AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ; ಭಾರತೀಯ ಉದ್ಯಮ ವಲಯ ಹರ್ಷ

India UK sign Free Trade Agreement: ಬ್ರಿಟನ್ ದೇಶದೊಂದಿಗೆ ಭಾರತವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಭಾರತದ ಇದೂವರೆಗಿನ ವ್ಯಾಪಾರ ಒಪ್ಪಂದಗಳಲ್ಲಿ ಇದು ಅತಿದೊಡ್ಡದೆನಿಸಿದೆ. ಬ್ರಿಟನ್ ದೇಶಕ್ಕೂ ಈ ಒಪ್ಪಂದ ಬಹಳ ದೊಡ್ಡದೆನಿಸಿದೆ. ಈ ವ್ಯಾಪಾರ ಒಪ್ಪಂದದಿಂದ ಭಾರತದ ಕೃಷಿ ಹಾಗೂ ಇತರ ಹಲವು ಕ್ಷೇತ್ರಗಳಿಗೆ ವರದಾನವಾಗಿದೆ.

ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ; ಭಾರತೀಯ ಉದ್ಯಮ ವಲಯ ಹರ್ಷ
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಜೊತೆ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 24, 2025 | 4:23 PM

Share

ಲಂಡನ್, ಜುಲೈ 24: ಭಾರತ ಮತ್ತು ಬ್ರಿಟನ್ ದೇಶಗಳ ಮಧ್ಯೆ ಇಂದು ಐತಿಹಾಸಿಕವೆನಿಸುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement) ಸಹಿ ಬಿದ್ದಿದೆ. ಈ ಒಪ್ಪಂದದಿಂದ ಎರಡೂ ದೇಶಗಳ ನಡುವಿನ ವ್ಯಾಪಾರ ವಹಿವಾಟು ವಾರ್ಷಿಕವಾಗಿ 34 ಬಿಲಿಯನ್ ಡಾಲರ್​ನಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ಒಪ್ಪಂದವು ಎರಡೂ ದೇಶಗಳಿಗೂ ಮಹತ್ವದ್ದಾಗಿದೆ. ನರೇಂದ್ರ ಮೋದಿ (Narendra Modi) ಅವರ ಬ್ರಿಟನ್ ಪ್ರವಾಸದ ವೇಳೆ ಒಪ್ಪಂದಕ್ಕೆ ಅಂಕಿತ ಹಾಕಲಾಗಿದೆ. ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ (Kier Starmer) ಸಮ್ಮುಖದಲ್ಲಿ ಒಪ್ಪಂದಕ್ಕೆ ಅಧಿಕೃತ ಮುದ್ರೆ ಸಿಕ್ಕಿದೆ.

ಮುಂಬರುವ ದಿನಗಳಲ್ಲಿ ಯೂರೋಪಿಯನ್ ಯೂನಿಯನ್ ಮತ್ತು ಅಮೆರಿಕದೊಂದಿಗೆ ಭಾರತ ಟ್ರೇಡ್ ಡೀಲ್​ಗಳಿಗೆ ಸಹಿ ಹಾಕಲಿದೆ. ಭಾರತ ಇದೂವರೆಗೂ ಭಾಗಿಯಾಗಿರುವ ವ್ಯಾಪಾರ ಒಪ್ಪಂದಗಳಲ್ಲಿ ಬ್ರಿಟಿಷ ಜೊತೆಗಿನದ್ದು ಅತಿದೊಡ್ಡದು. ಈ ಒಪ್ಪಂದದಿಂದ ಭಾರತದ ಉದ್ಯಮಗಳಿಗೆ ಹೆಚ್ಚು ಅನುಕೂಲವಾಗಲಿದೆ. ಶೇ. 99 ರಷ್ಟು ಭಾರತೀಯ ಉತ್ಪನ್ನಗಳಿಗೆ ಬ್ರಿಟನ್ ಬಹುತೇಕ ಶೂನ್ಯ ತೆರಿಗೆ ವಿಧಿಸುತ್ತದೆ. ಜವಳಿಯಿಂದ ಹಿಡಿದು ಕೃಷಿ ಉತ್ಪನ್ನಗಳವರೆಗೆ ಬಹಳಷ್ಟು ಭಾರತೀಯ ರಫ್ತುಗಳಿಗೆ ಪುಷ್ಟಿ ಸಿಗಲಿದೆ.

ಇದನ್ನೂ ಓದಿ: ಸಾಲ ವಂಚನೆ ಆರೋಪ; ಅನಿಲ್ ಅಂಬಾನಿಯ ಹಲವು ಕಂಪನಿಗಳ ಮೇಲೆ ಇಡಿ ರೇಡ್

ಬ್ರಿಟನ್​ನ ಶೇ. 90ರಷ್ಟು ಉತ್ಪನ್ನಗಳಿಗೆ ಭಾರತವೂ ಟ್ಯಾರಿಫ್ ಇಳಿಸಲಿದೆ. ಶೇ. 15ರಷ್ಟಿದ್ದ ಆಮದು ಸುಂಕವನ್ನು ಶೇ. 3ಕ್ಕೆ ಇಳಿಸಲಿದೆ.

ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಸ್ವಾಗತ

ಭಾರತ ಮತ್ತು ಬ್ರಿಟನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ಭಾರತದ ಉದ್ಯಮ ವಲಯ ಸ್ವಾಗತಿಸಿದೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಈ ಒಪ್ಪಂದವನ್ನು ಭಾರತೀಯ ರೈತರಿಗೆ ಸಿಕ್ಕ ದೊಡ್ಡ ಗೆಲುವು ಎಂದು ಬಣ್ಣಿಸಿದ್ದಾರೆ.

‘ಶೇ. 95ರಷ್ಟು ಭಾರತೀಯ ಕೃಷಿ ಉತ್ಪನ್ನಗಳಿಗೆ ಸುಂಕ ರಹಿತ ರಫ್ತು ಅವಕಾಶ ಸಿಗುತ್ತದೆ. ಶೇ. 99ರಷ್ಟು ಮೀನು ಇತ್ಯಾದಿ ರಫ್ತುಗಳಿಗೆ ಶೂನ್ಯ ಸುಂಕ ಇದೆ’ ಎಂದು ವಾಣಿಜ್ಯ ಸಚಿವರು ತಮ್ಮ ಎಕ್ಸ್ ಪೋಸ್ಟ್​ವೊಂದರಲ್ಲಿ ತಿಳಿಸಿದ್ದಾರೆ.

ಭಾರತ ಮತ್ತು ಯುಕೆ ಮುಕ್ತ ವ್ಯಾಪಾರ ಒಪ್ಪಂದವು ಬ್ರಿಟನ್​ನ ಗ್ರಾಹಕರು, ಹೂಡಿಕೆದಾರರು ಹಾಗೂ ನಾವೀನ್ಯತಾ ಕೇಂದ್ರಗಳಿಗೆ (Innovative hubs) ನಮ್ಮ ಸ್ಟಾರ್ಟಪ್​ಗಳನ್ನು ತಲುಪುವುದು ಹೆಚ್ಚು ಸಲೀಸಲಾಗುತ್ತದೆ’ ಎಂದು ಅದೇ ಪೋಸ್ಟ್​ನಲ್ಲಿ ಪೀಯೂಶ್ ಗೋಯಲ್ ವಿವರಿಸಿದ್ದಾರೆ.

ಪಿಯೂಶ್ ಗೋಯಲ್ ಪೋಸ್ಟ್

ಇದನ್ನೂ ಓದಿ: ಸೋದರರ ಕಮಾಲ್; ದಿನಸಿ ಅಂಗಡಿ ಬಿಟ್ಟು 300 ಕೋಟಿ ರೂ ‘ಕೂಲ್’ ಸಾಮ್ರಾಜ್ಯ ಕಟ್ಟಿದ ಕಥೆ

ಭಾರತೀಯ ಕೈಗಾರಿಕಾ ಒಕ್ಕೂಟ ಸ್ವಾಗತ

ಭಾರತ ಮತ್ತು ಯುಕೆ ಫ್ರೀ ಟ್ರೇಡ್ ಅಗ್ರೀಮೆಂಟ್ ನಮ್ಮ ದ್ವಿಪಕ್ಷೀಯ ಸಂಬಂಧದ ಬಹಳ ದೊಡ್ಡ ಕ್ಷಣವಾಗಿದೆ ಎಂದು ಭಾರತೀಯ ಉದ್ಯಮದ ಮಹಾ ಒಕ್ಕೂಟವಾದ ಸಿಐಐನ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಚಂದ್ರಜಿತ್ ಬ್ಯಾನರ್ಜಿ ಹೇಳಿಕೆ

ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಬೇಕೆಂದು ಸಿಐಐ ಬಹಳ ದಿನಗಳಿಂದ ಸಲಹೆ ನೀಡುತ್ತಾ ಬಂದಿತ್ತು. ಈ ಒಪ್ಪಂದದಿಂದ ಇನ್ನಷ್ಟು ವ್ಯಾಪಕ ಮಾರುಕಟ್ಟೆ ಪ್ರವೇಶ ಸಿಗಲಿದೆ. ಎರಡೂ ದೇಶಗಳ ಉದ್ಯಮಗಳ ಮಧ್ಯೆ ಮುಂದಿನ ತಲೆಮಾರಿನ ಜೊತೆಗಾರಿಕೆಗಳು ಏರ್ಪಡಲು ಸಾಧ್ಯವಾಗುತ್ತದೆ ಎಂದು ಸಿಐಐ ಡೈರೆಕ್ಟರ್ ಜನರಲ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Thu, 24 July 25

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು