AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ

India-UK FTA to come to force from July 15th: ಜಿ7 ಶೃಂಗಸಭೆಯ ವೇಳೆ ಭಾರತದ ಪ್ರಧಾನಿ ನರೇಂದ್​ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಡುವೆ ಮಾತುಕತೆ ನಡೆದಿದೆ. ಇದಾದ ಬಳಿಕ ಎರಡೂ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಜಾರಿ ಕಾರ್ಯ ಸುಗಮಗೊಂಡಿದೆ. 6.5 ಬಿಲಿಯನ್ ಡಾಲರ್ ಮೌಲ್ಯದ ಮುಕ್ತ ವ್ಯಾಪಾರ ಒಪ್ಪಂದ ಜುಲೈ 15ರಂದು ಜಾರಿಯಾಗಬಹುದು.

ಭಾರತ-ಬ್ರಿಟನ್​ನ 60,000 ಕೋಟಿ ರೂ ಮೌಲ್ಯದ ವ್ಯಾಪಾರ ಒಪ್ಪಂದ ಜುಲೈ 15ಕ್ಕೆ ಜಾರಿ ಸಾಧ್ಯತೆ
ಭಾರತ ಮತ್ತು ಬ್ರಿಟನ್ ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಕೀರ್ ಸ್ಟಾರ್ಮರ್ Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 17, 2026 | 9:48 PM

Share

ನವದೆಹಲಿ, ಜೂನ್ 17: ಭಾರತ ಮತ್ತು ಬ್ರಿಟನ್ (UK) ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement – FTA) ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ನಡುವೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಈ ಮಹತ್ವದ ಒಪ್ಪಂದವು ಜುಲೈ 15 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಹಲವಾರು ವರ್ಷಗಳ ಮಾತುಕತೆ, ಜಿ -7 ಶೃಂಗಸಭೆಯ ಚರ್ಚೆಗಳು ಮತ್ತು ಎರಡೂ ದೇಶಗಳಲ್ಲಿನ ಸರ್ಕಾರಿ ಬದಲಾವಣೆಗಳ ನಂತರ ಈ 6.5 ಬಿಲಿಯನ್ ಡಾಲರ್ (ಸುಮಾರು ₹60,000 ಕೋಟಿಗೂ ಅಧಿಕ) ಮೌಲ್ಯದ ಈ ಐತಿಹಾಸಿಕ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದೆ. ಆರಂಭಿಕ ಹಂತದಲ್ಲೇ ಇದು 6.5 ಬಿಲಿಯನ್ ಡಾಲರ್ ಮೌಲ್ಯದ ಹೆಚ್ಚುವರಿ ವ್ಯಾಪಾರ ವೃದ್ಧಿಗೆ ಕಾರಣವಾಗಲಿದ್ದು, 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸುವ ಗುರಿ ಹೊಂದಿದೆ.

ಭಾರತಕ್ಕೆ ಆಗುವ ಪ್ರಮುಖ ಲಾಭಗಳೇನು?

ಈ ಒಪ್ಪಂದದಿಂದಾಗಿ ಭಾರತದ ಪ್ರಮುಖ ರಫ್ತು ವಲಯಗಳಿಗೆ ಭಾರಿ ಉತ್ತೇಜನ ಸಿಗಲಿದೆ. ಭಾರತದಿಂದ ಬ್ರಿಟನ್‌ಗೆ ರಫ್ತಾಗುವ ಜವಳಿ (Textiles), ಸಿದ್ಧ ಉಡುಪುಗಳು, ಚರ್ಮದ ಉತ್ಪನ್ನಗಳು, ಆಭರಣಗಳು ಮತ್ತು ಕೃಷಿ ಉತ್ಪನ್ನಗಳ ಮೇಲಿನ ರಫ್ತು ಸುಂಕ ಭಾರಿ ಪ್ರಮಾಣದಲ್ಲಿ ಕಡಿತಗೊಳ್ಳಲಿದೆ. ಇದರಿಂದ ಭಾರತೀಯ ವಸ್ತುಗಳಿಗೆ ಬ್ರಿಟನ್ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಬರಲಿದೆ.

ಇದನ್ನೂ ಓದಿ: ಗಣಿತ ಪರೀಕ್ಷೆಯಲ್ಲಿ 51 ಅಂಕ ಗಳಿಸಿದ್ದ ಹುಡುಗ ಇವತ್ತು ಭಾರತದ ಅತಿದೊಡ್ಡ ಖಾಸಗಿ ಬಾಹ್ಯಾಕಾಶ ಕಂಪನಿ ಒಡೆಯ

ಭಾರತದ ಪ್ರಮುಖ ಮಾಹಿತಿ ತಂತ್ರಜ್ಞಾನ (IT) ಕಂಪನಿಗಳು ಮತ್ತು ವೃತ್ತಿಪರರಿಗೆ (ಎಂಜಿನಿಯರ್‌ಗಳು, ಆರೋಗ್ಯ ಸಿಬ್ಬಂದಿ) ಬ್ರಿಟನ್‌ನಲ್ಲಿ ಸುಲಭವಾಗಿ ಸೇವೆ ಒದಗಿಸಲು ಮತ್ತು ವೀಸಾ ಪ್ರಕ್ರಿಯೆಗಳನ್ನು ಸರಳಗೊಳಿಸಲು ಈ ಒಪ್ಪಂದ ನೆರವಾಗಲಿದೆ.

ಬ್ರಿಟನ್ (UK) ದೇಶಕ್ಕೆ ಸಿಗುವ ಅನುಕೂಲಗಳೇನು?

ಬ್ರಿಟನ್‌ನಿಂದ ಭಾರತಕ್ಕೆ ಆಮದಾಗುವ ಪ್ರಸಿದ್ಧ ಸ್ಕಾಚ್ ವಿಸ್ಕಿ (Scotch Whisky), ಪ್ರೀಮಿಯಂ ಕಾರುಗಳು ಮತ್ತು ಅತ್ಯಾಧುನಿಕ ಯಂತ್ರೋಪಕರಣಗಳ ಮೇಲಿನ ಆಮದು ಸುಂಕವನ್ನು (Import Duties) ಭಾರತವು ಹಂತಹಂತವಾಗಿ ಕಡಿಮೆ ಮಾಡಲಿದೆ.

ಬ್ರಿಟನ್‌ನ ಹಣಕಾಸು ಸೇವೆಗಳು, ಬ್ಯಾಂಕಿಂಗ್ ಮತ್ತು ವಿಮಾ ಕಂಪನಿಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಹೂಡಿಕೆ ಮಾಡಲು ಹಾದಿ ಸುಗಮವಾಗಲಿದೆ.

ರಾಜತಾಂತ್ರಿಕ ಮಹತ್ವ

ಬ್ರಿಟನ್‌ನಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾರತದೊಂದಿಗೆ ಮಾಡಿಕೊಳ್ಳುತ್ತಿರುವ ಮೊದಲ ಅತಿ ದೊಡ್ಡ ಜಾಗತಿಕ ಒಪ್ಪಂದ ಇದಾಗಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೀಸಾ ನಿಯಮಗಳು ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳ (Intellectual Property Rights) ವಿಷಯದಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಉಭಯ ನಾಯಕರು ಈ ಮಾತುಕತೆಯ ಮೂಲಕ ಯಶಸ್ವಿಯಾಗಿ ಬಗೆಹರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಐಐಎಂ ಕ್ಯಾಂಪಸ್​ನಲ್ಲಿ ಹೊಸ ಕಾಲೇಜು; ಎರಡು ಪದವಿ ಕೋರ್ಸ್​ಗಳು ಆಫರ್; ಟಾಟಾ ಟ್ರಸ್ಟ್ಸ್​ನಿಂದ ಅನುದಾನ

ಉದ್ಯೋಗ ಸೃಷ್ಟಿಯ ನಿರೀಕ್ಷೆ

ಈ ಮುಕ್ತ ವ್ಯಾಪಾರ ಒಪ್ಪಂದದಿಂದಾಗಿ ಭಾರತದಲ್ಲಿ ಉತ್ಪಾದನಾ ವಲಯ ಚುರುಕುಗೊಳ್ಳಲಿದ್ದು, ಮುಂದಿನ ಐದು ವರ್ಷಗಳಲ್ಲಿ ಲಕ್ಷಾಂತರ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ಇದು ಜಾಗತಿಕ ಪೂರೈಕೆ ಸರಪಳಿಯಲ್ಲಿ (Global Supply Chain) ಭಾರತದ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ