AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ

India-US Strengthen Energy Security: ಭಾರತ-ಅಮೆರಿಕ ಇಂಧನ ಸಹಕಾರವು ಜಾಗತಿಕ ಸವಾಲುಗಳ ಮಧ್ಯೆ ಬಲಗೊಂಡಿದೆ. ಭಾರತದ 140 ಕೋಟಿ ಜನರಿಗೆ ಕೈಗೆಟುಕುವ ಮತ್ತು ಸ್ಥಿರ ಇಂಧನ ಪೂರೈಕೆಯೇ ನಮ್ಮ ಆದ್ಯತೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು. ಇಂಧನ ವ್ಯಾಪಾರ ಗಮನಾರ್ಹವಾಗಿ ಹೆಚ್ಚಿದ್ದು, ಪಶ್ಚಿಮ ಏಷ್ಯಾ ಪ್ರಕ್ಷುಬ್ಧತೆಯ ನಡುವೆ ಅಮೆರಿಕದ ಸಹಕಾರ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯವಾಗಿದೆ.

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ
ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2026 | 3:19 PM

Share

ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ ಇಂಧನ (Energy) ವ್ಯಾಪಾರವು ಇತ್ತೀಚಿನ ದಿನಗಳಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಸಚಿವ ಎಸ್. ಜೈಶಂಕರ್ ಅವರು ಅಮೆರಿಕ ಮತ್ತು ಭಾರತದ ನಡುವಿನ ಇಂಧನ ಪಾಲುದಾರಿಕೆಯನ್ನು ಶ್ಲಾಘಿಸಿದರು. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆಯೂ ಉಭಯ ದೇಶಗಳ ಇಂಧನ ವ್ಯಾಪಾರದಲ್ಲಿ ಭಾರಿ ಏರಿಕೆ (Uptick) ಕಂಡುಬಂದಿದೆ ಎಂದರು. “ನಮ್ಮ ಸರ್ಕಾರದ ಪ್ರಮುಖ ಆದ್ಯತೆ ಮತ್ತು ಜವಾಬ್ದಾರಿಯೆಂದರೆ ಭಾರತದ 140 ಕೋಟಿ ಜನರಿಗೆ ಕೈಗೆಟುಕುವ ದರದಲ್ಲಿ ಹಾಗೂ ಸುಲಭವಾಗಿ ಇಂಧನ ಸಿಗುವಂತೆ ಮಾಡುವುದಾಗಿದೆ” ಎಂದು ಜೈಶಂಕರ್ ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

ಇದನ್ನೂ ಓದಿ: ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ

ಪಶ್ಚಿಮ ಏಷ್ಯಾ ಪ್ರಕ್ಷುಬ್ಧತೆ ಮತ್ತು ಜಾಗತಿಕ ಸವಾಲುಗಳು

ಪಶ್ಚಿಮ ಏಷ್ಯಾದಲ್ಲಿ (Middle East) ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾಗುತ್ತಿರುವ ಅಡೆತಡೆಗಳ ಕುರಿತು ಇಬ್ಬರೂ ನಾಯಕರು ಸುದೀರ್ಘವಾಗಿ ಚರ್ಚಿಸಿದರು. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಭಾರತದ ಇಂಧನ ಭದ್ರತೆಯನ್ನು ಕಾಪಾಡುವಲ್ಲಿ ಅಮೆರಿಕದೊಂದಿಗಿನ ಸಹಕಾರವು ಅತ್ಯಂತ ಪ್ರಮುಖವಾಗಿದೆ ಎಂದು ಭಾರತದ ಕಡೆಯಿಂದ ವಿವರಿಸಲಾಯಿತು.

ಕೇವಲ ಸಾಂಪ್ರದಾಯಿಕ ಇಂಧನ ಮಾತ್ರವಲ್ಲದೆ, ಪರಮಾಣು ಇಂಧನ (Nuclear Energy) ವಲಯದಲ್ಲೂ ಸಹಕಾರವನ್ನು ಹೆಚ್ಚಿಸುವ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಯಿತು. ಇದರೊಂದಿಗೆ, ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಂಬಂಧವನ್ನು ಗಟ್ಟಿಗೊಳಿಸಲು ರಕ್ಷಣಾ ಪಾಲುದಾರಿ ಚೌಕಟ್ಟು, ಮುಕ್ತ ಇಂಡೋ-ಪೆಸಿಫಿಕ್ ವಲಯದ ಸುರಕ್ಷತೆ ಮತ್ತು ಕ್ವಾಡ್ (Quad) ಒಕ್ಕೂಟದ ಮುಂದಿನ ಕಾರ್ಯಸೂಚಿಗಳ ಬಗ್ಗೆಯೂ ಚರ್ಚೆಗಳು ನಡೆದವು.

ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; ನೊಂದಣಿ, ಆದಾಯ, ಫಲಾನುಭವಿಗಳ ಸಂಖ್ಯೆ ಇತ್ಯಾದಿ ಮಾಹಿತಿ

ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವೇಗ

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರ ಭಾರತದ ಭೇಟಿಯು ಉಭಯ ದೇಶಗಳ ನಡುವಿನ ವ್ಯಾಪಾರ, ಹೂಡಿಕೆ, ಇಂಧನ ಮತ್ತು ಅತ್ಯಾಧುನಿಕ ತಂತ್ರಜ್ಞಾನ (Critical Technology) ವಲಯದ ಮೈತ್ರಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟರು.

ಜಗತ್ತಿನ ಎರಡು ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರಗಳಾದ ಭಾರತ ಮತ್ತು ಅಮೆರಿಕಗಳು ಜಾಗತಿಕ ಸವಾಲುಗಳನ್ನು ಒಟ್ಟಾಗಿ ಎದುರಿಸಲು ಬದ್ಧವಾಗಿವೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಪುನರುಚ್ಚರಿಸಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More