AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೆಟ್ ಸ್ಲೆಡ್ ಮೂಲಕ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಪರೀಕ್ಷಿಸುವ ಸಾಮರ್ಥ್ಯ ಸಾಬೀತುಪಡಿಸಿದ ಭಾರತ

India among very few nations capable of advance testing of fighter jet escape system: ಫೈಟರ್ ಜೆಟ್​ ಎಸ್ಕೇಪ್ ಸಿಸ್ಟಂ ಅನ್ನು ಹೈಸ್ಪೀಡ್ ರಾಕೆಟ್ ಸ್ಲೆಡ್ ಮೂಲಕ ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಈ ಅಡ್ವಾನ್ಸ್ಡ್ ಸಿಸ್ಟಂ ಅನ್ನು ಅಭಿವೃದ್ಧಿಪಡಿಸಲು ಡಿಆರ್​ಡಿಒ ಜೊತೆಗೆ ಎಡಿಎ ಮತ್ತು ಎಚ್​ಎಎಲ್ ಸಂಸ್ಥೆಗಳೂ ಕೈ ಜೋಡಿಸಿವೆ. ರಾಕೆಟ್ ಪ್ರೊಪಲ್ಷನ್ ಸಹಾಯದಿಂದ ಎರಡು ಹಳಿಗಳ ಮೇಲೆ ಎಸ್ಕೇಪ್ ಸಿಸ್ಟಂ ಅನ್ನು ಗಂಟೆಗೆ 800 ಕಿಮೀ ವೇಗದಲ್ಲಿ ಚಲಾಯಿಸಿ ಪರೀಕ್ಷೆ ಮಾಡಲಾಯಿತು.

ರಾಕೆಟ್ ಸ್ಲೆಡ್ ಮೂಲಕ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಪರೀಕ್ಷಿಸುವ ಸಾಮರ್ಥ್ಯ ಸಾಬೀತುಪಡಿಸಿದ ಭಾರತ
ರಾಕೆಟ್ ಸ್ಲೆಡ್ ಟೆಸ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2025 | 3:12 PM

Share

ನವದೆಹಲಿ, ಡಿಸೆಂಬರ್ 3: ತುರ್ತು ಸಂದರ್ಭದಲ್ಲಿ ಫೈಟರ್ ಜೆಟ್​ನಿಂದ ಪೈಲಟ್ ಅಥವಾ ಸಿಬ್ಬಂದಿ ಹೊರ ಹಾರಲೆಂದು ವಿಶೇಷವಾದ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಇರುತ್ತದೆ. ಈ ಎಸ್ಕೇಪ್ ಸಿಸ್ಟಂನ ಪರೀಕ್ಷೆ ಮಾಡುವ ವ್ಯವಸ್ಥೆ ಮತ್ತು ಸಾಮರ್ಥ್ಯ ಕೆಲವೇ ದೇಶಗಳಿಗೆ ಇರುವುದು. ಈ ನಾಲ್ಕೈದು ದೇಶಗಳ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ. ಇಂದು ಫೈಟರ್ ಜೆಟ್​ನ ಎಸ್ಕೇಪ್ ಸಿಸ್ಟಂ ಅನ್ನು ಹೈಸ್ಪೀಡ್ ರಾಕೆಟ್ ಸ್ಲೆಡ್ ಮೂಲಕ ಪರೀಕ್ಷೆ ಮಾಡಲಾಯಿತು. ಡಿಆರ್​ಡಿಒ ನಡೆಸಿದ ಈ ಮಹತ್ವದ ಪರೀಕ್ಷೆ ಯಶಸ್ವಿಯಾಗಿದೆ.

ಸಂಪೂರ್ಣ ಸಿಬ್ಬಂದಿ ರಕ್ಷಣೆ ಸೇರಿದಂತೆ ಹಲವು ಸುರಕ್ಷತಾ ಮಾನದಂಡಗಳನ್ನು ಇಟ್ಟುಕೊಂಡು, ರಾಕೆಟ್ ಸ್ಲೆಡ್ ಟೆಸ್ಟ್ ಮೂಲಕ ಎಸ್ಕೇಪ್ ಸಿಸ್ಟಂ ಅನ್ನು ಕಠಿಣ ಪರೀಕ್ಷೆಗೆ ಒಳಪಡಿಸಲಾಯಿತು.

ಡಿಆರ್​ಡಿಒ ದೇಶೀಯವಾಗಿ ಈ ಪರೀಕ್ಷಾ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಇವತ್ತು ನಡೆಸಲಾದ ರಾಕೆಟ್ ಸ್ಲೆಡ್ ಟೆಸ್ಟ್​ನಲ್ಲಿ ಏರ್​ಕ್ರಾಫ್ಟ್ ಎಸ್ಕೆಪ್ ಸಿಸ್ಟಂ ಅನ್ನು ರಾಕೆಟ್ ಪ್ರೊಪಲ್ಷನ್ ಸಾಧನಕ್ಕೆ ಜೋಡಿಸಲಾಯಿತು. ನಂತರ ಅದನ್ನು ಎರಡು ಹಳಿಗಳ ಮೇಲೆ ನಿಯಂತ್ರಿತ ವೇಗದಲ್ಲಿ ಓಡಸಲಾಯಿತು. ಆಕಾಶದಲ್ಲಿ ಫೈಟರ್ ಜೆಟ್ ಓಡುವಷ್ಟು ವೇಗವನ್ನು ರಾಕೆಟ್ ಪ್ರೊಪಲ್ಷನ್ ನೆರವಿನಿಂದ ಎಸ್ಕೇಪ್ ಸಿಸ್ಟಂಗೆ ನೀಡಲಾಯಿತು.

ಇದನ್ನೂ ಓದಿ: New Rent Agreement Rules 2025: ಎರಡೇ ತಿಂಗಳು ಅಡ್ವಾನ್ಸ್; ಮುಂಚಿತ ನೋಟೀಸ್; ಗಮನಿಸಿ, ಹೊಸ ಬಾಡಿಗೆ ನಿಯಮಗಳು

ವರದಿಗಳ ಪ್ರಕಾರ, ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಅನ್ನು ಗಂಟೆಗೆ 800 ಕಿಮೀ ವೇಗದಲ್ಲಿ ಹಳಿಗಳ ಮೇಲೆ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಈ ಭಾರೀ ವೇಗ ನಡುವೆ ಏರ್​ಕ್ರಾಫ್ಟ್ ಕ್ಯಾನೋಪಿ ಬೇರ್ಪಡುವುದು, ನಂತರ ಎಜೆಕ್ಟ್ ಮಾಡುವುದು, ಹಾಗೂ ಪ್ಯಾರಚೂಟ್ ಮೂಲಕ ಸಿಬ್ಬಂದಿ ಸುರಕ್ಷಿತವಾಗಿ ಇಳಿಯುವುದು, ಇವೆಲ್ಲ ಕಾರ್ಯಗಳು ಯಶಸ್ವಿಯಾಗಿ ನಡೆದವು.

ಇಲ್ಲಿ ನಿಜವಾದ ಪೈಲಟ್ ಅಥವಾ ಸಿಬ್ಬಂದಿ ಇರಲಿಲ್ಲ. ಡಮ್ಮಿ ಮಾತ್ರ ಇರಿಸಲಾಗಿತ್ತು. ಆದರೆ, ಏರ್​ಕ್ರಾಫ್ಟ್​ನಿಂದ ಇಜೆಕ್ಟ್ ಆಗಿ ಪ್ಯಾರಚೂಟ್ ತೆರೆಯುವುದು ಇತ್ಯಾದಿ ಎಲ್ಲವೂ ನಿಜವಾಗಿಯೇ ನಡೆದವು.

ರಕ್ಷಣಾ ಸಚಿವಾಲಯ ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿದೆ ನೋಡಿ…

ಚಂಡೀಗಡದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (ಟಿಬಿಆರ್​ಎಲ್) ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ ಘಟಕದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿದೆ. ಡಿಆರ್​ಡಿಒದ ಈ ಪ್ರಯೋಗದಲ್ಲಿ ಎಡಿಎ, ಹೆಚ್​ಎಎಲ್ ಸಂಸ್ಥೆಗಳೂ ಕೂಡ ಕೈಜೋಡಿಸಿವೆ.

ಇದನ್ನೂ ಓದಿ: 22 ವರ್ಷದ ಕನ್ನಡಿಗ ಆದರ್ಶ್ ಹಿರೇಮಠ ವಿಶ್ವದ ಅತೀ ಕಿರಿಯ ವಯಸ್ಸಿನ ಸೆಲ್ಫ್ ಮೇಡ್ ಬಿಲಿಯನೇರ್

ಬ್ರಿಟನ್, ಅಮೆರಿಕ, ಚೀನಾ ಮತ್ತು ರಷ್ಯಾ ದೇಶಗಳು ಮಾತ್ರವೇ ಈ ಅಡ್ವಾನ್ಸ್ಡ್ ಟೆಸ್ಟಿಂಗ್ ಫೆಸಿಲಿಟಿ ಹೊಂದಿರುವುದು. ಈಗ ಭಾರತವೂ ಕೂಡ ಈ ಸಾಲಿಗೆ ಸೇರಿಕೊಂಡಿದೆ. ಭಾರತವು ಫೈಟರ್ ಜೆಟ್​ಗಳ ತಯಾರಿಕೆಯಲ್ಲಿ ಪೂರ್ಣ ಸ್ವಾವಲಂಬನೆ ಸಾಧಿಸಲು ಇದು ಮಹತ್ವದ ಅಂಶ ಎನಿಸಿದೆ. ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಅನ್ನು ಪರೀಕ್ಷಿಸಲು ವಿದೇಶಗಳ ಮೇಲೆ ಅವಲಂಬಿತವಾಗುವ ಅವಶ್ಯಕತೆ ಇರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್