾದ ಸರ್ಕಾರಿ ಸ್ವಾಮ್ಯದ ಪರಮಾಣು ಸಂಸ್ಥೆ ‘ರೋಸಾಟಮ್’ (Rosatom) ಜೊತೆಗೆ ತಂತ್ರಜ್ಞಾನ ಸಹಯೋಗ ಪಡೆಯಲು ಭಾರತ ಉತ್ಸುಕವಾಗಿದೆ.

ಇದನ್ನೂ ಓದಿ: ಇಂಧನ ಕಡಿಮೆ ಬಳಸಿ ಎನ್ನುತ್ತಿರೋದು ಮೋದಿ ಮಾತ್ರವಲ್ಲ, ವಿವಿಧ ದೇಶಗಳು ಜಾರಿಗೊಳಿಸಿರುವ ಸಂಗತಿಗಳೇ

2023 ರಲ್ಲಿ ಭಾರತ ಸರ್ಕಾರವು ಲಿಥಿಯಂ ಸೇರಿದಂತೆ 20 ಕ್ಕೂ ಹೆಚ್ಚು ಖನಿಜಗಳನ್ನು ದೇಶದ ಆರ್ಥಿಕ ಭದ್ರತೆ ಮತ್ತು ಇಂಧನ ಪರಿವರ್ತನೆಗೆ ‘ಅತ್ಯಗತ್ಯ’ ಎಂದು ಗುರುತಿಸಿತ್ತು. ಮಾಲಿ (Mali) ದೇಶದಲ್ಲಿ ರಷ್ಯಾದ ಕಂಪನಿ ಕೈಗೊಂಡಿದ್ದ ಲಿಥಿಯಂ ಯೋಜನೆಯಿಂದ ಹಿಂದೆ ಸರಿದಿದ್ದ ಭಾರತ, ಈಗ ರಷ್ಯಾ ಜೊತೆಗಿನ ಈ ನೇರ ಒಪ್ಪಂದದ ಮೂಲಕ ಮತ್ತೆ ಆ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ