AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ರಷ್ಯಾ ಬ್ಯುಸಿನೆಸ್ ಫೋರಂಗೆ ಮುನ್ನ ವಿಷನ್ 2030 ಒಪ್ಪಂದಕ್ಕೆ ಸಹಿ

India Russia sign economic cooperation agreement: ಭಾರತ-ರಷ್ಯಾ 23ನೇ ದ್ವಿಪಕ್ಷೀಯ ಸಭೆಗೆ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಎರಡೂ ದೇಶಗಳು 2030ರವರೆಗೆ ಆರ್ಥಿಕ ಸಹಕಾರಕ್ಕೆ ಒಪ್ಪಂದ ಮಾಡಿಕೊಂಡಿವೆ. ಮೋದಿ ಮತ್ತು ಪುಟಿನ್ ಅವರ ಭೇಟಿಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. ಮುಕ್ತ ವ್ಯಾಪಾರ ಒಪ್ಪಂದದ ಕುರಿತೂ ಮಾತುಕತೆ ಆಗಿದೆ ಎನ್ನಲಾಗಿದೆ.

ಭಾರತ-ರಷ್ಯಾ ಬ್ಯುಸಿನೆಸ್ ಫೋರಂಗೆ ಮುನ್ನ ವಿಷನ್ 2030 ಒಪ್ಪಂದಕ್ಕೆ ಸಹಿ
ನರೇಂದ್ರ ಮೋದಿ, ವ್ಲಾದಿಮಿರ್ ಪುಟಿನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 05, 2025 | 5:47 PM

Share

ನವದೆಹಲಿ, ಡಿಸೆಂಬರ್ 5: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ 2030ರವರೆಗೆ ಆರ್ಥಿಕ ಸಹಕಾರಕ್ಕೆ ಒಪ್ಪಂದ ಆಗಿದೆ. ಭಾರತ ರಷ್ಯಾ ಬ್ಯುಸಿನೆಸ್ ಫೋರಂ ಸಭೆ (India Russia Business Forum) ಆರಂಭಕ್ಕೆ ಮುನ್ನ ಈ ವಿಷನ್ 2030 ದಾಖಲೆಗೆ ಎರಡೂ ದೇಶಗಳು ಸಹಿ ಹಾಕಿವೆ.

‘ಆರ್ಥಿಕ ಸಹಕಾರವನ್ನು ಹೆಚ್ಚಿಸಲು ಇವತ್ತು ನಾವು ವಿಷನ್ 2030 ಡಾಕ್ಯುಮೆಂಟ್​ಗೆ ಸಹಿ ಹಾಕಿದ್ದೇವೆ. ನಾವಿಬ್ಬರೂ ಇವತ್ತು ಭಾರತ ರಷ್ಯಾ ಬ್ಯುಸಿನೆಸ್ ಫೋರಂನಲ್ಲಿ ಭಾಗಿಯಾಗಲಿದ್ದೇವೆ. ಈ ಪ್ಲಾಟ್​ಫಾರ್ಮ್​ನಿಂದ ನಮ್ಮ ಬ್ಯುಸಿನೆಸ್ ಸಂಬಂಧಗಳು ಬಲಪಡಬಹುದು. ಪರಸ್ಪರ ಉತ್ಪಾದನೆ ಮತ್ತು ನಾವೀನ್ಯತೆಗಳಿಗೆ ಹೊಸ ದಾರಿಗಳು ಸಿಗಬಹುದು ಎಂದು ಭಾವಿಸಿದ್ದೇನೆ. ಎರಡೂ ದೇಶಗಳು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಹೊಸ ಹೆಜ್ಜೆಗಳನ್ನು ಇಡುತ್ತಿವೆ’ ಎಂದು ಪುಟಿನ್ ಭೇಟಿ ಬಳಿಕ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ; ದೆಹಲಿಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿಕೆ

2030ರ ವಿಷನ್ ಡಾಕ್ಯುಮೆಂಟ್​ನಲ್ಲಿ ಆರ್ಥಿಕ ಸಹಕಾರ ಮುಂದುವರಿಕೆಗೆ ಒಂದು ರೋಡ್​ಮ್ಯಾಪ್ ಸಿದ್ಧವಿದೆ. ಆದ್ಯತಾ ವಲಯಗಳಲ್ಲಿ ಬೆಳವಣಿಗೆಗೆ ಪುಷ್ಟಿ ಸಿಗಬಹುದು. ಎರಡೂ ದೇಶಗಳ ನಡುವೆ ದೀರ್ಘಕಾಲೀನ ಆರ್ಥಿಕ ಸಂಬಂಧವನ್ನು ಗಟ್ಟಿಗೊಳಿಸುವ ನಿರೀಕ್ಷೆ ಇದೆ.

ಜಂಟಿಯಾಗಿ ಯೂರಿಯಾ ಉತ್ಪಾದನೆ ಮಾಡಲು ಎರಡೂ ದೇಶಗಳು ಪ್ರಯತ್ನಿಸಲಿವೆ. ಇಂಟರ್ನ್ಯಾಷನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್, ದಿ ನಾರ್ತರ್ನ್ ಸೀ ರೂಟ್, ಚೆನ್ನೈ ವ್ಲಾದಿವೋಸ್ಟೋಕ್ ಮಾರಿಟೈಮ್ ಲಿಂಕ್ ಇತ್ಯಾದಿ ಕನೆಕ್ಟಿವಿಟಿ ಕಾರಿಡಾರ್​ಗಳನ್ನು ನಿರ್ಮಿಸಲು ಯತ್ನಿಸಲಾಗುವುದು. ಇವುಗಳು ಸಪ್ಲೈ ಚೈನ್​ಗಳನ್ನು ಬಲಪಡಿಸಲು ನೆರವಾಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪುಟಿನ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ

ರಷ್ಯನ್ನರಿಗೆ ಉಚಿತ ಟೂರಿಸ್ಟ್ ವೀಸಾ

ರಷ್ಯನ್ ನಾಗರಿಕರು ಭಾರತಕ್ಕೆ ಬರುವುದಿದ್ದರೆ ಉಚಿತವಾದ 30 ದಿನ ಇ-ಟೂರಿಸ್ಟ್ ವೀಸಾ ಹಾಗೂ 30 ದಿನ ಗ್ರೂಪ್ ಟೂರಿಸ್ಟ್ ವೀಸಾ ನೀಡುವ ಒಂದು ಸೌಕರ್ಯವನ್ನು ಶೀಘ್ರದಲ್ಲೇ ನೀಡಲಾಗುವುದು ಎಂದೂ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ