AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತದ ಉತ್ತಮ ಆರ್ಥಿಕ ಬೆಳವಣಿಗೆ ಸಾಧ್ಯತೆ: ಐಎಂಎಫ್ ಅಂದಾಜು

IMF projection of world economic growth: ಭಾರತದ ಆರ್ಥಿಕತೆಯು ಈ ವರ್ಷ (2026) ಶೇ. 6.5ರಷ್ಟು ಬೆಳೆಯಬಹುದು ಎಂದು ಐಎಂಎಫ್ ಅಂದಾಜು ಮಾಡಿದೆ. ಜಾಗತಿಕ ಆರ್ಥಿಕತೆ ಇದೇ ವೇಳೆ ಶೇ. 3.1ರಷ್ಟು ಹೆಚ್ಚಲಿದೆ. ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗವಾಗಿ ಬೆಳೆಯಬಹುದು ಎಂಬುದು ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ.

ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತದ ಉತ್ತಮ ಆರ್ಥಿಕ ಬೆಳವಣಿಗೆ ಸಾಧ್ಯತೆ: ಐಎಂಎಫ್ ಅಂದಾಜು
ಜಿಡಿಪಿImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 15, 2026 | 1:45 PM

Share

ನವದೆಹಲಿ, ಏಪ್ರಿಲ್ 15: ಯುದ್ಧಗಳು, ತೈಲ ಬಿಕ್ಕಟ್ಟು, ಟ್ರಂಪ್ ಟ್ಯಾರಿಫ್ ಇತ್ಯಾದಿ ಜಾಗತಿಕವಾಗಿ ಪ್ರತಿಕೂಲ ಪರಿಸ್ಥಿತಿ ನಡುವೆಯೂ ಭಾರತದ ಆರ್ಥಿಕ ಬೆಳವಣಿಗೆ (India GDP growth) ಉತ್ತಮವಾಗಿ ಸಾಗಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಅತಿವೇಗವಾಗಿ ಬೆಳೆಯುತ್ತಿದೆ. ಮುಂದೆಯೂ ಇದೇ ಹಾದಿಯಲ್ಲಿ ಭಾರತದ ಆರ್ಥಿಕತೆ ಸಾಗಲಿದೆ ಎಂದು ವಿವಿಧ ಏಜೆನ್ಸಿಗಳು ಹೇಳುತ್ತಿವೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆಯಾದ ಐಎಂಎಫ್ ಕೂಡ ಇದನ್ನು ಪುಷ್ಟೀಕರಿಸಿದೆ. ಐಎಂಎಫ್ ಪ್ರಕಾರ 2026ರಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟು ಹೆಚ್ಚಬಹುದು. ಇದು ಈ ವರ್ಷ ವಿಶ್ವದಲ್ಲೇ ಅತಿವೇಗದ ಆರ್ಥಿಕ ಬೆಳವಣಿಗೆಯಾಗಬಹುದು.

ಕಳೆದ ಕೆಲ ದಶಕಗಳಿಂದ ಸೂಪರ್ ವೇಗದಲ್ಲಿ ಬೆಳವಣಿಗೆ ದಾಖಲಿಸಿದ್ದ ಚೀನಾ ಇತ್ತೀಚಿನ ಕೆಲ ವರ್ಷಗಳಿಂದ ಮಂಕಾಗಿತ್ತು. ಈಗ ಮತ್ತೆ ಕಂಬ್ಯಾಕ್ ಮಾಡುತ್ತಿದೆ. 2026ರಲ್ಲಿ ಚೀನಾದ ಜಿಡಿಪಿ ಶೇ 4.9ರಷ್ಟು, ಹಾಗೂ 2027ರಲ್ಲಿ ಶೇ. 4.8ರಷ್ಟು ಹೆಚ್ಚಬಹುದು ಎಂದು ಐಎಂಎಫ್ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಸೆನ್ಸೆಕ್ಸ್ 1,400 ಅಂಕ ಏರಿಕೆ; ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ಲಾಭದ ಹಿಗ್ಗು; ಷೇರುಪೇಟೆ ಖುಷಿಯಲ್ಲಿರುವುದು ಯಾಕೆ?

ಜಾಗತಿಕ ಆರ್ಥಿಕ ಬೆಳವಣಿಗೆ ಶೇ. 3.1 ಮಾತ್ರ

ವಿಶ್ವಾದ್ಯಂತ ಎಲ್ಲಾ ದೇಶಗಳ ಜಿಡಿಪಿ ಬೆಳವಣಿಗೆ ಪರಿಗಣಿಸಿದರೆ 2026ರಲ್ಲಿ ಸರಾಸರಿಯಾಗಿ ಶೇ. 3.1ರಷ್ಟು ಹೆಚ್ಚಬಹುದು. 2027ರಲ್ಲಿ ಶೇ. 3.2ರಷ್ಟು ವೃದ್ಧಿಸಬಹುದು ಎನ್ನಲಾಗಿದೆ.

ಕಳೆದ ಕೆಲ ವರ್ಷಗಳಿಂದ ಇರುವ ಟ್ರೆಂಡ್​ನಂತೆ ಶ್ರೀಮಂತ ಮತ್ತು ಮುಂದುವರಿದ ದೇಶಗಳ ಜಿಡಿಪಿ ಬೆಳವಣಿಗೆ ಬಹಳ ಕಡಿಮೆ ಇರಲಿದೆ. 2026ರಲ್ಲಿ ಈ ದೇಶಗಳ ಜಿಡಿಪಿ ಶೇ 1.8ರಷ್ಟು ಮಾತ್ರ ಏರಿಕೆ ಆಗಲಿದೆ. ಭಾರತದಂತಹ ಉದಯೋನ್ಮುಖ ಆರ್ಥಿಕತೆಗಳು ಸರಾಸರಿಯಾಗಿ ಶೇ. 3.9ರಷ್ಟು ಬೆಳವಣಿಗೆ ಹೊಂದಬಹುದು ಎಂದು ಐಎಂಎಫ್ ಹೇಳಿದೆ. ಕೆಳ ಆದಾಯ ವರ್ಗದ ಅಭಿವೃದ್ಧಿಶೀಲ ದೇಶಗಳು 2026ರಲ್ಲಿ ಶೇ. 4.8 ಮತ್ತು 2027ರಲ್ಲಿ ಶೇ. 4.9ರಷ್ಟು ಜಿಡಿಪಿ ವೃದ್ಧಿ ಕಾಣಬಹುದು.

ಇದನ್ನೂ ಓದಿ: ಎನ್​ವಿಡಿಯಾದ ಭಾರತೀಯ ಉದ್ಯೋಗಿಗಳಿಗೆ ಭರ್ಜರಿ ಕೊಡಗೆ; ಒಂದು ಕೋಟಿ ರೂವರೆಗೆ ಸ್ಟಾಕ್ ಗ್ರಾಂಟ್

ಭಾರತದ ಉತ್ತಮ ಜಿಡಿಪಿ ಬೆಳವಣಿಗೆಗೆ ಏನು ಕಾರಣ?

ಭಾರತವು 2025ರಲ್ಲಿ ನಿರೀಕ್ಷೆಮೀರಿದ ಆರ್ಥಿಕ ಬೆಳವಣಿಗೆ ಕಂಡಿದೆ. ಇದರ ಸಕಾರಾತ್ಮಕ ಪರಿಣಾಮ 2026 ಮತ್ತು 2027ರಲ್ಲೂ ಮುಂದುವರಿಯಬಹುದು. ಇದು ಮೊದಲ ಪ್ರಮುಖ ಕಾರಣ.

ಎರಡನೇ ಬಲವಾದ ಕಾರಣ ಎಂದರೆ, ಭಾರತದ ಆರ್ಥಿಕತೆಯ ವೇಗಕ್ಕೆ ಹೆಚ್ಚಿನ ಪುಷ್ಟಿ ಕೊಟ್ಟಿರುವುದು ರಫ್ತಿಗಿಂತ ಹೆಚ್ಚಾಗಿ ಆಂತರಿಕ ಅನುಭೋಗ. ಅಂದರೆ, ದೇಶೀಯ ಮಾರುಕಟ್ಟೆ ಬಲವಾಗಿದೆ. ಅಂತರಿಕ ಬೇಡಿಕೆ ಹೆಚ್ಚಿದೆ. ಇದು ಆರ್ಥಿಕತೆ ಮಂದಗೊಳ್ಳದಂತೆ ನೋಡಿಕೊಳ್ಳುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ