AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ

ಭಾರತದ ಜಿಡಿಪಿ ಎರಡು ವರ್ಷಗಳಲ್ಲಿ ಅತ್ಯಂತ ಕಡಿಮೆಯಿದ್ದರೂ, ಆರ್ಥಿಕತೆಯೂ ವೇಗಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇತ್ತೀಚೆಗಷ್ಟೇ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತು ಅಕ್ಟೋಬರ್‌ ಬಳಿಕ ಸತತ ಎರಡು ತಿಂಗಳುಗಳ ಕಾಲ ಏರಿಕೆಯಾಗಿವೆ. ಹೀಗಾಗಿ ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆಯಾಗಿದ್ದು, 34.3 ಬಿಲಿಯನ್‌ಗೆ ತಲುಪಿದೆ ಎನ್ನಲಾಗಿದೆ.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 30, 2024 | 7:22 PM

Share

ಕಳೆದ ಎರಡು ವರ್ಷಗಳಲ್ಲಿ ದೇಶದ ಜಿಡಿಪಿಯೂ ಕುಸಿತ ಕಂಡಿದ್ದು, ಆದರೆ ದೇಶದ ಆರ್ಥಿಕತೆಯೂ ಬೆಳವಣಿಗೆಯತ್ತ ಸಾಗುತ್ತಿದೆ. ಇತ್ತ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತುಗಳು ಅಕ್ಟೋಬರ್‌ ನಿಂದ ಏರಿಕೆ ಕಂಡಿದೆ. ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆ ಕಂಡಿದ್ದು, 34.3 ಬಿಲಿಯನ್‌ಗೆ ತಲುಪಿದೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ದೇಶದ ಸೇವಾ ರಫ್ತು ಜುಲೈನಲ್ಲಿ 30.58 ಶತಕೋಟಿ ಡಾಲರ್‌ಗಳಿಂದ 30.34 ಶತಕೋಟಿ ಡಾಲರ್‌ಗೆ ಇಳಿದಿತ್ತು. ಆದಾದ ಬಳಿಕ ಸೆಪ್ಟೆಂಬರ್‌ ತಿಂಗಳಿನಲ್ಲಿ ಮತ್ತೆ 32.57 ಶತಕೋಟಿಗೆ ಏರಿತು.

ಆದರೆ ಇದೀಗ ಜಿಟಿಆರ್ ಐ ವರದಿಯಲ್ಲಿ ದೇಶದ ಸೇವಾ ರಫ್ತು 618.21 ಶತಕೋಟಿಗೆ ತಲುಪುತ್ತದೆ ಎಂದು ಉಲ್ಲೇಖಿಸಲಾಗಿದೆ. 2030 ರ ವೇಳೆಗೆ ಸೇವಾ ರಫ್ತು 613.04 ಶತಕೋಟಿಯಷ್ಟು ಸರಕು ರಫ್ತುಗಳಿಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. 2019 ರ ಹಣಕಾಸು ವರ್ಷ ಮತ್ತು 2024 ರ ಹಣಕಾಸು ವರ್ಷದ ನಡುವೆ, ಸೇವಾ ರಫ್ತುಗಳು ಐದು ವರ್ಷಗಳಲ್ಲಿ 10.5 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ (CAGR) ಏರಿಕೆಯನ್ನು ಕಂಡಿದೆ.

ಇದನ್ನೂ ಓದಿ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ವಿಮೆ! ಯೋಜನೆ ಕುರಿತಾದ ಮಾಹಿತಿ ಇಲ್ಲಿದೆ

ಇದು ಸರಕು ರಫ್ತಿನ 5.8 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ ಗಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೇ,’ಟೆಲಿಕಾಂ, ಕಂಪ್ಯೂಟರ್ ಮತ್ತು ಮಾಹಿತಿ ಸೇವೆಗಳ’ ಅಡಿಯಲ್ಲಿ ಸಾಫ್ಟ್‌ವೇರ್ ಮತ್ತು ಐಟಿ ಸೇವೆಗಳು 2024 ರಲ್ಲಿ ಭಾರತದ ಒಟ್ಟು ಸೇವಾ ರಫ್ತಿಗೆ 190.7 ಶತಕೋಟಿ ಕೊಡುಗೆ ನೀಡಿದೆ ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮೀ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​